ರಾಜ್ಯ

ಸ್ಯಾಂಡಲ್‌ವುಡ್‌ ಕಲಾವಿದರಿಗೆ ವಾರ್ನಿಂಗ್‌ ವಿಚಾರ: ತಮ್ಮ ಹೇಳಿಕೆಗೆ ಸ್ಪಷ್ಟನೆ ನೀಡಿದ ಡಿಸಿಎಂ ಡಿ.ಕೆ.ಶಿವಕುಮಾರ್‌

ಉಡುಪಿ: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಸ್ಯಾಂಡಲ್‌ವುಡ್‌ ಕಲಾವಿದರಿಗೆ ವಾರ್ನಿಂಗ್‌ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯದಲ್ಲಿ ರಾಜಕೀಯ ನಾಯಕರು, ನಟ ಮತ್ತು ನಟಿಯರ ಪರ-ವಿರೋಧ ವ್ಯಕ್ತವಾದ ಬೆನ್ನಲ್ಲೇ ಡಿಕೆಶಿ ಅವರು ತಮ್ಮ ಹೇಳಿಕೆಗಳಿಗೆ ಸ್ಪಷ್ಟನೆ ನೀಡಿದ್ದಾರೆ.

ಉಡುಪಿಯಲ್ಲಿ ಇಂದು(ಮಾರ್ಚ್‌.2) ಈ ಕುರಿತು ಮಾಧ್ಯಮಗಳೊಂದಗೆ ಪ್ರತಿಕ್ರಿಯೆ ನೀಡಿದ ಅವರು, ನಟರು ಏನು ಬೇಕಾದರೂ ಮಾತನಾಡಿಕೊಳ್ಳಲಿ, ನನಗೆ ಗೊತ್ತಿರುವಷ್ಟು ಸತ್ಯ ನಾನು ಹೇಳಿದ್ದೇನೆ. ಕಲಾವಿದರು ಬೇಕಾದರೆ ಹೋರಾಟ ಮಾಡಲಿ, ಮೇಕೆದಾಟು ಯಾತ್ರೆ ಮಾಡುವಾಗ ಯಾರು ಬಂದಿರಲಿಲ್ಲ. ಅದನ್ನೇ ನಾನು ನಿನ್ನೆ ಹೇಳಿದ್ದು, ಫಿಲ್ಮ್‌ ಫೆಸ್ಟಿವಲ್‌  ಏನೂ ನನ್ನ ಕಾರ್ಯಕ್ರಮನಾ?  ಎಂದು ತಮ್ಮ ಹೇಳಿಕೆಗಳನ್ನು ಸಮರ್ಥನೆ ಮಾಡಿಕೊಂಡಿದ್ದಾರೆ.

ಇನ್ನು ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರ ಹೇಳಿಕೆಗಳಿಗೆ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ, ವಿರೋಧ ಪಕ್ಷದ ನಾಯಕ ಆರ್.ಅಶೋಕ್‌, ಶಾಸಕ ಮುನಿರತ್ನ, ನಟಿ ತಾರಾ ಅನುರಾಧ, ನಿರ್ದೇಶಕ ಟಿ.ಎಸ್‌.ನಾಗಾಭರಣ ಹಾಗೂ ಜೆಡಿಎಸ್‌ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ವಿರೋಧ ವ್ಯಕ್ತಪಡಿಸಿದ್ದರು. ಅಲ್ಲದೆ ಡಿಕೆಶಿ ಅವರ ಹೇಳಿಕೆಗಳನ್ನು ಶಾಸಕ ಗಣಿಗ ರವಿ, ನಿರ್ಮಾಪಕ ಕೆ.ಮಂಜು ಹಾಗೂ ನಟಿ ಹೇಮಾ ಚೌಧರಿ ಅವರು ಸರ್ಮಥನೆ ಮಾಡಿಕೊಂಡಿದ್ದರು.

ಅರ್ಚನ ಎಸ್‌ ಎಸ್

Recent Posts

ಕೊಪ್ಪಳದ ಗವಿಸಿದ್ದೇಶ್ವರ ಸ್ವಾಮಿಗಳಿಂದ ಈ ಬಾರಿ ದಸರಾ ಉದ್ಘಾಟನೆ

ಬೆಂಗಳೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2026ಕ್ಕೆ ಈ ಬಾರಿ ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಮಹಾಸಂಸ್ಥಾನ ಮಠದ ಪೀಠಾಧಿಪತಿಗಳಾದ ಶ್ರೀ…

29 mins ago

ಕಾಡಾನೆ ದಾಳಿಗೆ 75 ತೆಂಗಿನ ಮರ ನಾಶ: ಬೆಳೆ ಪರಿಹಾರಕ್ಕೆ ರೈತ ಕುಟುಂಬದ ಮನವಿ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಾಳ್ಯ ಗ್ರಾಮದಲ್ಲಿ ಕಾಡಾನೆಗಳ ನಿರಂತರ ದಾಳಿಯಿಂದ ಕಷ್ಟಪಟ್ಟು ಬೆಳೆದಿದ್ದ ತೆಂಗಿನ ಮರ ಸಂಪೂರ್ಣ ನಾಶವಾಗಿರುವುದರಿಂದ…

6 hours ago

ಅ.29ರಿಂದ ನ.11ರವರೆಗೆ ಹಾಸನಾಂಬಾ ಜಾತ್ರಾ ಮಹೋತ್ಸವ

ಹಾಸನ: ಹಾಸನದ ಅಧಿದೇವತೆ ಹಾಸನಾಂಬ ದೇವಿಯ ಜಾತ್ರಾ ಮಹೋತ್ಸವಕ್ಕೆ ದಿನಾಂಕ ನಿಗದಿಯಾಗಿದೆ. ಈ ಕುರಿತು ಹಾಸನ ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ ಮಾಹಿತಿ…

7 hours ago

ಕರ್ನಾಟಕಕ್ಕೆ ಮತ್ತೆ ಕಾವೇರಿ ಶಾಕ್ ನೀಡಿದ ಸುಪ್ರೀಂಕೋರ್ಟ್‌

ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದ್ದು, CWMA ನೀಡಿರುವ ಆದೇಶವನ್ನು ಪಾಲಿಸುವಂತೆ ಸುಪ್ರೀಂಕೋರ್ಟ್‌ ಸೂಚನೆ ನೀಡಿದೆ.…

8 hours ago

ಕೋಟೆ ಟಿಎಪಿಸಿಎಂಎಸ್: ನಾಳೆ ಮೈತ್ರಿ ಪಕ್ಷದ 8 ಸದಸ್ಯರ ರಾಜೀನಾಮೆ ಭವಿಷ್ಯ ನಿರ್ಧಾರ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕು ಟಿಎಪಿಸಿಎಂಎಸ್‌ನ ಎಂಟು ಜನ ನಿರ್ದೇಶಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ಅಂಗೀಕಾರ ಮಾಡಲು ಮತ್ತು…

8 hours ago

ಓದುಗರ ಪತ್ರ: ಸಿಗಲಿ ನ್ಯಾಯ!

ಸಿಗಲಿ ನ್ಯಾಯ! ಮರುಜೀವ ಬಂದಿದೆ ಹೊಸಬೆಳಕು ಮೂಡಿದೆ ಸುಪ್ರೀಂಕೋರ್ಟಿನ ಸೌಜನ್ಯಾ ಪ್ರಕರಣದ ಮರುತನಿಖೆಯ ಆದೇಶ! ಸಲಾಂ ಸುಪ್ರೀಂಗೆ! ನಡೆಯಲಿ ತನಿಖೆ…

14 hours ago