ರಾಜ್ಯ

ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶಕ್ಕೆ ದಿನಾಂಕ ಘೋಷಿಸಿದ ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನದ ಹಿನ್ನೆಲೆಯಲ್ಲಿ ಮುಂದೂಡಿಕೆಯಾಗಿದ್ದ ಗಾಂಧಿ ಭಾರತ ಕಾರ್ಯಕ್ರಮದ ಅಂಗವಾಗಿ ಬೆಳಗಾವಿ ಸುವರ್ಣ ವಿಧಾನಸೌಧದ ಆವರಣದಲ್ಲಿ ಗಾಂಧಿ ಪ್ರತಿಮೆ ಅನಾವರಣ ಹಾಗೂ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶವನ್ನು ಇದೇ ಜನವರಿ.21ರಂದು ನಡೆಸಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ಈ ಬಗ್ಗೆ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಗಾಂಧಿ ಭಾರತ ಕಾರ್ಯಕ್ರಮವನ್ನು ಪಕ್ಷ ಈಗಾಗಲೇ ಆರಂಭಿಸಿದ್ದು, ಗಾಂಧೀಜಿ ಅವರು ಕಾಂಗ್ರೆಸ್ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡು ಕಳೆದ ಡಿಸಂಬರ್.26ಕ್ಕೆ ನೂರು ವರ್ಷ ತುಂಬಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ನಡೆಸಲಾಗಿತ್ತು. ಅಂದು ಸಂಜೆ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ನಿಧನರಾದ ಹಿನ್ನೆಲೆಯಲ್ಲಿ ಮರುದಿನದ ಕಾರ್ಯಕ್ರಮಗಳನ್ನು ಮುಂದೂಡಲಾಗಿತ್ತು ಎಂದರು.

ಕಾರ್ಯಕಾರಿ ಸಮಿತಿ ಸಭೆಯಲ್ಲಿ ನಮ್ಮ ಮುಂದಿನ ಹೋರಾಟದ ಬಗ್ಗೆ ತೀರ್ಮಾನ ಮಾಡಲಾಗಿತ್ತು. ನಮ್ಮ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಹಾಗೂ ಪ್ರಧಾನ ಕಾರ್ಯದರ್ಶಿಗಳು ಚರ್ಚೆ ಮಾಡಿ ಇದೇ ತಿಂಗಳ 21ರಂದು ಈ ಕಾರ್ಯಕ್ರಮ ನಡೆಸಲು ತೀರ್ಮಾನಿಸಿದ್ದಾರೆ. 1924ರ ಕಾಂಗ್ರೆಸ್ ಅಧಿವೇಶನದ ಕುರಿತ ಮಾಹಿತಿಗಳ ಪುಸ್ತಕ ಹಾಗೂ ಇತರೆ ಪುಸ್ತಕಗಳನ್ನು ಜ.21ರಂದು ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದರು.

ಜನವರಿ.21ರಂದು ಬೆಳಗ್ಗೆ ಸುವರ್ಣಸೌಧದ ಬಳಿ ಗಾಂಧಿ ಪ್ರತಿಮೆ ಅನಾವರಣ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ಎಲ್ಲಾ ಪಕ್ಷದ ಶಾಸಕರಿಗೂ ಆಹ್ವಾನ ನೀಡಲಾಗುವುದು. ಅಂದು ಮಧ್ಯಾಹ್ನ 12 ಗಂಟೆಗೆ “ಜೈ ಬಾಪು, ಜೈ ಭೀಮ್, ಜೈ ಸಂವಿಧಾನ” ಎಂಬ ಎಐಸಿಸಿ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ. ಈ ಸಮಾವೇಶಕ್ಕೆ ಎಲ್ಲಾ ವಿಧಾನಸಭಾ ಕ್ಷೇತ್ರದಿಂದ ಕನಿಷ್ಠ 100 ಮಂದಿ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಭಾಗವಹಿಸಬೇಕು ಎಂದು ಕರೆ ನೀಡುತ್ತಿದ್ದೇವೆ. ಈ ಸಮಾವೇಶದಲ್ಲಿ ಭಾಗವಹಿಸುವ ನಾಯಕರ ಬಗ್ಗೆ ಮುಂದಿನ ದಿನಗಳಲ್ಲಿ ತಿಳಿಸಲಾಗುವುದು ಎಂದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಆಸ್ಟ್ರೇಲಿಯಾದಲ್ಲಿ ಉಗ್ರರ ದಾಳಿ : ದಿಲ್ಲಿ, ಬೆಂಗಳೂರಿನಲ್ಲಿ ಹೈ ಅಲರ್ಟ್‌

ಬೆಂಗಳೂರು : ಆಸ್ಪ್ರೇಲಿಯಾದ ಬೀಚ್‌ನಲ್ಲಿ ಭಾನುವಾರ ಮಧ್ಯಾಹ್ನ ಭೀಕರ ಗುಂಡಿನ ದಾಳಿ ನಡೆದಿದ್ದು, ಇಬ್ಬರು ಪೊಲೀಸರು ಸೇರಿದಂತೆ 12 ಮಂದಿ…

29 mins ago

ಚೆಕ್‌ ಬೌನ್ಸ್‌ ಕೇಸ್ : ಶಾಲಾ ಕಾರ್ಯದರ್ಶಿಗೆ ಕೊಲೆ ಬೆದರಿಕೆ :‌ ಶಾಲೆ ಕಿಟಕಿ ಗಾಜು ಹೊಡೆದು ಪುಂಡಾಟ : ಇಬ್ಬರ ವಿರುದ್ಧ ದೂರು

ಮೈಸೂರು : ಇಲ್ಲಿನ ರಾಘವೇಂದ್ರ ನಗರದ ಸುಮನ್‌ ವಿದ್ಯಾಸಂಸ್ಥೆಯ ಕಾರ್ಯದರ್ಶಿಗೆ ಕೊಲೆ ಬೆದರಿಕೆ ಹಾಕಿರುವ ಘಟನೆ ನಡೆದಿದೆ. ಈ ಸಂಬಂಧ…

1 hour ago

‌ಶಾಮನೂರು | ಓದಿದ್ದೂ 10ನೇ ತರಗತಿ ; ಕಟ್ಟಿದ್ದೂ ಬೃಹತ್ ಶಿಕ್ಷಣ ಸಾಮ್ರಾಜ್ಯ…..!

ಬೆಂಗಳೂರು : ದೇಶದ ಹಿರಿಯ ಶಾಸಕ, ಸೋಲಿಲ್ಲದ ಸರದಾರ ಎಂಬ ಖ್ಯಾತಿಗೆ ಪಾತ್ರವಾಗಿದ್ದ ಶಾಮನೂರು ಶಿವಶಂಕರಪ್ಪ ಭಾನುವಾರ ಇಹಲೋಕ ತ್ಯಜಿಸಿದ್ದಾರೆ.…

1 hour ago

ಫಸಲು ಬಿಮಾ : ಬಿಜೆಪಿ ಪ್ರಾಯೋಜಿತ ಗೋಲ್ಮಾಲ್ ಯೋಜನೆ : ಸಚಿವ ಖಂಡ್ರೆ

ಬೆಂಗಳೂರು : ಪ್ರಧಾನ ಮಂತ್ರಿ ಬೆಳೆ ವಿಮೆ ಯೋಜನೆಯಡಿ ರೈತರು, ಕೇಂದ್ರ ಸ ರ್ಕಾರ ಮತ್ತು ರಾಜ್ಯ ಸರ್ಕಾರ ಪಾವತಿಸಿರುವ…

1 hour ago

ದಿಲ್ಲಿಯಲ್ಲಿ ಮೆಸ್ಸಿ : ಮೋದಿ ಭೇಟಿ ನಿರೀಕ್ಷೆ, ಹ್ಯಾಂಡ್‌ಶೇಕ್‌ಗೆ 1 ಕೋಟಿ ರೂ.!

ಹೊಸದಿಲ್ಲಿ : ಮೂರು ದಿನಗಳ ಕಾಲ ಭಾರತ ಪ್ರವಾಸಕ್ಕೆ ಆಗಮಿಸಿರುವ ಫುಟ್ಬಾಲ್ ದಿಗ್ಗಜ ಲಿಯೋನೆಲ್ ಮೆಸ್ಸಿ ಅವರು ಸೋಮವಾರ ಬೆಳಗ್ಗೆ…

2 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಡಿಸೆಂಬರ್‌ 15, ಸೋಮವಾರ  

2 hours ago