ಬೆಂಗಳೂರು: ಉತ್ತರ ಪ್ರದೇಶದ ಪ್ರಯಾಗ್ ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಇದೇ ಫೆಬ್ರವರಿ 9 ಮತ್ತು 10 ರಂದು ಭಾಗಿಯಾಗಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಪ್ರಯಾಗ್ ರಾಜ್‌ನಲ್ಲಿ 144 ವರ್ಷಗಳಿಗೊಮ್ಮೆ ನಡೆಯುವ ಮಹಾಕುಂಭಮೇಳಕ್ಕೆ ದೇಶದ್ಯಾಂತ ದಿನದಿಂದ ದಿನಕ್ಕೆ ಕೋಟ್ಯಾಂತರ ಸಂಖ್ಯೆಯಲ್ಲಿ ಸಾರ್ವಜನಿಕರು ಭೇಟಿ ನೀಡುತ್ತಿದ್ದು, ಇದೀಗ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಕುಟುಂಬ ಸಮೇತ ಪಾಲ್ಗೊಳ್ಳಲಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ.
ಈ ಹಿಂದೆ ಮಹಾಕುಂಭಮೇಳದಲ್ಲಿ ಭಾಗಿಯಾಗುವ ಕುರಿತು ಡಿ.ಕೆ.ಶಿವಕುಮಾರ್ ಅವರು, ಉತ್ತರ ಪ್ರದೇಶದ ಮಂತ್ರಿಗಳು ನನಗೆ ಬಹಳಷ್ಟು ಆತ್ಮೀಯರಾಗಿದ್ದು, ಆಮಂತ್ರಣ ನೀಡಿದ್ದಾರೆ. ಹೀಗಾಗಿ ನಾನು ಕುಟುಂಬ ಸಮೇತ ಮಹಾಕುಂಭಮೇಳಕ್ಕೆ ಭೇಟಿಯಾಗುತ್ತೇನೆ ಎಂದು ಹೇಳಿಕೆ ನೀಡಿದ್ದರು.
ಇನ್ನೂ ಡಿ.ಕೆ.ಶಿವಕುಮಾರ್ ಅವರು ಫೆಬ್ರವರಿ.9 ರಂದು ಬೆಳಿಗ್ಗೆ ಪ್ರಯಾಗ್ ರಾಜ್ ತಲುಪಿದರೆ, ಫೆ.10 ರಂದು ಮಧ್ಯಾಹ್ನ 1 ಗಂಟೆಯ ನಂತರ ಪ್ರಯಾಗ್ ರಾಜ್‌ನಿಂದ ಹಿಂತಿರುಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ.