ರಾಜ್ಯ

ಡಿಜಿಪಿ ರಾಮಚಂದ್ರರಾವ್‌ ರಾಸಲೀಲೆ ಪ್ರಕರಣ: ಸಚಿವ ಪರಮೇಶ್ವರ್‌ ಹೇಳಿದ್ದಿಷ್ಟು.!

ಬೆಂಗಳೂರು: ಡಿಜಿಪಿ ರಾಮಚಂದ್ರ ರಾವ್ ಅವರ ರಾಸಲೀಲೆಯ ವಿಡಿಯೋ ಆಧಾರದ ಮೇಲೆ ಇಲಾಖಾ ತನಿಖೆ ನಡೆಯಲಿದ್ದು, ವರದಿ ನಂತರ ಸೂಕ್ತಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.

ಈ ಕುರಿತು ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವೈರಲ್ ವಿಡಿಯೋಗಳು ಅಸಲಿ ಎಂದು ಎಫ್‍ಎಸ್ಎಲ್ ವರದಿ ಬಗ್ಗೆ ಪ್ರತಿಕ್ರಿಯಿಸಿದರು.

ಸಾಮಾಜಿಕ ಜಾಲತಾಣಗಳಲ್ಲಿ ಬೆಳಕಿಗೆ ಬಂದ ವಿಡಿಯೋಗಳು ಎಐ ಸೃಷ್ಟಿಯೆಂದು ರಾಮಚಂದ್ರರಾವ್ ಹೇಳಿದ್ದರು. ಈ ಹಿನ್ನೆಲೆಯಲ್ಲಿ ವಿಡಿಯೋಗಳನ್ನು ಎಫ್‍ಎಸ್ಎಲ್‍ಗೆ ಕಳುಹಿಸಲಾಗಿತ್ತು. ಇನ್ನೂ ಮುಂದೆ ಇಲಾಖೆ ವಿಚಾರಣೆ ನಡೆಯಲಿದೆ. ರಾಮಚಂದ್ರ ರಾವ್ ಏನು ಹೇಳುತ್ತಾರೆ ಎಂದು ಕೇಳಬೇಕಾಗುತ್ತದೆ.

ಇಲಾಖಾ ವಿಚಾರಣಾ ವರದಿ ಸರ್ಕಾರಕ್ಕೆ ಸಲ್ಲಿಕೆಯಾದ ಬಳಿಕ ಅದನ್ನು ಆಧರಿಸಿ ಸರ್ಕಾರ ತೀರ್ಮಾನ ತೆಗೆದುಕೊಳ್ಳುತ್ತದೆ ಎಂದು ಹೇಳಿದರು.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಹುಬ್ಬೆ ಹುಣಸೆ ಜಲಾಶಯಕ್ಕೂ ಕಾವೇರಿ ನೀರು : ಶಾಸಕ ಮಂಜುನಾಥ್‌ ಭರವಸೆ

ಹನೂರು : ವಿಧಾನಸಭಾ ಕ್ಷೇತ್ರದ ಪ್ರಮುಖ ಜಲಾಶಯಗಳ ಪೈಕಿ ರಾಮನ ಗುಡ್ಡ ಜಲಾಶಯಕ್ಕೆ ಕಳೆದ ಎರಡು ತಿಂಗಳ ಹಿಂದೆ ಕಾವೇರಿ…

25 seconds ago

ಕತಾರ್‌ನಲ್ಲಿ ತಾಂತ್ರಿಕ ದೋಷದಿಂದ ಹೆಲಿಕಾಪ್ಟರ್‌ ಪತನ: 6 ಜನರು ಸಾವು

ಕೈರೋ: ತಾಂತ್ರಿಕ ದೋಷದಿಂದಾಗಿ ಕತಾರ್‌ ಹೆಲಿಕಾಪ್ಟರ್‌ ಅಪಘಾತವಾಗಿ ಆರು ಜನರು ಸಾವನ್ನಪ್ಪಿದ್ದಾರೆ ಎಂದು ಸಚಿವಾಲಯ ಹೇಳಿದೆ. ಕತಾರ್‌ನ ಪ್ರಾದೇಶಿಕ ನೀರಿನಲ್ಲಿ…

56 mins ago

ಬೆಂಗಳೂರಿಗೆ ಕುಡಿಯುವ ನೀರಿನ ಸಮಸ್ಯೆ ನಿವಾರಿಸಲು ಕ್ರಮ: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಬೆಂಗಳೂರಿಗೆ ಕುಡಿಯುವ ನೀರಿನ ಸಮಸ್ಯೆಯನ್ನು ಶಾಶ್ವತವಾಗಿ ನಿವಾರಿಸಲು ತಮ್ಮ ಸರ್ಕಾರ ಕ್ರಮ ಕೈಗೊಂಡಿದ್ದು, 6ನೇ ಹಂತದ ಕಾವೇರಿ ನೀರು…

59 mins ago

ನಿಮ್ಮ ಸುಪ್ರೀಂ ಲೀಡರ್‌ ಬದುಕಿದ್ದಾರಾ?: ಅಮೇರಿಕಾ ಪ್ರಶ್ನೆ

ವಾಷಿಂಗ್ಟನ್:‌ ಸಾರ್ವಜನಿಕವಾಗಿ ಕಾಣಿಸಿಕೊಳ್ಳದ ಇರಾನ್‌ನ ನೂತನ ಸುಪ್ರೀಂ ಲೀಡರ್‌ ಮೊಜ್ತಾಬಾ ಖಮೇನಿ ಎಲ್ಲಿದ್ದಾರೆ? ಬದುಕಿದ್ದಾರಾ? ಎಂದು ಅಮೇರಿಕಾ ಪ್ರಶ್ನೆ ಮಾಡಿದೆ.…

1 hour ago

ರಸ್ತೆ ಕಾಮಗಾರಿ ಪರಿಶೀಲನೆ ನಡೆಸಿದ ಶಾಸಕ ಎಂ.ಆರ್.ಮಂಜುನಾಥ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಪಟ್ಟಣದಿಂದ ಬಂಡಳ್ಳಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಕಾಮಗಾರಿ ಪ್ರಗತಿಯಲ್ಲಿರುವುದರಿಂದ…

2 hours ago

ಪ್ರಧಾನಿ ನರೇಂದ್ರ ಮೋದಿ ಮತ್ತೊಂದು ದಾಖಲೆ: ಏನದು ಗೊತ್ತಾ?

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಭಾರತದಲ್ಲಿ ಅತಿ ಹೆಚ್ಚು ಕಾಲ ಸರ್ಕಾರದ ಮುಖ್ಯಸ್ಥರಾದ ದಾಖಲೆ ಬರೆದಿದ್ದಾರೆ. ಈ ಮೂಲಕ ಸಿಕ್ಕಿಂನ…

4 hours ago