ಬೆಂಗಳೂರು: ಡಿಜಿಪಿ ರಾಮಚಂದ್ರ ರಾವ್ ಅವರ ರಾಸಲೀಲೆಯ ವಿಡಿಯೋ ಆಧಾರದ ಮೇಲೆ ಇಲಾಖಾ ತನಿಖೆ ನಡೆಯಲಿದ್ದು, ವರದಿ ನಂತರ ಸೂಕ್ತಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವೈರಲ್ ವಿಡಿಯೋಗಳು ಅಸಲಿ ಎಂದು ಎಫ್‍ಎಸ್ಎಲ್ ವರದಿ ಬಗ್ಗೆ ಪ್ರತಿಕ್ರಿಯಿಸಿದರು.
ಸಾಮಾಜಿಕ ಜಾಲತಾಣಗಳಲ್ಲಿ ಬೆಳಕಿಗೆ ಬಂದ ವಿಡಿಯೋಗಳು ಎಐ ಸೃಷ್ಟಿಯೆಂದು ರಾಮಚಂದ್ರರಾವ್ ಹೇಳಿದ್ದರು. ಈ ಹಿನ್ನೆಲೆಯಲ್ಲಿ ವಿಡಿಯೋಗಳನ್ನು ಎಫ್‍ಎಸ್ಎಲ್‍ಗೆ ಕಳುಹಿಸಲಾಗಿತ್ತು. ಇನ್ನೂ ಮುಂದೆ ಇಲಾಖೆ ವಿಚಾರಣೆ ನಡೆಯಲಿದೆ. ರಾಮಚಂದ್ರ ರಾವ್ ಏನು ಹೇಳುತ್ತಾರೆ ಎಂದು ಕೇಳಬೇಕಾಗುತ್ತದೆ.
ಇಲಾಖಾ ವಿಚಾರಣಾ ವರದಿ ಸರ್ಕಾರಕ್ಕೆ ಸಲ್ಲಿಕೆಯಾದ ಬಳಿಕ ಅದನ್ನು ಆಧರಿಸಿ ಸರ್ಕಾರ ತೀರ್ಮಾನ ತೆಗೆದುಕೊಳ್ಳುತ್ತದೆ ಎಂದು ಹೇಳಿದರು.





