ಬೆಂಗಳೂರು : ಕರ್ನಾಟಕದಲ್ಲಿ ಶಾಲಾ ಮಕ್ಕಳಿಗೆ ಮುಂದಿನ ಒಂದು ವಾರದಲ್ಲಿಯೇ ದಸರಾ ರಜೆ ಆರಂಭವಾಗಲಿದೆ. ಸೆಪ್ಟೆಂಬರ್ ಹಾಗೂ ಅಕ್ಟೋಬರ್‌ನಲ್ಲಿ ಒಟ್ಟು 18 ದಿನಗಳು ರಜೆ ಸಿಗಲಿದೆ.
ಈ ಬಗ್ಗೆ ಕರ್ನಾಟಕ ಶಿಕ್ಷಣ ಇಲಾಖೆಯು ಮಾಹಿತಿ ನೀಡಿದ್ದು, ಶೈಕ್ಷಣಿಕ ವರ್ಷ ಆರಂಭದಲ್ಲಿಯೇ ರಜೆ ಹಾಗೂ ಕಾರ್ಯ ಚಟುವಟಿಕೆಗಳ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ಅದರಂತೆ ದಸರಾ ರಜೆಗೆ ಸೆ.20 ರಿಂದ ಆರಂಭವಾಗಿ ಅ.7ರವರೆಗೂ ಇರಲಿದೆ.
ಶಾಲೆಗಳ ದಸರಾ ರಜೆಗಳಲ್ಲಿಯೇ ದಸರಾ ಹಬ್ಬದ ರಜೆ, ಗಾಂಧಿ ಜಯಂತಿ ರಜೆ (ಅಕ್ಟೋಬರ್ 2) ಹಾಗೂ ಒಂದು ದಿನ ವಾಲ್ಮೀಕಿ ಜಯಂತಿಯ (ಅಕ್ಟೋಬರ್ 7) ರಜೆ ಸೇರಿರಲಿದೆ.
ಇದನ್ನು ಓದಿ: ಮೈಸೂರು ದಸರಾ | ದಸರಾ ಸಂಭ್ರಮದ ಜತೆಗೆ ಸುರಕ್ಷತೆಗೂ ನಿಗಾವಹಿಸಿ : ಸೆಸ್ಕ್ ಮನವಿ
ದಸರಾ ಹಾಗೂ ಗಾಂಧಿ ಜಯಂತಿ ಹಿಂದೆ ಮುಂದೆ
2025 ರಲ್ಲಿ ದಸರಾ ಹಾಗೂ ಗಾಂಧಿ ಜಯಂತಿ ರಜೆಗಳು ಸಾಲು ಸಾಲಾಗಿ ಬಂದಿವೆ. ಗಾಂಧಿ ಜಯಂತಿ ರಾಷ್ಟ್ರೀಯ ಹಬ್ಬದ ಕಾರಣ ಶಾಲೆಗಳಲ್ಲಿ ಕಾರ್ಯಕ್ರಮ ಆಯೋಜನೆ ಮಾಡಬೇಕಾಗುತ್ತದೆ. ಆ ನಂತರ ವಾಲ್ಮೀಕಿ ಜಯಂತಿ ಅಕ್ಟೋಬರ್ ೭ ಕ್ಕೆ ಕೂಡ ಶಾಲೆಗಳಲ್ಲಿ ಕಾರ್ಯಕ್ರಮಗಳು ಇರಲಿವೆ. ಆ ದಿನ ಮಕ್ಕಳು ಶಾಲೆಗೆ ಬಂದು ಕಾರ್ಯಕ್ರಮದಲ್ಲಿ ಭಾಗಿಯಾಗಬೇಕು ಎಂದು ಶಾಲೆಗಳಲ್ಲಿ ಮನವಿ ಮಾಡಲಾಗುತ್ತದೆ.
ಅಕ್ಟೋಬರ್‌ನಲ್ಲಿ ಬ್ಯಾಂಕ್‌ಗಳಿಗೆ ಎರಡು ಶನಿವಾರ, 4 ಭಾನುವಾರ ಸೇರಿದಂತೆ ಒಟ್ಟು 10 ದಿನಗಳು ರಜೆ ಇರುತ್ತದೆ.
ಅಕ್ಟೋಬರ್‌ನಲ್ಲಿ ಮತ್ತೆ 2 ದಿನಗಳು ರಜೆ
ಅಕ್ಟೋಬರ್ ತಿಂಗಳಿನಲ್ಲಿ ಮತ್ತೆ 2 ದಿನಗಳು ರಜೆ ಇರಲಿವೆ. ದೀಪಾವಳಿ ಸಂದರ್ಭದಲ್ಲಿ ಅಕ್ಟೋಬರ್ 20 ನರಕ ಚತುರ್ದಶಿ, ಅಕ್ಟೋಬರ್ 22 ಕ್ಕೆ ಬಲಿಪಾಡ್ಯಮಿಗೆ ಸಾರ್ವಜನಿಕ ರಜೆ ಇದೆ. ಕೆಲವೆಡೆ ಅಕ್ಟೋಬರ್ 21ಕ್ಕೆ ಸಾಂದರ್ಭಿಕ ರಜೆ ನೀಡಿ ಸತತ ಮೂರು ದಿನ ರಜೆ ಕೊಡಲಾಗುತ್ತದೆ.
ಮಡಿಕೇರಿ: ವಯೋವೃದ್ಧರೊಬ್ಬರ ಮನೆಯಲ್ಲಿ ಹೋಂ ನರ್ಸಿಂಗ್(ಕೇರ್ ಟೇಕರ್) ಕೆಲಸಕ್ಕೆಂದು ಸೇರಿಕೊಂಡು ಚಿನ್ನಾಭರಣ ಹಾಗೂ ನಗದು ಕಳ್ಳತನ ಮಾಡಿದ ಆರೋಪಿಯನ್ನು ಬಂಧಿಸುವಲ್ಲಿ…
ಹನೂರು: ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಎರಡನೇ ಶನಿವಾರ ಹಾಗೂ ಯುಗಾದಿ ಜಾತ್ರಾ…
ಟೆಹ್ರಾನ್ : ಅಮೆರಿಕ-ಇಸ್ರೇಲ್ ಸಂಘರ್ಷದ ನಡುವೆಯೂ ಹೊರ್ಮುಜ್ ಜಲಸಂಧಿಯನ್ನು ಸಂಪೂರ್ಣವಾಗಿ ಮುಚ್ಚಲಾಗಿಲ್ಲ ಎಂದು ಇರಾನ್ ಸ್ಪಷ್ಟಪಡಿಸಿದೆ. ಶತ್ರು ರಾಷ್ಟ್ರ ಮತ್ತು…
ಹುಣಸೂರು : ತಾಲ್ಲೂಕಿನ ಹನಗೋಡು ಹೋಬಳಿ ವ್ಯಾಪ್ತಿ ಸೇರಿದಂತೆ ನಾಗರಹೊಳೆ ರಾಷ್ಟ್ರೀಯ ಉದ್ಯಾನದ ಅಂಚಿನ ಗ್ರಾಮಗಳಲ್ಲಿ ಸೋಮವಾರ ಸಂಜೆ ಗುಡುಗು-ಸಿಡಿಲು…
ಮೈಸೂರು : ಕುಕ್ಕರಹಳ್ಳಿ ಕೆರೆಯ ಪರಿಸರ ಸಂರಕ್ಷಣೆ ಮಾಡಬೇಕು ಎಂದು ಒತ್ತಾಯಿಸಿ ಪರಿಸರ ಸಂರಕ್ಷಿಸಿ ಹೋರಾಟ ಸಮಿತಿ ವತಿಯಿಂದ ಕುಕ್ಕರಹಳ್ಳಿ…
ಬೆಂಗಳೂರು : ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಎಂಜಿನಿಯರಿಂಗ್ ಕಾಲೇಜು, ಪಾಲಿಟೆಕ್ನಿಕ್ ಎಂಜಿನಿಯರಿಂಗ್ ಕಾಲೇಜು ಹಾಗೂ ವಿವಿಯಲ್ಲಿ ಖಾಲಿ ಇರುವ…