ರಾಮನಗರ/ಕನಕಪುರ: ಲಾರಿ ಮಾಲೀಕರು ರಾಜಕೀಯ ಒತ್ತಡಕ್ಕೆ ಮಣಿದು ಏಪ್ರಿಲ್.15ರಿಂದ ಮುಷ್ಕರ ಮಾಡೋದು ಸರಿಯಲ್ಲ. ಮುಷ್ಕರ ಮಾಡೋದರಿಂದ ನಿಮಗೆಯೇ ಅನೇಕ ನಷ್ಟವಾಗುತ್ತದೆ. ಹಾಗಾಗಿ ಯಾವುದೇ ಮುಷ್ಕರ ಮಾಡಬೇಡಿ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಮನವಿ ಮಾಡಿದ್ದಾರೆ.
ಕನಕಪುರದಲ್ಲಿ ಇಂದು(ಏಪ್ರಿಲ್.6) ಡಿಸೇಲ್ ದರ ಏರಿಕೆ ಕಾರಣ ಲಾರಿ ಮುಷ್ಕರಕ್ಕೆ ಕರೆ ನೀಡಿರುವ ವಿಚಾರದ ಬಗ್ಗೆ ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಲಾರಿ ಮಾಲೀಕರು ಮುಷ್ಕರ ಮಾಡುತ್ತಾರೆಂ ಮಾಹಿತಿ ನನಗೆ ಇಲ್ಲ. ಈ ಹಿಂದೆ ಪೆಟ್ರೋಲ್ ಮತ್ತು ಡಿಸೇಲ್ ದರ ಏರಿಕೆಯಾಗಿತ್ತು. ಆಗ ಅವರು ಯಾಕೆ ಮುಷ್ಕರ ಮಾಡಲಿಲ್ಲ? ಆದರೆ ಇದೀಗ ರಾಜಕೀಯ ಕಾರಣಕ್ಕಾಗಿ ಮುಷ್ಕರ ಮಾಡುತ್ತೇವೆಂದು ಹೇಳುತ್ತಿದ್ದಾರೆ. ನಾನು ಈಗಲೂ ಅವರಲ್ಲಿ ಮನವ ಮಾಡುತ್ತೇನೆ, ರಾಜಕೀಯಕ್ಕೆ ಮಣಿದು ಲಾರಿ ಮುಷ್ಕರ ಮಾಡುವುದು ಸರಿಯಲ್ಲ ಎಂದರು.
ಲಾರಿ ಮಾಲೀಕರು ಸರ್ಕಾರದೊಂದಿಗೆ ಇರಬೇಕು. ಆದರೆ ಅವರೇ ಮುಷ್ಕರ ಮಾಡುತ್ತೀವೆಂದು ಹೇಳುತ್ತಿದ್ದಾರೆ. ಇದರಿಂದ ಅವರಿಗೆ ನಷ್ಟ ಆಗುತ್ತದೆ. ಅಲ್ಲದೇ ಒಂದು ಮುಷ್ಕರ ಮಾಡಿದರೆ ಅದರ ನಷ್ಟ ಭರಿಸಲು ನಿಮ್ಮಿಂದ ಸಾಧ್ಯವಿಲ್ಲ. ಹೀಗಾಗಿ ಯಾವುದೇ ಮುಷ್ಕರ ಮಾಡಬೇಡಿ ಎಂದು ಹೇಳಿದರು.
‘ಪ್ರತಾಪ’ಕ್ಕೆ ಸವಾಲು ಈ ನೀಲಿ ಇದು ನಮ್ಮ ಸೂರು ಆಕಾಶದ ನೀಲಿ ಇದು ನನ್ನವ್ವ ಸುತ್ತಿಕೊಂಡ ಸೀರೆಯ ನೀಲಿ ನನಗೆ…
ಪ್ರಸ್ತುತ ಆಂಡ್ರಾಯ್ಡ ಮೊಬೈಲ್‌ನಿಂದಲೇ ದಿನನಿತ್ಯದ ಕೆಲಸಗಳು ಆರಂಭವಾಗಿ ಅವುಗಳಿಂದಲೇ ದಿನ ಮುಕ್ತಾಯ ಅನ್ನುವಷ್ಟರ ಮಟ್ಟಿಗೆ ಅನಿವಾರ್ಯತೆ ನಿರ್ಮಾಣವಾಗಿದೆ. ಮೊಬೈಲ್ ಇಲ್ಲದೆ…
ಹೆಚ್. ಡಿ. ಕೋಟೆ ತಾಲ್ಲೂಕು ಕೇಂದ್ರ ಸ್ಥಳದಲ್ಲಿ ಕೆಲವು ಸರ್ಕಾರಿ ಇಲಾಖೆಗಳು ಹಾಗೂ ಹಾಸ್ಟೆಲ್‌ಗಳು ಖಾಸಗಿ ಕಟ್ಟಡಗಳಲ್ಲಿ ಕಾರ್ಯನಿರ್ವಣೆ ಮಾಡುತ್ತಿವೆ.…
ಜಿ.ಪಿ.ಬಸವರಾಜು ಯಾಂತ್ರಿಕ ಬದುಕಿನ ಹಲವು ಪ್ರಶ್ನೆಗಳಿಗೆ ಉತ್ತರಗಳನ್ನು ತೋರಿಸುವ ನಾಟಕ ‘ಅಮೃತಬಳ್ಳಿ ಕಷಾಯ’ ಮಾಯಾ ನಗರಿಯಂತೆ ಕಾಣುವ ಮುಂಬೈ ನಗರ…
ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು ಕರ್ನಾಟಕ ಪೊಲೀಸ್ ಅಕಾಡೆಮಿ ಮೈಸೂರು ಸದಾ ಜಾಗೃತವಾಗಿರುವ ಸಮಯಪಾಲನೆಯ ವಿವೇಚನೆ ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು…
ಕೆ.ಬಿ.ರಮೇಶನಾಯಕ ಉತ್ತನಹಳ್ಳಿ ಗ್ರಾಮದ ಬಳಿ ಯುವ ದಸರಾ, ಸಾತಗಳ್ಳಿ ವಿಟಿಯು ಸಮೀಪ ಕಂಬಳ ಕ್ರೀಡೆ ಆಯೋಜನೆ; ವೀಕ್ಷಕರ ಬೇಡಿಕೆಗೆ ತಕ್ಕಂತೆ…