Mysore
29
clear sky

Social Media

ಮಂಗಳವಾರ, 21 ಜನವರಿ 2025
Light
Dark

ದತ್ತಪೀಠ ಗೋರಿ ಧ್ವಂಸ : 14 ಹಿಂದೂ ಕಾರ್ಯಕರ್ತರಿಗೆ ಸಮನ್ಸ್‌ !

 ಚಿಕ್ಕಮಗಳೂರು : ತಾಲೂಕಿನ ಚಂದ್ರದ್ರೋಣ ಪರ್ವತದಲ್ಲಿರುವ ಇನಾಂ ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾ ಸಂಪೂರ್ಣ ಹಿಂದೂ ಪೀಠಕ್ಕಾಗಿ ಆಗ್ರಹಿಸಿ ಗೋರಿ ಧ್ವಂಸ ಮಾಡಿದ್ದ 14 ಹಿಂದೂ ಕಾರ್ಯಕರ್ತರ ಮೇಲಿನ ಕೇಸ್​ಗೆ ಚಾರ್ಜ್ ಶೀಟ್ ಸಲ್ಲಿಸಲು ಸರ್ಕಾರ ಅನುಮತಿ ನೀಡಿ ಸಮನ್ಸ್ ಜಾರಿ ಮಾಡಿದೆ.

ಸರ್ಕಾರದ ಅನುಮತಿ ಮೇರೆಗೆ 7 ವರ್ಷಗಳ ಬಳಿಕ ಪೊಲೀಸರು ದತ್ತ ಪೀಠ ಹೋರಾಟಗಾರರ ಮೇಲೆ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ. ಚಿಕ್ಕಮಗಳೂರು JMFC ನ್ಯಾಯಾಲಯದಿಂದ ಸಮನ್ಸ್ ಜಾರಿ ಆಗಿದೆ. ಈ ಹಿನ್ನೆಲೆ ಚಿಕ್ಕಮಗಳೂರು JMFC ನ್ಯಾಯಾಲಯಕ್ಕೆ 14 ಆರೋಪಿಗಳು ಇಂದು ಹಾಜರಾಗಲಿದ್ದಾರೆ.

ಸರ್ಕಾರದ ಅನುಮತಿ ಮೇರೆಗೆ 7 ವರ್ಷಗಳ ಬಳಿಕ ಪೊಲೀಸರು ಈ ಪ್ರಕರಣದಲ್ಲಿ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ. ತುಡುಕೂರು ಮಂಜು, ಶಿವರಾಜ್, ಸಂದೇಶ್, ಸುಮಂತ್, ನಾಗ, ನಾಗೇಂದ್ರ ಪೂಜಾರಿ, ಮೋಹನ್, ಅಶೋಕ್, ತೇಜು, ಶ್ರೀನಾಥ್ ಮಹೇಂದ್ರ, ಸಂದೀಪ್, ರಾಮು ಸೇರಿದಂತೆ 14 ಆರೋಪಿಗಳು ಎಂದು ಹೇಳಲಾಗುತ್ತಿದೆ.

ಡಿ.8 ರಂದು ನ್ಯಾಯಾಲಯಕ್ಕೆ ಹಾಜರಾಗುವಂತೆ ಚಿಕ್ಕಮಗಳೂರು JMFC ನ್ಯಾಯಾಲಯದಿಂದ ಸಮನ್ಸ್ ಜಾರಿ ಮಾಡಲಾಗಿದೆ. ಈ ಹಿನ್ನೆಲೆ ಚಿಕ್ಕಮಗಳೂರು JMFC ನ್ಯಾಯಾಲಯಕ್ಕೆ 14 ಆರೋಪಿಗಳು ಇಂದು ಹಾಜರಾಗಲಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ