ಚಿಕ್ಕಮಗಳೂರು: ಅಯೋಧ್ಯೆ ರಾಮ ಮಂದಿರದ ಕರಸೇವಕರ ಕೇಸ್‌ಗೆ ಜೀವ ಕೊಟ್ಟ ಬೆನ್ನಲ್ಲೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದಿಂದ ಸಮಾಧಿ ಸೇರಿದ್ದ 2017ರಲ್ಲಿ ಚಿಕ್ಕಮಗಳೂರಿನ ಮುಳ್ಳಯ್ಯನಗಿರಿ ಗಿರಿಧಾಮದಲ್ಲಿರುವ ದತ್ತ ಪೀಠದಲ್ಲಿದ್ದ ಗೋರಿಯನ್ನು ಧ್ವಂಸಗೊಳಿಸಿದ ಪ್ರಕರಣಕ್ಕೆ ಮರುಜೀವ ನೀಡಲಾಗಿದೆ.
ಬಿಜೆಪಿ ಸರ್ಕಾರದ ಅವಧಿಯಲ್ಲಿ ಈ ಕೇಸ್ ಕ್ಲೋಸ್ ಆಗಿತ್ತು. ಇದೀಗ ರಾಜ್ಯ ಸರ್ಕಾರ ರೀ ಓಪನ್ ಮಾಡುವ ಮೂಲಕ 2017ರಲ್ಲಿ ನಡೆದ ಘಟನೆಗೆ 7 ವರ್ಷದ ಬಳಿಕ, ದತ್ತಪೀಠ ಹೋರಾಟಗಾರರ ಮೇಲಿದ್ದ ಹಳೇ ಕೇಸ್‌ಗೆ ಮರುಜೀವ ನೀಡಿದ್ದಾರೆ.
ಒಟ್ಟು 14 ಜನರ ಮೇಲೆ ಈ ಪ್ರಕರಣ ದಾಖಲಾಗಿದ್ದು, ತುಡುಕೂರು ಮಂಜು, ಶಿವರಾಜ್, ಸಂದೇಶ್, ಸುಮಂತ್, ನಾಗ, ನಾಗೇಂದ್ರ ಪೂಜಾರಿ, ಮೋಹನ್, ಅಶೋಕ್, ತೇಜು, ಶ್ರೀನಾಥ್, ಲೋಕೇಶ್, ಮಹೇಂದ್ರ, ಸಂದೀಪ್, ರಾಮು ಅವರು ಆರೋಪಿಗಳಾಗಿದ್ದಾರೆ.
ಆಪಾದಿತರು ಮುಂದಿನ ಸೋಮವಾರ ಜ.8ಕ್ಕೆ ಕೋರ್ಟ್ಗೆ ಹಾಜರಾಗುವಂತೆ ಸೂಚನೆ ನೀಡಲಾಗಿದೆ. ಚಿಕ್ಕಮಗಳೂರು ತಾಲೂಕು ಇನಾಂ ದತ್ತಾತ್ರೇಯ ಬಾಬಾ ಬುಡನ್ ದರ್ಗಾದಲ್ಲಿ ಗೋರಿಯನ್ನು ಧ್ವಂಸಗೊಳಿಸಿದ ಘಟನೆ ನಡೆದಿತ್ತು.
ಲಕ್ನೋ: ರಾಷ್ಟ್ರಪತಿ ದ್ರೌಪತಿ ಮುರ್ಮು ಅವರು ಅಯೋಧ್ಯೆಯ ರಾಮಮಂದಿರಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಉತ್ತರ ಪ್ರದೇಶದ ರಾಜ್ಯಪಾಲರಾದ…
ಬೆಂಗಳೂರು: ಉದ್ಯಮಿ ಸಿಜೆ ರಾಯ್ ಆತ್ಮಹತ್ಯೆ ಪ್ರಕರಣದ ತನಿಖೆ ಬಹುತೇಕ ಮುಕ್ತಾಯದ ಹಂತಕ್ಕೆ ಬಂದಿದ್ದು, ಮುಂದಿನ ವಾರದಲ್ಲಿ ತನಿಖಾ ತಂಡ…
ಬೆಂಗಳೂರು: ಕಚೇರಿಯಲ್ಲಿ ಮಹಿಳೆಯರೊಂದಿಗೆ ರಾಮಚಂದ್ರರಾವ್ ಅನುಚಿತ ವರ್ತನೆ ಕುರಿತ ವೈರಲ್ ವಿಡಿಯೋಗಳು ಅಸಲಿ ಎಂದು ತನಿಖಾ ತಂಡ ದೃಢಪಡಿಸಿದೆ. ಸಮವಸ್ತ್ರದಲ್ಲಿಯೇ…
ನವದೆಹಲಿ: ಮಧ್ಯ ಏಷ್ಯಾದಲ್ಲಿ ಬಿಕ್ಕಟ್ಟು ಪರಿಹಾರ ಮಾಡುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಜೊತೆ…
ಹಾಸನ: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಸಹೋದರಿ ಜವರಮ್ಮ ವಯೋಸಹಜ ಖಾಯಿಲೆಯಿಂದ ನಿಧನರಾಗಿದ್ದಾರೆ. ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು.…
ಬೆಂಗಳೂರು: ಕರ್ನಾಟಕದ ಹಲವೆಡೆ ಮುಂದಿನ ಎರಡು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬೀದರ್, ಕಲಬುರ್ಗಿ,…