ರಾಜ್ಯ

ಜ್ಯೋತಿಷಿ ಮಾತು ಕೇಳಿ ಹೆತ್ತ ತಾಯಿಯನ್ನೇ ಕೊಂದ ಮಗಳು !

ತುಮಕೂರು : ಜ್ಯೋತಿಷಿಯ ಮಾತು ನಂಬಿ ಮಗಳು ತಾಯಿಯನ್ನೇ ಕೊಲೆ‌ ಮಾಡಿರುವ ಘಟನೆ ತುಮಕೂರು ತಾಲೂಕಿನ ಅನುಪನಹಳ್ಳಿಯಲ್ಲಿ ನಡೆದಿದೆ.

ಪುಷ್ಪಲತಾ (55) ಮೃತ ತಾಯಿ, ಸುಚಿತ್ರಾ (35) ಕೊಲೆಗೈದ ಮಗಳು. ತಾಯಿ ಪುಷ್ಪಲತಾ ಹೆಸರಲ್ಲಿ ಒಂದು ಮನೆ ಹಾಗೂ ಬ್ಯಾಂಕ್ ಖಾತೆಯಲ್ಲಿ 40 ಲಕ್ಷ ರೂಪಾಯಿ ಇತ್ತು. ಇದನ್ನು ಲಪಟಾಯಿಸಲು ಕೊಲೆ ಮಾಡಿದ್ದಾಳೆ ಎಂದು ಆರೋಪಿಸಲಾಗಿದೆ. ಆರೋಪಿ ಸುಚಿತ್ರಾ ತುಮಕೂರು ನಗರದ ಶ್ರೀನಗರದಲ್ಲಿ ತನ್ನ ಗಂಡನೊಂದಿಗೆ ವಾಸವಿದ್ದಳು. ಸುಮಾರು ಒಂದೂವರೆ ವರ್ಷಗಳ ಹಿಂದೆ ಸುಚಿತ್ರಾಳ ತಂದೆ ನಿಧನರಾಗಿದ್ದರು. ಈ ಸಾವಿಗೆ ತಾಯಿ ಪುಷ್ಪವತಿ ಕಾರಣ ಎನ್ನುವ ಶಂಕೆಯನ್ನು ಸುಚಿತ್ರಾಗೆ ಜ್ಯೋತಿಷಿ ಹೇಳಿದ್ದನು. ಆನ್​ಲೈನ್​​ನಲ್ಲಿ ಜ್ಯೋತಿಷಿಯನ್ನ ಸಂಪರ್ಕಿಸಿದ್ದ ಸುಚಿತ್ರಾ‌‌, ತಂದೆ ಸಾವಿಗೆ ನಿಮ್ಮ ತಾಯಿ ಮಾಟ ಮಾಡಿಸಿದ್ದಾಳೆ ಎಂಬ ಜ್ಯೋತಿಷ್ಯದ ಮಾತುಗಳನ್ನು ನಂಬಿದ್ದಳು ಎನ್ನಲಾಗಿದೆ.

ತಂದೆಯ ಸಾವಿಗೆ ತಾಯಿಯೇ ಕಾರಣ ಎಂದು ಜ್ಯೋತಿಷಿ ಹೇಳಿದ್ದ ಮಾತನ್ನು ನಂಬಿದ್ದ ಸುಚಿತ್ರಾ, ತಾಯಿ ಪುಷ್ಪವತಿ ಮನೆಯೊಳಗೆ ನಿದ್ರಿಸುತ್ತಿದ್ದ ವೇಳೆ ತಲೆದಿಂಬಿನಿಂದ ಉಸಿರುಗಟ್ಟಿಸಿ ಕೊಲೆ ಮಾಡಿದ್ದಾಳೆ. ತಾಯಿಯು ಮೃತಪಟ್ಟ ನಂತರ, ಈ ಸಾವನ್ನು ಸಹಜ ಸಾವು ಎಂದು ಬಿಂಬಿಸಿ, ತ್ವರಿತವಾಗಿ ಅಂತ್ಯಕ್ರಿಯೆಗೆ ಸಿದ್ಧತೆ ಮಾಡಿಕೊಂಡಿದ್ದಳು. ಗ್ರಾಮಸ್ಥರು ಮತ್ತು ಸ್ಥಳೀಯರು ಸಾವಿನ ಬಗ್ಗೆ ಅನುಮಾನಗೊಂಡು ಪೊಲೀಸರಿಗೆ ಮಾಹಿತಿ ನೀಡಿದ್ದರಿಂದ ರಹಸ್ಯ ಬಯಲಾಯಿತು. ಕ್ಯಾತ್ಸಂದ್ರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸುಚಿತ್ರಾಳನ್ನು ಬಂಧಿಸಲಾಗಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಕಾವೇರಿ ನದಿಯಲ್ಲಿ ಆರು ಜನ ಸಾವು ; ಸಾವಿಗೀಡಾದವರೆಲ್ಲರೂ ಒಂದೇ ಕುಟುಂಬದವರು

ಕೆ.ಆರ್.ನಗರ : ತಾಲ್ಲೂಕಿನ ಹೊರವಲಯದ ಅರ್ಕೇಶ್ವರ ದೇಗುಲ ಬಳಿಯ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ಸಾವನ್ನಪ್ಪಿದ ಆರು ಮಂದಿಯೂ ಒಂದೇ…

6 hours ago

ಚಾ.ನಗರ ಆಕ್ಸಿಜನ್‌ ದುರಂತ : ಸಂತ್ರಸ್ಥರಿಗೆ ಕೊನೆಗೂ ಒಲಿದ ಸರ್ಕಾರಿ ನೌಕರಿ

ಚಾಮರಾಜನಗರ : ಕೋವಿಡ್ ವೇಳೆಯಲ್ಲಿ ನಗರದ ಜಿಲ್ಲಾಸ್ಪತ್ರೆಯಲ್ಲಿ (ಈಗ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ) ಸಂಭವಿಸಿದ್ದ ಆಕ್ಸಿಜನ್ ದುರಂತದಲ್ಲಿ 36…

7 hours ago

ಏ.20, 21 ರಂದು ಸಿಎಂ ಸಿದ್ದರಾಮಯ್ಯ ಮೈಸೂರು ಜಿಲ್ಲಾ ಪ್ರವಾಸ

ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏ.20 ಹಾಗೂ 21ರಂದು ಮೈಸೂರು ಹಾಗೂ ಚಾಮರಾಜನಗರ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. 20ರಂದು…

7 hours ago

6 ಮಂದಿ ಸಾವು ಪ್ರಕರಣ ; ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ

ಮೈಸೂರು : ಜಿಲ್ಲೆಯ ಕೆ.ಆರ್.ನಗರದ ಅರ್ಕೇಶ್ವರ ದೇಗುಲದ ಬಳಿ ಕಾವೇರಿ ನದಿಯಲ್ಲಿ ಈಜಲು ತೆರಳಿ ಮೃತಪಟ್ಟವರ ಕುಟುಂಬಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ…

7 hours ago

ದೇವರನ್ನು ನಂಬಿ, ಮೂಢನಂಬಿಕೆಗಳನ್ನು ತ್ಯಜಿಸಿ : ಸಿಎಂ ಸಿದ್ದರಾಮಯ್ಯ ಕರೆ

ರಾಣೇಬೆನ್ನೂರ : ಮಾನವ ಸಮಾಜ ನಿರ್ಮಾಣದಲ್ಲಿ ಎಲ್ಲರೂ ಪಾಲುದಾರರಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಅವರು ಇಂದು ರಾಣಿಬೆನ್ನೂರಿನ ನಿಟ್ಟೂರು…

7 hours ago

IPL 2026 | ಸೋಲಿನ ಸರಪಳಿ ಕಳಚಿದ ಕೆಕೆಆರ್‌ ; ರಾಜಸ್ಥಾನ ವಿರುದ್ಧ ಜಯ

ಕೊಲ್ಕತ್ತಾ : ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2026ರ 28ನೇ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ತಂಡವು ರಾಜಸ್ಥಾನ…

7 hours ago