ಬೆಂಗಳೂರು: ರಾಜ್ಯದಲ್ಲಿ ಕಳೆದ ಕೆಲ ದಿನಗಳಿಂದ ಸುರಿದ ಭಾರೀ ಮಳೆಯಿಂದ ಜಿಲ್ಲೆಗಳಲ್ಲಿ ಆಗಿರುವ ಅನಾಹುತ ಕುರಿತು ಸಿಎಂ ಸಿದ್ದರಾಮಯ್ಯ ಅವರಿಂದು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡಿದ್ದಾರೆ.
ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಸಿಇಓಗಳ ಜೊತೆ ಸಿಎಂ ಸಿದ್ದರಾಮಯ್ಯ ಅವರಿಂದು ವಿಡಿಯೋ ಸಂವಾದ ನಡೆಸಿ ಮಳೆಹಾನಿ ಬಗ್ಗೆ ಸಂಪೂರ್ಣ ವಿವರ ಪಡೆದುಕೊಂಡಿದ್ದಾರೆ.
ನೆರೆ ಪೀಡಿತ ಪ್ರದೇಶಗಳಿಗೆ ಜಿಲ್ಲಾಧಿಕಾರಿಗಳು ಸ್ವತಃ ಭೇಟಿ ನೀಡಿ ಯಾವುದೇ ಅನಾಹುತ ಸಂಭವಿಸಿದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ಸೂಚನೆ ನೀಡಿದರು.
ಅತಿವೃಷ್ಟಿಯಿಂದಾಗಿ 19 ದೊಡ್ಡ ಜಾನುವಾರುಗಳು, 66 ಸಣ್ಣ ಜಾನುವಾರುಗಳು ಸಾವನ್ನಪ್ಪಿವೆ. ಅವುಗಳಿಗೆ ತುರ್ತು ಪರಿಹಾರ ಪಾವತಿಸಲಾಗಿದೆ ಎಂದರು.
ಇನ್ನು ಮಳೆಯಿಂದ ಹಾನಿಯಾದ ಮನೆಗಳಿಗೆ ಪರಿಹಾರ ಒದಗಿಸಲು ಸೂಚನೆ ನೀಡಿದ ಅವರು, ಪೂರ್ತಿ ಹಾನಿಗೀಡಾದ ಮನೆಗೆ 1.20ಲಕ್ಷ ರೂ ಪರಿಹಾರ ನೀಡುವಂತೆ ಸೂಚನೆ ನೀಡಿದರು.
ಇನ್ನು ಹೆಚ್ಚುವರಿ ಬಿತ್ತನೆಗೆ ರೈತರಿಂದ ಬಿತ್ತನೆ ಬೀಜಕ್ಕೆ ಬೇಡಿಕೆ ಬಂದರೆ ಅದನ್ನು ಒದಗಿಸಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಇನ್ನು ದೀಪಾವಳಿ ಸಂದರ್ಭದಲ್ಲಿ ಹಸಿರು ಪಟಾಕಿಗೆ ಮಾತ್ರ ಅವಕಾಶವಿದ್ದು, ಪರಿಸರಕ್ಕೆ ಹಾನಿಯಾಗುವ ಪಟಾಕಿಗಳಿಗೆ ಯಾವುದೇ ಕಾರಣಕ್ಕೂ ಅವಕಾಶ ನೀಡಬಾರದು ಎಂದು ಅಧಿಕಾರಿಗಳಿಗೆ ಖಡಕ್ ಸೂಚನೆ ಕೊಟ್ಟರು.
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…
ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಮಂಡ್ಯ ನಗರದಲ್ಲಿನ ವಿದ್ಯುತ್ ದೀಪಾಲಂಕಾರಕ್ಕೆ ಕೃಷಿ ಸಚಿವರು ಹಾಗೂ…
ಕೇರಳ ಮೂಲದ ಮಾಸ್ಟರ್ ಮೈಂಡ್ ಸೇರಿದಂತೆ 12 ಆರೋಪಿಗಳ ಬಂಧನ; ಮತ್ತೊಂದು ಮೋಸದ ಜಾಲ ಬಯಲಿಗೆಳೆದ ಕೊಡಗು ಜಿಲ್ಲಾ ಪೊಲೀಸರು…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಜನವರಿ…
ಮಂಡ್ಯ: ೮೭ ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕ್ಷಣಗಣನೆ ಆರಂಭವಾಗಿದೆ. ಈ ಹಿನ್ನೆಲೆ ಗುರುವಾರ ಸಂಜೆ ನಗರಕ್ಕೆ…