Mysore
32
clear sky

Social Media

ಸೋಮವಾರ, 23 ಮಾರ್ಚ್ 2026
Light
Dark

ಅಧಿವೇಶನದ ಮೊದಲ ದಿನವೇ ಡಿಸಿಎಂ ಡಿ.ಕೆ.ಶಿವಕುಮಾರ್‌ ಗೈರು

dk shivakumar international trip

ಬೆಂಗಳೂರು: ಇಂದಿನಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ಆರಂಭವಾಗಿದೆ. ಅಧಿವೇಶನದ ಮೊದಲ ದಿನವೇ ಡಿಸಿಎಂ ಡಿ.ಕೆ.ಶಿವಕುಮಾರ್‌ ಗೈರಾಗಿದ್ದಾರೆ.

ಇಂದಿನಿಂದ ಡಿಸೆಂಬರ್.‌19ರವರೆಗೆ ಅಧಿವೇಶನ ನಡೆಯಲಿದ್ದು, ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಆಡಳಿತ ಮತ್ತು ವಿರೋಧ ಪಕ್ಷಗಳ ಜಟಾಪಟಿಗೆ ಅಧಿವೇಶನ ಸಾಕ್ಷಿಯಾಗಲಿದೆ. ಮೊದಲ ದಿನವೇ ಡಿಸಿಎಂ ಡಿ.ಕೆ.ಶಿವಕುಮಾರ್‌ ಅಧಿವೇಶನಕ್ಕೆ ಗೈರಾಗಿದ್ದಾರೆ.

ಇಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ತೆಲಂಗಾಣ ಪ್ರವಾಸ ಕೈಗೊಂಡಿದ್ದಾರೆ. ರೈಸಿಂಗ್‌ ಗ್ಲೋಬಲ್‌ ಸಮಿಟ್‌ನಲ್ಲಿ ಅವರು ಭಾಗವಹಿಸಲಿದ್ದು, ಸಂಜೆ ಬೆಂಗಳೂರಿಗೆ ವಾಪಸ್ಸಾಗಲಿದ್ದಾರೆ. ನಾಳೆಯಿಂದ ಬೆಳಗಾವಿ ಚಳಿಗಾಲದ ಅಧಿವೇಶನಲ್ಲಿ ಭಾಗಿಯಾಗಲಿದ್ದಾರೆ.

Tags:
error: Content is protected !!