Mysore
23
clear sky

Social Media

ಗುರುವಾರ, 22 ಜನವರಿ 2026
Light
Dark

ಸದನದಲ್ಲಿ ಆರ್‌ಎಸ್‌ಎಸ್ ಗೀತೆ ಹಾಡಿದ್ದಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಕ್ಷಮೆಯಾಚನೆ

dk shivkumar (2)

ಬೆಂಗಳೂರು: ಸದನದಲ್ಲಿ ಆರ್‌ಎಸ್‌ಎಸ್‌ ಗೀತೆ ಹಾಡಿದ್ದಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಕ್ಷಮೆಯಾಚಿಸಿದ್ದಾರೆ.

ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಗುರುವಾರ ವಿಧಾನಸಭೆಯನ್ನು ಉದ್ದೇಶಿಸಿ ಮಾತನಾಡುವಾಗ ಆರ್‌ಎಸ್‌ಎಸ್‌ ಗೀತೆಯನ್ನು ಹಾಡಿ ಗಮನ ಸೆಳೆದಿದ್ದರು.

ನಮಸ್ತೆ ಸದಾ ವತ್ಸಲೇ ಮಾತೃಭೂಮಿ ಗೀತೆ ಪಠಿಸಿದ್ದರು. ಈ ವಿಡಿಯೋ ಸೋಷಿಯಲ್‌ ಮೀಡಿಯಾದಲ್ಲಿ ಫುಲ್‌ ವೈರಲ್‌ ಆಗಿದ್ದು, ಕೆಲವರಂತೂ ಡಿಕೆಶಿ ಬಿಜೆಪಿ ಸೇರುವುದು ಪಕ್ಕಾ ಎಂದು ಕಮೆಂಟ್‌ ಮಾಡುತ್ತಿದ್ದರು.

ಡಿಸಿಎಂ ಡಿಕೆಶಿ ಹಾಡಿಗೆ ಕಾಂಗ್ರೆಸ್‌ ನಾಯಕರಿಂದ ತೀವ್ರ ವಿರೋಧ ಕೂಡ ವ್ಯಕ್ತವಾಗಿತ್ತು. ನಿನ್ನೆ ಬಿ.ಕೆ.ಹರಿಪ್ರಸಾದ್‌ ಅವರು, ಡಿಸಿಎಂ ಡಿ.ಕೆ.ಶಿವಕುಮಾರ್‌ ಕ್ಷಮೆಯಾಚಿಸುವಂತೆ ಆಗ್ರಹಿಸಿದ್ದರು. ಈ ಹಿನ್ನೆಲೆಯಲ್ಲಿ ಇಂದು ಡಿ.ಕೆ.ಶಿವಕುಮಾರ್‌ ಅವರು ಕ್ಷಮೆಯಾಚಿಸಿದ್ದಾರೆ.

Tags:
error: Content is protected !!