ಬೆಂಗಳೂರು: ರಾಜ್ಯಾದ್ಯಂತ ಹೊಸ ವರ್ಷದ ಸ್ವಾಗತಕ್ಕೆ ಸಕಲ ಸಿದ್ದತೆಗಳು ನಡೆಯುತ್ತಿದ್ದು, 2025ನ್ನು ಬರಮಾಡಿಕೊಳ್ಳಲು ರಾಜಧಾನಿ ಬೆಂಗಳೂರಿನಲ್ಲಿ ಜನತೆ ಕಾತುರದಿಂದ ಕಾಯುತ್ತಿದ್ದಾರೆ.
ಈ ನಡುವೆ ರಾಜ್ಯದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಮ್ಮ ಕುಟುಂಬದೊಂದಿಗೆ ಹೊಸ ವರ್ಷ ಆಚರಿಸಲು ವಿದೇಶಕ್ಕೆ ಪ್ರಯಾಣ ಬೆಳೆಸಿದ್ದಾರೆ. ವಿದೇಶದಲ್ಲಿ ಈ ಬಾರಿ ಹೊಸ ವರ್ಷದ ಸಂಭ್ರಮಾಚರಣೆಯಲ್ಲಿ ತೊಡಗಲಿದ್ದು, ಅಲ್ಲಿಂದಲೇ ರಾಜ್ಯದ ಜನತೆಗೆ ಹೊಸ ವರ್ಷದ ಶುಭಾಶಯ ಕೋರಲಿದ್ದಾರೆ.
ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇಂದು ಬೆಳಿಗ್ಗೆ ಕುಟುಂಬ ಸಮೇತ ವಿದೇಶ ಪ್ರವಾಸಕ್ಕೆ ತೆರಳಿದ್ದು, ಟರ್ಕಿ, ಕೆನಡಾದಲ್ಲಿ ಹೊಸ ವರ್ಷ ಆಚರಿಸಲಿದ್ದಾರೆ.
ತಮ್ಮ ರಾಜಕೀಯ ಜೀವನದಿಂದ ಸ್ವಲ್ಪ ದಿನಗಳ ಕಾಲ ವಿಶ್ರಾಂತಿ ತೆಗೆದುಕೊಂಡಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ನಾಲ್ಕು ದಿನಗಳ ಕಾಲ ವಿದೇಶದಲ್ಲಿದ್ದು, ಜನವರಿ.4ರಂದು ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಈ ಮೂಲಕ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು, ವಿದೇಶದಲ್ಲಿ ಹೊಸ ವರ್ಷ ಆಚರಣೆ ಮಾಡಲಿದ್ದು, ಕೆಲ ದಿನಗಳ ಕಾಲ ಅಲ್ಲೇ ವಿಶ್ರಾಂತಿ ಪಡೆಯಲಿದ್ದಾರೆ ಎಂದು ಹೇಳಲಾಗುತ್ತಿದೆ.