ಮೈಸೂರು: ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಜೈಲಿನಲ್ಲಿರುವ ನಟ ದರ್ಶನ್ ಬಿಡುಗಡೆಗೆ ಅವರ ಅಭಿಮಾನಿಗಳು ಪ್ರಾರ್ಥನೆಯಲ್ಲಿ ತೊಡಗಿದ್ದಾರೆ. ಜೈಲಿನಲ್ಲಿ ದರ್ಶನ್‌ಗೆ ನೀಡಲಾಗಿರುವ ಕೈದಿ ನಂಬರ್ ಅಭಿಮಾನಿಗಳಿಗೆ ಇದೀಗ ಲಕ್ಕಿ ನಂಬರ್ ಆಗುತ್ತಿದೆ. ಸದ್ಯ ಹೀಗೊಂದು ಟ್ರೆಂಡಿಂಗ್ ಸೋಶಿಯಲ್ ಮಿಡಿಯಾದಲ್ಲಿ ಸದ್ದು ಮಾಡುತ್ತಿದೆ.
ಹೌದು. ಮೈಸೂರು ಹತ್ತಿರದ ಬನ್ನೂರಿನ ಧನುಷ್ ಎಂಬ ಅಭಿಮಾನಿ ನಟ ದರ್ಶನ್‌ಗೆ ಜೈಲಲ್ಲಿ ನೀಡಲಾಗಿರುವ ಕೈದಿ ನಂಬರ್ 6106
ನನಗೆ ಲಕ್ಕಿ ನಂಬರ್ ಎಂದಿದ್ದಾರೆ. ಜೊತೆಗೆ ಇದೇ ನಂಬರ್ ನಮ್ಮ ಗಾಡಿ ಮೇಲೆ ಇರುತ್ತದೆ ಎಂದಿದ್ದಾರೆ. ಅಷ್ಟೆ ಅಲ್ಲದೇ ಆರ್‌ಟಿಓ ಕಚೇರಿಯಲ್ಲಿ ಕೈದಿ ನಂಬರ್ 6106 ನ್ನು ರಿಜಿಸ್ಟರ್ ಮಾಡಿಸಲು ಮುಂದಾಗಿದ್ದಾರೆ.
ದರ್ಶನ್ ನೆನೆದು ಕಣ್ಣೀರಿಟ್ಟ ಅಭಿಮಾನಿ ಧನುಷ್, ದರ್ಶನ್ ಬಿಡುಗಡೆಗೆ ಹರಕೆ ಹೊತ್ತು, ನಾಡ ದೇವತೆ ಚಾಮುಂಡೇಶ್ವರಿಯಲ್ಲಿ 101 ತೆಂಗಿನಕಾಯಿ ಒಡೆಯುತ್ತೇನೆ ಎಂದು ಹರಕೆ ಹೊತ್ತಿದ್ದಾರೆ.
ನಮ್ಮ ಬಾಸ್ ಏನು ತಪ್ಪು ಮಾಡಿಲ್ಲ. ನಮ್ಮ ಬಾಸ್‌ನ್ನು ನಾವು ಬಿಟ್ಟುಕೊಡುವುದಿಲ್ಲ. ಕಾನೂನು ಎಲ್ಲರಿಗೆ ಒಂದೇ. ತಪ್ಪು ಮಾಡಿಲ್ಲ ಅಂದರೆ ರಾಜಾರೋಷವಾಗಿ ಬಿಡುಗಡೆಯಾಗಿ ಬರುತ್ತಾರೆ ಎಂದಿದ್ದಾರೆ ಅಭಿಮಾನಿ ಧನುಷ್.
ಬಾರಾಮತಿ : ಭಾರತೀಯ ರಾಜಕಾರಣದಲ್ಲಿ ಅನೇಕ ರಾಜಕೀಯ ನಾಯಕರು ವಿಮಾನ ದುರಂತದಲ್ಲಿ ಮೃತಪಟ್ಟಿದ್ದಾರೆ. ಈ ಹಿಂದೆ ವಿಮಾನ ಅಪಘಾತದಲ್ಲಿ ಯಾವೆಲ್ಲಾ…
ಮೈಸೂರು : ಹೆಬ್ಬಾಳ ಕೈಗಾರಿಕಾ ಪ್ರದೇಶದಲ್ಲಿ ಡ್ರಗ್ಸ್ ಲ್ಯಾಬ್ ಇರುವ ಶಂಕೆ ವ್ಯಕ್ತವಾಗಿದೆ. ಹೀಗಾಗಿ ರಾಷ್ಟ್ರಿಯ ಮಾದಕ ದ್ರವ್ಯ ನಿಯಂತ್ರಣ…
ಬೆಂಗಳೂರು : 25 ನಿಗಮ ಮಂಡಳಿಗಳ ಅಧ್ಯಕ್ಷರ ಅಧಿಕಾರಾವಧಿ ಮುಂದುವರಿಕೆ ಮಾಡಿ ರಾಜ್ಯ ಸರ್ಕಾರ ಆದೇಶ ಮಾಡಿದೆ. ಶಾಸಕರಿಗೆ ಮಾತ್ರ…
ಮೈಸೂರು : ಸೈಬರ್ ವಂಚಕರು ವಾಟ್ಸಾಪ್ ಕರೆ ಮೂಲಕ ಹೂಡಿದ ಡಿಜಿಟಲ್ ಅರೆಸ್ಟ್ ಕುತಂತ್ರಕ್ಕೆ ಬಲಿಯಾಗಿ ವಿವೇಕಾನಂದ ನಗರದ ಹಿರಿಯ…
ಬೆಂಗಳೂರು : ಕೆಎಸ್‌ಆರ್‌ಟಿಸಿ ಸ್ಟಾಫ್ ವರ್ಕರ್ಸ್ ಫೆಡರೇಷನ್ ಅಧ್ಯಕ್ಷ, ಕಾರ್ಮಿಕ ಮುಖಂಡ ಎಚ್.ವಿಅನಂತ್ ಸುಬ್ಬರಾವ್ (85) ಬುಧವಾರ ಸಂಜೆ ನಿಧನರಾಗಿದ್ದಾರೆ.…
ಮೈಸೂರು : ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿದ್ದ 25 ವರ್ಷದ ಗಂಡು ಜಿರಾಫೆ ‘ಯುವರಾಜ’ ಬುಧವಾರ ಬೆಳಿಗ್ಗೆ ಸಾವನ್ನಪ್ಪಿದೆ. 1987ರಲ್ಲಿ ಜರ್ಮನಿಯಿಂದ…