ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷರಾಗಿ ಐದು ವರ್ಷ ಪೂರೈಕೆ ಮಾಡಿದ್ದು, ಕಾಂಗ್ರೆಸ್ ಪಕ್ಷದ ಶಾಸಕರಿಗೆ ಡಿನ್ನರ್ ಪಾರ್ಟಿ ಆಯೋಜಿಸಲು ಮುಂದಾಗಿದ್ದಾರೆ.
ರಾಜ್ಯದಲ್ಲಿ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ, ಸಿಎಂ ಬದಲಾವಣೆ ಚರ್ಚೆ ಮುಂಚೂಣಿಯಲ್ಲಿ ಆಗಾಗ ಚರ್ಚೆಯಾಗಿತ್ತು. ಈ ಮಧ್ಯೆ ಸಿಎಂ ಸಿದ್ದರಾಮಯ್ಯ ಅವರು ವಿಧಾನಸೌಧದಲ್ಲಿ ಕಾಂಗ್ರೆಸ್ ಸರ್ಕಾರದ ಅವಧಿ ಮುಗಿಯುವರೆಗೂ ನಾನೇ ಮುಖ್ಯಮಂತ್ರಿಯಾಗಿರುತ್ತೇನೆಂದು ಪುನರ್ ಉಚ್ಚಾರ ಮಾಡಿದ್ದರು. ಇದರ ಬೆನ್ನಲ್ಲೇ ಡಿ.ಕೆ.ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷರಾಗಿ ಐದು ವರ್ಷ ಪೂರೈಸಿದ ವಿಚಾರವನ್ನು ಮುಂದಿಟ್ಟುಕೊಂಡು ಶಾಸಕರಿಗೆ ಡಿನ್ನರ್ ಪಾರ್ಟಿ ಆಯೋಜಿಸಲು ಮುಂದಾಗಿರುವ ವಿಚಾರ ರಾಜ್ಯ ರಾಜಕೀಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ.
ಡಿನ್ನರ್ ಪಾರ್ಟಿ ಯಾವಾಗ?
ಕೆಪಿಸಿಸಿ ಪದಾಧಿಕಾರಿಗಳು, ಡಿಸಿಸಿ ಅಧ್ಯಕ್ಷರುಗಳು ಹಾಗೂ ಮುಂಚೂಣಿ ಘಟಕಗಳ ಅಧ್ಯಕ್ಷರಿಗೆ ಮಾರ್ಚ್.15ರಂದು ಖಾಸಗಿ ಹೋಟೆಲ್‌ನಲ್ಲಿ ಡಿನ್ನರ್ ಪಾರ್ಟಿಯನ್ನು ಆಯೋಜಿಸುವ ಸಾಧ್ಯತೆಯಿದೆ. ಅಲ್ಲದೇ ಈ ವೇಳೆ ಡಿ.ಕೆ.ಶಿವಕುಮಾರ್ ಅವರು ಇವೆಲ್ಲರ ವಿಶ್ವಾಸಗಳಿಸುವ ಚಿಂತನೆ ಮಾಡುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.