Mysore
22
overcast clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

ಮಳೆಹಾನಿ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯದಲ್ಲಿ ಕಳೆದ ಕೆಲ ದಿನಗಳಿಂದ ಸುರಿದ ಭಾರೀ ಮಳೆಯಿಂದ ಜಿಲ್ಲೆಗಳಲ್ಲಿ ಆಗಿರುವ ಅನಾಹುತ ಕುರಿತು ಸಿಎಂ ಸಿದ್ದರಾಮಯ್ಯ ಅವರಿಂದು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡಿದ್ದಾರೆ.

ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್‌ ಸಿಇಓಗಳ ಜೊತೆ ಸಿಎಂ ಸಿದ್ದರಾಮಯ್ಯ ಅವರಿಂದು ವಿಡಿಯೋ ಸಂವಾದ ನಡೆಸಿ ಮಳೆಹಾನಿ ಬಗ್ಗೆ ಸಂಪೂರ್ಣ ವಿವರ ಪಡೆದುಕೊಂಡಿದ್ದಾರೆ.

ನೆರೆ ಪೀಡಿತ ಪ್ರದೇಶಗಳಿಗೆ ಜಿಲ್ಲಾಧಿಕಾರಿಗಳು ಸ್ವತಃ ಭೇಟಿ ನೀಡಿ ಯಾವುದೇ ಅನಾಹುತ ಸಂಭವಿಸಿದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ಸೂಚನೆ ನೀಡಿದರು.

ಅತಿವೃಷ್ಟಿಯಿಂದಾಗಿ 19 ದೊಡ್ಡ ಜಾನುವಾರುಗಳು, 66 ಸಣ್ಣ ಜಾನುವಾರುಗಳು ಸಾವನ್ನಪ್ಪಿವೆ. ಅವುಗಳಿಗೆ ತುರ್ತು ಪರಿಹಾರ ಪಾವತಿಸಲಾಗಿದೆ ಎಂದರು.

ಇನ್ನು ಮಳೆಯಿಂದ ಹಾನಿಯಾದ ಮನೆಗಳಿಗೆ ಪರಿಹಾರ ಒದಗಿಸಲು ಸೂಚನೆ ನೀಡಿದ ಅವರು, ಪೂರ್ತಿ ಹಾನಿಗೀಡಾದ ಮನೆಗೆ 1.20ಲಕ್ಷ ರೂ ಪರಿಹಾರ ನೀಡುವಂತೆ ಸೂಚನೆ ನೀಡಿದರು.

ಇನ್ನು ಹೆಚ್ಚುವರಿ ಬಿತ್ತನೆಗೆ ರೈತರಿಂದ ಬಿತ್ತನೆ ಬೀಜಕ್ಕೆ ಬೇಡಿಕೆ ಬಂದರೆ ಅದನ್ನು ಒದಗಿಸಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಇನ್ನು ದೀಪಾವಳಿ ಸಂದರ್ಭದಲ್ಲಿ ಹಸಿರು ಪಟಾಕಿಗೆ ಮಾತ್ರ ಅವಕಾಶವಿದ್ದು, ಪರಿಸರಕ್ಕೆ ಹಾನಿಯಾಗುವ ಪಟಾಕಿಗಳಿಗೆ ಯಾವುದೇ ಕಾರಣಕ್ಕೂ ಅವಕಾಶ ನೀಡಬಾರದು ಎಂದು ಅಧಿಕಾರಿಗಳಿಗೆ ಖಡಕ್‌ ಸೂಚನೆ ಕೊಟ್ಟರು.

 

 

Tags: