ಉಡುಪಿ: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಸ್ಯಾಂಡಲ್‌ವುಡ್ ಕಲಾವಿದರಿಗೆ ವಾರ್ನಿಂಗ್ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯದಲ್ಲಿ ರಾಜಕೀಯ ನಾಯಕರು, ನಟ ಮತ್ತು ನಟಿಯರ ಪರ-ವಿರೋಧ ವ್ಯಕ್ತವಾದ ಬೆನ್ನಲ್ಲೇ ಡಿಕೆಶಿ ಅವರು ತಮ್ಮ ಹೇಳಿಕೆಗಳಿಗೆ ಸ್ಪಷ್ಟನೆ ನೀಡಿದ್ದಾರೆ.
ಉಡುಪಿಯಲ್ಲಿ ಇಂದು(ಮಾರ್ಚ್.2) ಈ ಕುರಿತು ಮಾಧ್ಯಮಗಳೊಂದಗೆ ಪ್ರತಿಕ್ರಿಯೆ ನೀಡಿದ ಅವರು, ನಟರು ಏನು ಬೇಕಾದರೂ ಮಾತನಾಡಿಕೊಳ್ಳಲಿ, ನನಗೆ ಗೊತ್ತಿರುವಷ್ಟು ಸತ್ಯ ನಾನು ಹೇಳಿದ್ದೇನೆ. ಕಲಾವಿದರು ಬೇಕಾದರೆ ಹೋರಾಟ ಮಾಡಲಿ, ಮೇಕೆದಾಟು ಯಾತ್ರೆ ಮಾಡುವಾಗ ಯಾರು ಬಂದಿರಲಿಲ್ಲ. ಅದನ್ನೇ ನಾನು ನಿನ್ನೆ ಹೇಳಿದ್ದು, ಫಿಲ್ಮ್ ಫೆಸ್ಟಿವಲ್ ಏನೂ ನನ್ನ ಕಾರ್ಯಕ್ರಮನಾ? ಎಂದು ತಮ್ಮ ಹೇಳಿಕೆಗಳನ್ನು ಸಮರ್ಥನೆ ಮಾಡಿಕೊಂಡಿದ್ದಾರೆ.
ಇನ್ನು ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಹೇಳಿಕೆಗಳಿಗೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ, ವಿರೋಧ ಪಕ್ಷದ ನಾಯಕ ಆರ್.ಅಶೋಕ್, ಶಾಸಕ ಮುನಿರತ್ನ, ನಟಿ ತಾರಾ ಅನುರಾಧ, ನಿರ್ದೇಶಕ ಟಿ.ಎಸ್.ನಾಗಾಭರಣ ಹಾಗೂ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ವಿರೋಧ ವ್ಯಕ್ತಪಡಿಸಿದ್ದರು. ಅಲ್ಲದೆ ಡಿಕೆಶಿ ಅವರ ಹೇಳಿಕೆಗಳನ್ನು ಶಾಸಕ ಗಣಿಗ ರವಿ, ನಿರ್ಮಾಪಕ ಕೆ.ಮಂಜು ಹಾಗೂ ನಟಿ ಹೇಮಾ ಚೌಧರಿ ಅವರು ಸರ್ಮಥನೆ ಮಾಡಿಕೊಂಡಿದ್ದರು.
ಬೆಂಗಳೂರು : ಮೈಸೂರಿನ ಐತಿಹಾಸಿಕ ರುಚಿಯನ್ನು ಹೊತ್ತು ಬಂದಿರುವ ಪ್ರಸಿದ್ಧ ಒರಿಜಿನಲ್ ವಿನಾಯಕ ಮೈಲಾರಿ-1938 ಹೋಟೆಲ್‍ನ ಬೆಂಗಳೂರು ಶಾಖೆಗೆ ಮುಖ್ಯಮಂತ್ರಿ…
ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಅಪರಾಧ ಸಾಬೀತುಪಡಿಸಿದ ತನಿಖಾ ತಂಡಕ್ಕೆ 25 ಲಕ್ಷ ರೂ. ನಗದು ಬಹುಮಾನ…
ಬೆಂಗಳೂರು: ರಾಜ್ಯಪಾಲರು ಜಂಟಿ ಅಧಿವೇಶನದಲ್ಲಿ ರಾಷ್ಟ್ರಗೀತೆ ಹಾಡದೇ ಹೋಗಿದ್ದು ಸಂವಿಧಾನದ ಉಲ್ಲಂಘನೆಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಟೀಕೆ ಮಾಡಿದರು. ಈ…
ಕೇರಳ: ವಿಧಾನಸಭೆ ಚುನಾವಣೆ ನಡೆಯಲಿರುವ ಕೇರಳಕ್ಕೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ ಅವರು ಸರಣಿ ಅಭಿವೃದ್ಧಿ ಯೋಜನೆಗಳಿಗೆ ಉದ್ಘಾಟನೆ…
ಮಂಡ್ಯ: ಕಳೆದ ಬಾರಿಗಿಂತ ಈ ಬಾರಿ ವಿಶೇಷವಾಗಿ 2 ಲಕ್ಷಕ್ಕೂ ಅಧಿಕ ಹೂಗಳನ್ನು ಬಳಿಸಿ ವಿಶೇಷ ಫಲಪುಷ್ಪ ಪ್ರದರ್ಶನವನ್ನು ಮಾಡಲಾಗಿದೆ…
ಮೈಸೂರು: ಅಪಾರ್ಟ್‌ಮೆಂಟ್‌ವೊಂದರಲ್ಲಿ ಬಣ್ಣ ಹೊಡೆಯುವ ವೇಳೆ ಕಾಲು ಜಾರಿ ಕೆಳಗೆ ಬಿದ್ದು ಕಾರ್ಮಿಕನೋರ್ವ ಮೃತಪಟ್ಟಿರುವ ಘಟನೆ ಮೈಸೂರಿನ ದಿವಾನ್ಸ್ ರಸ್ತೆಯಲ್ಲಿರುವ…