ರಾಜ್ಯ

ಕಾಂಗ್ರೆಸ್ ಕಾರ್ಯಕರ್ತರಿಗೆ ದಸರಾ-ದೀಪಾವಳಿ ಕೊಡುಗೆ : 38 ನಿಗಮ-ಮಂಡಳಿಗಳಿಗೆ ನೇಮಕ

ಬೆಂಗಳೂರು : ಕಳೆದ ಹಲವು ದಿನಗಳಿಂದ ಒಂದಲ್ಲೊಂದು ಕಾರಣಗಳಿಂದಾಗಿ ಮುಂದೂಡಲ್ಪಟ್ಟಿದ್ದ ನಿಗಮ ಮಂಡಳಿಗೆ ಕೊನೆಗೂ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ.

ದಸರಾ, ದೀಪಾವಳಿ ಹಬ್ಬದ ಉಡುಗೊರೆ ಎನ್ನುವಂತೆ ಒಟ್ಟು ೩೯ ನಿಗಮ ಮಂಡಳಿಗೆ ಅಧ್ಯಕ್ಷರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ. ಸಾಕಷ್ಟು ಕಳೆದು ತೂಗಿ ಪಟ್ಟಿಯನ್ನು ಸಿದ್ಧಪಡಿಸಲಾಗಿದ್ದು ಸ್ಥಳೀಯ ಸಂಸ್ಥೆಗಳ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಪಕ್ಷನಿಷ್ಠರಿಗೆ ಮಣೆ ಹಾಕಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಆಪ್ತರು ಹಾಗೂ ಪಕ್ಷಕ್ಕೆ ದುಡಿದವರನ್ನು ಪರಿಗಣಿಸಿ ನಿಗಮ ಮಂಡಳಿಗಳಲ್ಲಿ ಅಧ್ಯಕ್ಷ ಸ್ಥಾನವನ್ನು ನೀಡಲಾಗಿದೆ.

ಬಿಹಾರದ ರಾಜಧಾನಿ ಪಾಟ್ನಾದಲ್ಲಿ ಕಾಂಗ್ರೆಸ್ ಕಾರ್ಯಕಾರಿಣಿ ಸಮಿತಿ ಸಭೆ ನಡೆಯುತ್ತಿರುವ ಬೆನ್ನಲ್ಲೇ ನಿಗಮ ಮಂಡಳಿಗೆ ಅಧ್ಯಕ್ಷರನ್ನು ನೇಮಕ ಮಾಡಿರುವುದು ಹೆಚ್ಚಿನ ಮಹತ್ವ ಪಡೆದುಕೊಂಡಿದೆ.
ಮುಂಬರುವ ಗ್ರೇಟರ್ ಬೆಂಗಳೂರು ಅಥಾರಿಟಿ (ಜಿಬಿಎ), ಮಹಾನಗರ ಪಾಲಿಕೆ, ಪುರಸಭೆ ,ಪಟ್ಟಣ ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಹಾಗೂ ತಾಲ್ಲೂಕು ಪಂಚಾಯಿತಿ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು, ಪಕ್ಷಕ್ಕೆ ಹೆಚ್ಚಿನ ಸೇವೆ ಸಲ್ಲಿಸಿದ್ದವರಿಗೆ ಸ್ಥಾನ ಮಾನ ನೀಡಲಾಗಿದೆ.

ಇದನ್ನೂ ಓದಿ:-ರಕ್ಷಕ ಮಹಿಷನನ್ನು ರಾಕ್ಷಸನನ್ನಾಗಿಸಿದ ವೈದಿಕರು : ಪೆರಿಯಾರ್‌ ಚಳವಳಿಗಾರ ಮಣಿ

ನಿಗಮ ಮಂಡಳಿ ನೇಮಕ ಪಟ್ಟಿ ಇಂತಿದೆ

ಶಿವಲೀಲಾ ಕುಲಕರ್ಣಿ: ಕರ್ನಾಟಕ ನಗ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ

ಪಿ. ರಘು: ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ

ಅರುಣ್ ಪಾಟೀಲ್: ವಾಯುವ್ಯ ರಾಜ್ಯ ರಸ್ತೆ ಸಾರಿಗೆ ನಿಗಮ

ಜಗದೀಶ್ ವೊಡ್ನಾಲ್: ಜೈವಿಕ ವೈವಿಧ್ಯ ಮಂಡಳಿ

ಮುರಳಿ ಅಶೋಕ್: ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮ

ಡಾ. ಮೂರ್ತಿ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಆಯೋಗ

ಕರ್ನಲ್ ಮಲ್ಲಿಕಾರ್ಜುನ್: ಮಾಜಿ ಸೈನಿಕರ ಕಲ್ಯಾಣ ಮಂಡಳಿ

ಡಾ. ಬಿ. ಸಿ. ಮುದ್ದುಗಂಗಾಧರ್: ಕರ್ನಾಟಕ ಮಾವು ಅಭಿವೃದ್ಧಿ ಮತ್ತು ಮಾರುಕಟ್ಟೆ ನಿಗಮ

ಶರ್ಲೆಟ್ ಪಿಂಟೋ: ಕರ್ನಾಟಕ ಪರಿಸರ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿ

ಮರಿಯೋಜಿ ರಾವ್: ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮ

ಎಂ. ಎ. ಗಫೂರ್: ಕರಾವಳಿ ಅಭಿವೃದ್ಧಿ ಪ್ರಾಧಿಕಾರ

ಕೆ.ಹರೀಶ್ ಕುಮಾರ್: ಮಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ

ಎನ್.ಸಂಪಂಗಿ: ಕರ್ನಾಟಕ ಗೋದಾಮು ನಿಗಮ

ಸಯೀದ್ ಅಹಮದ್: ದೇವರಾಜ್ ಅರಸ್ ಟ್ರಕ್ ಟರ್ಮಿನಲ್

ಮಹೇಶ್: ಕಾಡುಗೊಲ್ಲ ಅಭಿವೃದ್ಧಿ ನಿಗಮ

ಮಂಜಪ್ಪ: ಬಯಲುಸೀಮೆ ಅಭಿವೃದ್ಧಿ ಮಂಡಳಿ

ಧರ್ಮಣ್ಣ : ಉಪ್ಪಾರ ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮ

ಅಗಾ ಸುಲ್ತಾನ್: ಕೇಂದ್ರ ಪರಿಹಾರ ಸಮಿತಿ

ಎಸ್.ಜಿ.ನಂಜಯ್ಯ ಮಠ: ಕರ್ನಾಟಕ ರಾಜ್ಯ ಕೈಗಾರಿಕೆ ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮ

ಆಂಜಪ್ಪ: ಕರ್ನಾಟಕ ಬೀಜ ಅಭಿವೃದ್ಧಿ ನಿಗಮ ಲಿ.,

ನೀಲಕಂಠ ಮುಲ್ಗೆ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ

ಬಾಬು ಹೊನ್ನ ನಾಯ್ಕ್ : ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಽಕಾರ, ಭದ್ರಾ

ಯುವರಾಜ್ ಕದಮ್: ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಽಕಾರ, ಮಲಪ್ರಭಾ

ಜಮಾದಾರ್ ಅನಿಲ್ ಕುಮಾರ್: ಕರ್ನಾಟಕ ತೊಗರಿ ಅಭಿವೃದ್ಧಿ ನಿಗಮ

ಪ್ರವೀಣ್ ಹರ್ವಾಲ್ : ಗುಲ್ಬರ್ಗಾ ವಿದ್ಯುತ್ ಸರಬರಾಜು ಕಂಪೆನಿ ನಿಯಮಿತ

ಮಂಜುನಾಥ್ ಪೂಜಾರಿ : ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮ

ಸೈಯದ್ ಮೆಹಮೂದ್ ಚಿಸ್ತಿ: ಕರ್ನಾಟಕ ರಾಜ್ಯ ಬೇಳೆಕಾಳುಗಳ ಅಭಿವೃದ್ಧಿ ಮಂಡಳಿ ಲಿ.,

ಎಂ.ಎಸ್.ಮುತ್ತುರಾಜ್ : ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮ

ನಂಜಪ್ಪ : ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮ

ವಿಶ್ವಾಸ ದಾಸ್ : ಕರ್ನಾಟಕ ಗಾಣಿಗ ಅಭಿವೃದ್ಧಿ ನಿಗಮ

ಆರ್. ಸತ್ಯನಾರಾಯಣ : ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ

ಗಂಗಾಧರ್ : ಕರ್ನಾಟಕ ಸಿಲ್ಕ್ ಮಾರ್ಕೆಟಿಂಗ್ ಬೋರ್ಡ್ ಲಿಮಿಟೆಡ್

ಶಿವಪ್ಪ : ಹಾಸನ ನಗರಾಭಿವೃದ್ಧಿ ಪ್ರಾಧಿಕಾರ

ಬಿ.ಎಸ್. ಕವಲಗಿ: ಕರ್ನಾಟಕ ಲೈಮ್ ಡೆವಲಪ್ಮೆಂಟ್ ಬೋರ್ಡ್

ಶ್ರೀನಿವಾಸ ವೇಲು: ಕುಂಬಾರ ಅಭಿವೃದ್ಧಿ ನಿಗಮ

ಟಿ.ಎಂ. ಶಾಹೀದ್ ತಕ್ಕಿಲ್: ಕರ್ನಾಟಕ ರಾಜ್ಯ ಕನಿಷ್ಠ ವೇತನ ಮಂಡಳಿ

ಚೇತನ್ ಕೆ. ಗೌಡ: ಕರ್ನಾಟಕ ರಾಜ್ಯ ಕೈಮಗ್ಗ ಮೂಲಸೌಕರ್ಯ ಅಭಿವೃದ್ಧಿ (ಪವರ್ ಲೂಮ್ಸ್) ಮಂಡಳಿ

ಶರಣಪ್ಪ ಸಾರದ್ಪುರ್: ಕರ್ನಾಟಕ ರಾಜ್ಯ ಕೃಷಿ ಉತ್ಪನ್ನ ಸಂಸ್ಕರಣೆ ಮತ್ತು ರಫ್ತು ಮಂಡಳಿ

ಲಾವಣ್ಯ ಬಲ್ಲಾಳ್ ಜೈನ್: ಕರ್ನಾಟಕ ಸ್ಟೇಟ್ ಸೀಡ್ ಅಂಡ್ ಆರ್ಗಾನಿಕ್ ಸರ್ಟಿಫಿಕೇಷನ್ ಏಜೆನ್ಸಿ

ಆಂದೋಲನ ಡೆಸ್ಕ್

Recent Posts

ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಲು ಯತ್ನಿಸಿದ್ದರು: ಸಿಎಂ ಡಿಕೆಶಿ ಬಾಂಬ್

ಬೆಂಗಳೂರು: ತಮ್ಮ ವಿರುದ್ಧವೂ ಸ್ಟಿಂಗ್ ಆಪರೇಷನ್ ನಡೆಸಲು ಸಂಚು ರೂಪಿಸಲಾಗಿತ್ತು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.…

9 hours ago

ಕಾವೇರಿ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್!

ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ…

10 hours ago

ಎಸ್‌ಐಆರ್‌ ವಿರುದ್ಧ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ

ಬೆಂಗಳೂರು: ದೇಶಾದ್ಯಂತ ತೀವ್ರ ವಿವಾದ ಸೃಷ್ಟಿಸಿರುವ ಮತದಾರರ ಪಟ್ಟಿ ಪರಿಷ್ಕರಣೆ(ಎಸ್‍ಐಆರ್) ಸಂಬಂಧ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‍ಕುಮಾರ್ ವಜಾ ಮತ್ತು…

11 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌ಗೆ ಮತ್ತೆ ಶಾಕ್‌

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಭೀಕರ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ಗೆ ಕಾನೂನು ಸಂಕಷ್ಟಗಳು ಮತ್ತಷ್ಟು ಬಿಗಿಯಾಗುತ್ತಿವೆ.…

12 hours ago

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ: 75ನೇ ವಯಸ್ಸಿನಲ್ಲಿ ನಿಧನ

ಮುಂಬೈ: ಬಾಲಿವುಡ್ ಚಿತ್ರರಂಗಕ್ಕೆ ಆಘಾತಕಾರಿ ಸುದ್ದಿ. ಹಿರಿಯ ನಟ ನಾನಾ ಪಾಟೇಕರ್ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು. ಗೋವಾದ…

15 hours ago

ಓದುಗರ ಪತ್ರ: ಪಿಎಚ್‌ಸಿಗಳಲ್ಲಿ ಬಿಪಿ, ಶುಗರ್ ಮಾತ್ರೆಗಳು ಸಿಗುವಂತೆ ಕ್ರಮ ಕೈಗೊಳ್ಳಿ

ಮೈಸೂರು ಜಿ ಎಚ್.ಡಿ.ಕೋಟೆ ತಾಲ್ಲೂಕಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಶುಗರ್ ಮತ್ತು ಬಿಪಿಗೆ ಹಾಗೂ ಇತರೆ ಕಾಯಿಲೆಗಳಿಗೆ ಸಂಬಂಧಪಟ್ಟ…

16 hours ago