ರಾಜ್ಯ

ದಾವಣಗೆರೆ ದಕ್ಷಿಣ ಉಪಚುನಾವಣೆ : ಕಣದಿಂದ ಹಿಂದೆ ಸರಿದ ಬಂಡಾಯ ಅಭ್ಯರ್ಥಿ ಸಾದಿಕ್‌

ಬೆಂಗಳೂರು : ದಾವಣಗೆರೆ ಉಪಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಸಾದಿಕ್ ಪೈಲ್ವಾನ್ ತಾವು ಕಣದಿಂದ ಹಿಂದೆ ಸರಿದಿರುವುದಾಗಿ ಘೋಷಿಸಿದ್ದಾರೆ. ಹೀಗಾಗಿ ದಾವಣಗೆರೆ ಮತ್ತು ಬಾಗಲಕೋಟೆ ಎರಡೂ ಕಡೆ ಕಾಂಗ್ರೆಸ್ ಗೆಲ್ಲಲಿದೆ ಎಂಬ ವಿಶ್ವಾಸವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ವ್ಯಕ್ತಪಡಿಸಿದರು.

ಅವರು ಇಂದು ಕ್ವೀನ್ಸ್ ರಸ್ತೆಯಲ್ಲಿರುವ ಕಾಂಗ್ರೆಸ್ ಭವನದಲ್ಲಿ ಮಾಧ್ಯಮಗೋಷ್ಠಿ ನೆಡೆಸಿ ಮಾತನಾಡಿದರು.

ಸಾದಿಕ್ ಪೈಲ್ವಾನ್ ಅವರು ನನಗೆ ಬಹಳ ವರ್ಷಗಳಿಂದ ಪರಿಚಯದವರಾಗಿದ್ದಾರೆ. ಮೈಸೂರಿನ ಕುಸ್ತಿ ಅಖಾಡಗಳಲ್ಲಿ ಅವರು ಪಾಲ್ಗೊಂಡಾಗ ಭೇಟಿಯಾಗುತ್ತಿದ್ದೆ ಎಂದು ತಿಳಿಸಿದ ಮುಖ್ಯಮಂತ್ರಿಗಳು ಅಭ್ಯರ್ಥಿಯಾಗಬೇಕೆಂದು ಬಯಸುವುದು ತಪ್ಪೇನಿಲ್ಲ ಎಂದರು.

ನಿನ್ನೆ 11 ಜನ ನಾಮಪತ್ರ ಹಿಂಪಡೆದಿದ್ದಾರೆ. ಪಕ್ಷದ ಕೋರಿಕೆ ಮೇರೆಗೆ ಸಾದಿಕ್ ಅವರು ಕಣದಿಂದ ಹಿಂದೆ ಸರಿದಿರುವುದರಿಂದ ಅವರಿಗೆ ಮುಖ್ಯಮಂತ್ರಿಗಳು ಧನ್ಯವಾದ ಹೇಳಿದರು.

ಶಾಸಕ ರಿಜ್ವಾನ್ ಅರ್ಷದ್, ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹ್ಮದ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಜೀರ್ ಅಹ್ಮದ್ ಅವರು ದಾವಣಗೆರೆಗೆ ಭೇಟಿ ನೀಡಿದ್ದರು. ಅವರು ತಲುಪುವುದು ತಡವಾದ್ದರಿಂದ ನಾಮ ಪತ್ರ ಸಲ್ಲಿಸುವುದನ್ನು ತಡೆಯಲು ಸಾಧ್ಯವಾಗಲಿಲ್ಲ.‌ ವಿಧಾನಪರಿಷತ್ ನಲ್ಲಿ ಉತ್ತರ ನೀಡಬೇಕಿದ್ದರಿಂದ ನಾನು ಖುದ್ದು ಭೇಟಿ ನೀಡಲಾಗಿಲ್ಲ ಎಂದರು.

ಪಕ್ಷದ ಕಟ್ಟಾಳು; ನಿಷ್ಠಾವಂತ ಕಾರ್ಯಕರ್ತರು
ಸಾದಿಕ್ ಪೈಲ್ವಾನ್ ಅವರು ಕಾಂಗ್ರೆಸ್ ನಲ್ಲಿ ಸುಮಾರು 40 ವರ್ಷಗಳಿಂದ ಇದ್ದು, ಪಕ್ಷದ ಕಟ್ಟಾಳು, ದಾವಣಗೆರೆಯಲ್ಲಿ 70 ಸಾವಿರ ಮುಸ್ಲಿಂ ಮತದಾರರಿದ್ದು, ಟಿಕೆಟ್ ಆಕಾಂಕ್ಷಿಗಳಾಗಿದ್ದರು. ಹೈಕಮಾಂಡ್ ಇದನ್ನು ಪರಿಶೀಲಿಸಿ, ಮೃತರಾದವರ ಕುಟುಂಬದವರಿಗೆ ಟಿಕೆಟ್ ನೀಡುವ ಪದ್ಧತಿಯಂತೆ ಸಚಿವ ಎಸ್.ಎಸ್.ಮಲ್ಲಿಕಾರ್ಜುನ ಅವರ ಪುತ್ರ ಸಮರ್ಥ್ ಅವರಿಗೆ ಟಿಕೆಟ್ ನೀಡಲಾಗಿದೆ ಎಂದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ; ವಯೋಮಿತಿ ಸಡಿಲಿಕೆ ಸ್ವಾಗತಾರ್ಹ

ರಾಜ್ಯ ಸರ್ಕಾರ ಕೆಲ ತಿಂಗಳುಗಳ ಹಿಂದೆ ಒಂದನೇ ತರಗತಿ ಪ್ರವೇಶಕ್ಕೆ ಆರು ವರ್ಷಗಳ ವಯೋಮಿತಿ ನಿಗದಿ ಮಾಡಿದ ಬಗ್ಗೆ ಕೈಗೊಂಡ…

48 mins ago

ಓದುಗರ ಪತ್ರ: ಸರ್ಕಾರದ ನಡೆ ಖಂಡನೀಯ

ಹೆಚ್.ಡಿ.ಕೋಟೆ ತಾಲ್ಲೂಕಿನ ಕೆಪಿಎಸ್ ಮ್ಯಾಗ್ನೆಟ್ ಹೆಸರಿನಲ್ಲಿ ಹಂಪಾಪುರ ಮತ್ತು ಜಿನ್ನಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯನ್ನು ಮುಚ್ಚಲು ಹೊರಟಿರುವ ಸರ್ಕಾರದ…

50 mins ago

ಓದುಗರ ಪತ್ರ: ಐಪಿಎಲ್ ಬೇಕಿತ್ತೇ?

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧ ೨೭ ನೇದಿನಕ್ಕೆ ಕಾಲಿಟ್ಟಿದೆ, ಸದ್ಯದ ಪರಿಸ್ಥಿತಿಯನ್ನು ಗಮನಿಸಿದರೆ ಅಮೆರಿಕ ತನ್ನ…

53 mins ago

ಅಭಿವೃದ್ಧಿ ಮತ್ತು ಸಂರಕ್ಷಣೆಯ ನಡುವೆ ಸಮತೋಲನ ಅವಶ್ಯ

ಬಿಆರ್‌ಟಿ ಅರಣ್ಯವು ಕರ್ನಾಟಕದ ಪ್ರಮುಖ ಜೀವವೈವಿಧ್ಯ ಪ್ರದೇಶಗಳಲ್ಲೊಂದು ಬಿಳಿಗಿರಿ ರಂಗನ ಬೆಟ್ಟ (ಬಿಆರ್‌ಟಿ) ಅರಣ್ಯವು ಕರ್ನಾಟಕದ ಪ್ರಮುಖ ಜೀವವೈವಿಧ್ಯ ಪ್ರದೇಶಗಳಲ್ಲಿ…

56 mins ago

ಮನುಷ್ಯನ ಮುಖವಾಡ ಕಳಚುವ ನಾಟಕ ‘ಪಾರ್ಟಿ’

ಮಹೇಶ ಎಲಕುಂಚವಾರ್ ಅವರ ಪ್ರಸಿದ್ಧ ಮರಾಠಿ ನಾಟಕವನ್ನು ರಂಗಕರ್ಮಿ ಪ್ರಸಾದ್ ಕುಂದೂರು ಕನ್ನಡಕ್ಕೆ ಅನುವಾದಿಸಿದ್ದಾರೆ ಮರಾಠಿಯ ಮಹೇಶ ಎಲಕುಂಚವಾರ ಅವರ…

1 hour ago

ತಣ್ಣಗೆ ಕಾಣುವ ಬಣ್ಣದ ಮಡಕೆ: ಆರೋಗ್ಯಕ್ಕೆ ಹಿತವೆ? ಅಹಿತವೇ?

‘ಆಂದೋಲನ’ ತಂಡದಿಂದ ರಿಯಾಲಿಟಿ ಚೆಕ್ ಮೈಸೂರು: ಸಾಂಸ್ಕ ತಿಕ ನಗರಿ ಮೈಸೂರಿನಲ್ಲಿ ಬೇಸಿಗೆಯ ತಾಪ ಏರುತ್ತಿದ್ದಂತೆ, ದಾಹ ತಣಿಸಿಕೊಳ್ಳಲು ಜನರು…

1 hour ago