ಚಿಕ್ಕಮಗಳೂರು: ತಾಲ್ಲೂಕಿನ ಇನಾಂ ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾದಲ್ಲಿ ಕಳೆದ 9 ದಿನಗಳಿಂದ ನಡೆಯುತ್ತಿದ್ದ ದತ್ತ ಜಯಂತಿಗೆ ಶಾಂತಿಯುತ ತೆರೆಬಿದ್ದಿದೆ.
ದಕ್ಷಿಣ ಅಯೋಧ್ಯೆ ಎಂದೇ ಖ್ಯಾತಿಯಾಗಿರುವ ಧಾರ್ಮಿಕ ಹಾಗೂ ವಿವಾದಿತ ಪ್ರದೇಶ ದತ್ತಪೀಠದಲ್ಲಿ ಮುಂಜಾನೆಯಿಂದಲೇ ಸಾವಿರಾರು ಮಂದಿ ಭಾರೀ ಭದ್ರತೆ ನಡುವೆ ದತ್ತಪಾದುಕೆ ದರ್ಶನ ಪಡೆದು ಪುನೀತರಾದರು.
ನಾಲ್ಕು ಸಾವಿರಕ್ಕೂ ಅಧಿಕ ಪೊಲೀಸರ ಕಣ್ಗಾವಲಿನಲ್ಲಿ 15 ಸಾವಿರ ಮಂದಿ ಸಾರ್ವಜನಿಕರು ಪಾದುಕೆ ದರ್ಶನ ಪಡೆದರು.
ಸಾರ್ವಜನಿಕರು ಪಾದುಕೆ ದರ್ಶನಕ್ಕೆ ಬರುವ ವೇಳೆ ದತ್ತಪೀಠ ಸಂಪೂರ್ಣ ಹಿಂದುಗಳ ಪೀಠವಾಗಬೇಕು. ಗೋರಿಗಳನ್ನು ಸ್ಥಳಾಂತರಿಸಬೇಕು ಎಂಬ ಆಕ್ರೋಶದ ಘೋಷಣೆ ಕೂಗಿದ್ದಾರೆ. ಇದರ ನಡುವೆ ಮೊದಲ ಬಾರಿಗೆ ಶ್ರೀರಾಮಸೇನೆ, ಭಜರಂಗದಳ ಹಾಗೂ ವಿಶ್ವಹಿಂದೂ ಪರಿಷದ್ ನಾಯಕರು ಒಟ್ಟಿಗೆ ಸೇರಿ ಒಗ್ಗಟ್ಟಿನ ಮಂತ್ರ ಪಠಿಸಿದರು.
ಇನ್ನು ದತ್ತಾತ್ರೇಯರ ಗುಹೆ ಸಮೀಪದಲ್ಲಿಯೇ ಹೋಮ-ಹವನ ನಡೆದಿದ್ದು, ದತ್ತಮಾಲಾಧಾರಿಗಳು ಇರುಮುಡಿ ಹೊತ್ತು ಕಾಲ್ನಡಿಗೆಯಲ್ಲಿ ಬಂದು ದತ್ತಪಾದುಕೆ ದರ್ಶನ ಮಾಡಿದರು.
ಈ ಮೂಲಕ ಕಳೆದ 9 ದಿನಗಳಿಂದ ವ್ರತ ಆಚರಣೆಯೊಂದಿಗೆ ನಡೆದ ದತ್ತಜಯಂತಿ ಶಾಂತಿಯುತವಾಗಿ ಸಂಪನ್ನಗೊಂಡಿತು.
ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…
ಇಂದು ನಮ್ಮ ದೇಶದ ಆರೋಗ್ಯ ಕ್ಷೇತ್ರದಲ್ಲಿ ಒಂದು ‘ನಿಶ್ಯಬ್ದ ಕ್ರಾಂತಿ’ ಸಂಭವಿಸುತ್ತಿದೆ. ಒಂದು ಕಾಲದಲ್ಲಿ ಪ್ಲೇಗ್, ಕಾಲರಾದಂತಹ ಸಾಂಕ್ರಾಮಿಕ ರೋಗಗಳು…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಮಾಜಿ ಮುಖ್ಯಮಂತ್ರಿ ದೇವರಾಜ ಅರಸರನ್ನು ಇತಿಹಾಸ ಪದೇ ಪದೇ ಸ್ಮರಿಸುತ್ತದೆ. ಅಂದ ಹಾಗೆ ಮುಖ್ಯಮಂತ್ರಿಗಳಾದವರು…
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…