ರಾಜ್ಯ

ಕೆಪಿಸಿಸಿ ಅಧ್ಯಕ್ಷರಾಗಿ 5 ವರ್ಷ ಪೂರೈಕೆ: ಶಾಸಕರಿಗೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಡಿನ್ನರ್‌ ಪಾರ್ಟಿ

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಕೆಪಿಸಿಸಿ ಅಧ್ಯಕ್ಷರಾಗಿ ಐದು ವರ್ಷ ಪೂರೈಕೆ ಮಾಡಿದ್ದು, ಕಾಂಗ್ರೆಸ್‌ ಪಕ್ಷದ  ಶಾಸಕರಿಗೆ ಡಿನ್ನರ್‌ ಪಾರ್ಟಿ ಆಯೋಜಿಸಲು ಮುಂದಾಗಿದ್ದಾರೆ.

ರಾಜ್ಯದಲ್ಲಿ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ, ಸಿಎಂ ಬದಲಾವಣೆ ಚರ್ಚೆ ಮುಂಚೂಣಿಯಲ್ಲಿ ಆಗಾಗ ಚರ್ಚೆಯಾಗಿತ್ತು. ಈ ಮಧ್ಯೆ ಸಿಎಂ ಸಿದ್ದರಾಮಯ್ಯ ಅವರು ವಿಧಾನಸೌಧದಲ್ಲಿ ಕಾಂಗ್ರೆಸ್‌ ಸರ್ಕಾರದ ಅವಧಿ ಮುಗಿಯುವರೆಗೂ ನಾನೇ ಮುಖ್ಯಮಂತ್ರಿಯಾಗಿರುತ್ತೇನೆಂದು ಪುನರ್‌ ಉಚ್ಚಾರ ಮಾಡಿದ್ದರು.  ಇದರ ಬೆನ್ನಲ್ಲೇ ಡಿ.ಕೆ.ಶಿವಕುಮಾರ್‌ ಅವರು ಕೆಪಿಸಿಸಿ ಅಧ್ಯಕ್ಷರಾಗಿ ಐದು ವರ್ಷ ಪೂರೈಸಿದ ವಿಚಾರವನ್ನು ಮುಂದಿಟ್ಟುಕೊಂಡು ಶಾಸಕರಿಗೆ ಡಿನ್ನರ್‌ ಪಾರ್ಟಿ ಆಯೋಜಿಸಲು ಮುಂದಾಗಿರುವ ವಿಚಾರ ರಾಜ್ಯ ರಾಜಕೀಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ.

ಡಿನ್ನರ್‌ ಪಾರ್ಟಿ ಯಾವಾಗ?

ಕೆಪಿಸಿಸಿ ಪದಾಧಿಕಾರಿಗಳು, ಡಿಸಿಸಿ ಅಧ್ಯಕ್ಷರುಗಳು ಹಾಗೂ ಮುಂಚೂಣಿ ಘಟಕಗಳ ಅಧ್ಯಕ್ಷರಿಗೆ ಮಾರ್ಚ್‌.15ರಂದು ಖಾಸಗಿ ಹೋಟೆಲ್‌ನಲ್ಲಿ ಡಿನ್ನರ್‌ ಪಾರ್ಟಿಯನ್ನು ಆಯೋಜಿಸುವ ಸಾಧ್ಯತೆಯಿದೆ. ಅಲ್ಲದೇ ಈ ವೇಳೆ ಡಿ.ಕೆ.ಶಿವಕುಮಾರ್‌ ಅವರು ಇವೆಲ್ಲರ ವಿಶ್ವಾಸಗಳಿಸುವ ಚಿಂತನೆ ಮಾಡುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

 

ಅರ್ಚನ ಎಸ್‌ ಎಸ್

Recent Posts

ಕಾಂತಾರಾ ಮಿಮಿಕ್ರಿ ವಿವಾದ : ಚಾಮುಂಡಿ ಬೆಟ್ಟಕ್ಕೆ ಭೇಡಿ ನೀಡಲಿದ್ದಾರೆ ನಟ ರಣವೀರ್‌ ಸಿಂಗ್‌

ಮುಂಬೈ : ‘ಕಾಂತಾರ’ ಸಿನಿಮಾದಲ್ಲಿ ದೈವದ ಕುರಿತು ವೇದಿಕೆ ಮೇಲೆ ಅನುಕರಣೆ ಮಾಡಿ ‘ಫೀಮೇಲ್ ಗೋಸ್ಟ್’ ಎಂದು ಕರೆದು ವಿವಾದಕ್ಕೆ…

52 mins ago

ಉತ್ತರ ಸಿಕ್ಕಿಂನಲ್ಲಿ ಭೂಕುಸಿತ : ಚುಂಗಾಥಾಂಗ್‌ನಲ್ಲಿ ಸಿಲುಕಿದ 200 ಪ್ರವಾಸಿಗರು

ಸಿಕ್ಕಿಂ : ಉತ್ತರ ಸಿಕ್ಕಿಂನಲ್ಲಿ ಭಾರೀ ಮಳೆಯಿಂದ ಭೂಕುಸಿತ ಸಂಭವಿಸಿ, ರಸ್ತೆ ಸಂಪರ್ಕ ಕಡಿತಗೊಂಡಿದ್ದು, ಸುಮಾರು 200 ಪ್ರವಾಸಿಗರು ಚುಂಗ್‌ಥಾಂಗ್‌ನಲ್ಲಿ…

1 hour ago

ಸಂಘರ್ಷ ಶಮನಕ್ಕೆ 15 ಅಂಶ ಮುಂದಿಟ್ಟ ಟ್ರಂಪ್‌ ; ಸಂಧಾನ ಅಣಕಿಸಿದ ಇರಾನ್‌

ವಾಷಿಂಗ್ಟನ್‌ : ಪಶ್ಚಿಮ ಏಪ್ಯಾ ಸಂಘರ್ಷ ಶಮನಕ್ಕೆ ನಡೆಯುತ್ತಿರುವ ಪ್ರಯತ್ನಗಳ ಮಧ್ಯೆ, ಟ್ರಂಪ್ ಆಡಳಿತ 15 ಅಂಶಗಳ ಪ್ರಸ್ತಾವನೆಯನ್ನು ಇರಾನ್…

2 hours ago

ಹನೂರು | ಬಾವಿಗೆ ಬಿದ್ದ ಶ್ವಾನ, ಅಗ್ನಿಶಾಮಕ ಠಾಣಾ ಸಿಬ್ಬಂದಿಗಳಿಂದ ರಕ್ಷಣೆ

ಹನೂರು : ನೀರಿರುವ ಬಾವಿಗೆ ಬಿದ್ದಿದ್ದ ಶ್ವಾನವನ್ನು ರಕ್ಷಣೆ ಮಾಡುವಲ್ಲಿ ಅಗ್ನಿಶಾಮಕ ಠಾಣಾ ಸಿಬ್ಬಂದಿಗಳು ಯಶಸ್ವಿಯಾಗಿದ್ದಾರೆ. ಘಟನೆಯ ವಿವರ ಹನೂರು…

2 hours ago

ಎಲ್‌ಪಿಜಿ ಕೊರತೆ ಪರಿಸ್ಥಿತಿ ; ಹಾಲಿನ ವಹಿವಾಟು ಯಥಾಸ್ಥಿತಿ

ಕೆ.ಬಿ.ರಮೇಶ ನಾಯಕ ಮೈಸೂರು : ಮಧ್ಯಪ್ರಾಚ್ಯ ದೇಶಗಳಲ್ಲಿ ನಡೆಯುತ್ತಿರುವಯುದ್ಧದ ಪರಿಣಾಮದಿಂದಾಗಿ ಭಾರತದಲ್ಲಿ ಎಲ್‌ಪಿಜಿ ಸಿಲಿಂಡರ್ ಪೂರೈಕೆಗೆ ದೊಡ್ಡ ಹೊಡೆತ ಬಿದ್ದು…

3 hours ago

ಓದುಗರ ಪತ್ರ | ಶಾಸನಸಭೆಗಳಲ್ಲಿ ಹೊಸ ಯೋಜನೆಗಳ ಚರ್ಚೆಯಾಗಲಿ

ಕರ್ನಾಟಕ ವಿಧಾನಸಭೆ ಹಾಗೂ ಸಂಸತ್‌ ಮೇಲನೆ ಹಾಗೂ ಕೆಳಮನೆಗಳಲ್ಲಿ 2026ರ (ಬಜೆಟ್ ಮೇಲಿನ ಚರ್ಚೆ) ಮುಂದುವರಿದ ಅಧಿವೇಶನಗಳು ನಡೆಯುತ್ತಿವೆ. ಬಜೆಟ್…

3 hours ago