ಬೆಳಗಾವಿ: ಗಾಂಧಿ ಭಾರತ ಎಂದರೆ ಸ್ವಾಭಿಮಾನ, ಏಕತೆ, ಸಾಮರಸ್ಯ, ಜಾತ್ಯಾತೀತ ಹಾಗೂ ಸರ್ವೋದಯ ಭಾರತವಾಗಿದೆ. “ನೀವು ಕ್ರಾಂತಿಕಾರಿಯನ್ನು ಕೊಲ್ಲಬಹುದು, ಆದರೆ ಕ್ರಾಂತಿಯನ್ನು ಕೊಲ್ಲಲು ಸಾಧ್ಯವಿಲ್ಲ” ಎಂದು ಮಹಾತ್ಮ ಗಾಂಧೀಜಿಯವರು ಹೇಳಿದ್ದಾರೆ. “ವ್ಯಕ್ತಿ ಸಾಯಬಹುದು, ಆದರೆ ತತ್ವಗಳು ಸಾಯಲು ಸಾಧ್ಯವಿಲ್ಲ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಬೆಳಗಾವಿಯಲ್ಲಿ ಇಂದು(ಜನವರಿ.21) ಕಾಂಗ್ರೆಸ್ ವತಿಯಿಂದ ಆಯೋಜಿಸಲಾಗಿದ್ದ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶದಲ್ಲಿ ಮಾತನಾಡಿದ ಅವರು, ವಿಶ್ವಕ್ಕೆ ಶಾಂತಿ ಸಹಬಾಳ್ವೆಯ ಸಂದೇಶ ಕೊಟ್ಟಿದ್ದು ನಮ್ಮ ಮಹಾತ್ಮ ಗಾಂಧೀಜಿಯವರು. 1924ರಲ್ಲಿ ಬೆಳಗಾವಿಯಲ್ಲಿ ನಡೆದ ಅಧಿವೇಶನದ ಮೂಲಕ ಸ್ವಾತಂತ್ರ್ಯ ಹೋರಾಟಕ್ಕೆ ಸಂಕ್ರಾಂತಿಯ ಹುರುಪು ತಂದುಕೊಟ್ಟಿದ್ದನ್ನು ನಾವು ಯಾರೂ ಇಂದಿಗೂ ಮರೆಯಲು ಸಾಧ್ಯವಿಲ್ಲ. ಗಾಂಧೀಜಿಯವರು ಸ್ವಾತಂತ್ರ್ಯ ತಂದುಕೊಟ್ಟರೇ, ಡಾ.ಬಿ.ಆರ್.ಅಂಬೇಡ್ಕರ್ ಅವರು ಸಂವಿಧಾನವನ್ನು ಕೊಟ್ಟರು ಎಂದು ಹೇಳಿದರು.
ಸಂವಿಧಾನವೇ ನಮ್ಮ ತಂದೆ-ತಾಯಿ, ಸಂವಿಧಾನವೇ ನಮ್ಮ ಬಂಧು ಬಳಗ, ಸಂವಿಧಾನವೇ ನಮ್ಮ ಗ್ರಂಥ, ಜೈ ಭೀಮ್ ಮೂಲಕ ನಮ್ಮ ನಡುವೆ ಜೀವಂತವಾಗಿರುವ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಕೊಟ್ಟಿರುವ ಸಂವಿಧಾನವನ್ನು ಇಂದು ನಾವೆಲ್ಲರೂ ಉಳಿಸಿಕೊಂಡು ಹೋಗಬೇಕು. ಆದರೆ ಇದೀಗ ಸುಳ್ಳಿನ ವಿರುದ್ಧ ಹೋರಾಟ ಮಾಡಿದ ಮಹಾತ್ಮನ ವಿರುದ್ಧವೇ ಸುಳ್ಳು ಸುದ್ದಿ ಹಬ್ಬಿಸಲಾಗುತ್ತಿದೆ ಎಂದು ಕಿಡಿಕಾರಿದರು.
ದುಷ್ಟರಿಂದ ಗಾಂಧೀಜಿಯವರ ಚಿಂತನೆ ಉಳಿಯಬೇಕಾಗಿದೆ. ಗೋಡ್ಸೆ ಚಿಂತನೆಯನ್ನು ನಾವೆಲ್ಲ ಸೇರಿ ನಾಶ ಮಾಡಬೇಕಿದೆ. ಗಾಂಧೀಜಿಯವರ ತತ್ವಗಳನ್ನು ರಕ್ಷಿಸಿ ಮುಂದಿನ ಪೀಳಿಗೆಗೆ ತಲುಪಿಸಬೇಕಿದೆ. ಹೀಗಾಗಿ ʼಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶʼವನ್ನು ಈ ವರ್ಷ ಪೂರ್ತಿ ದೇಶದ ಪ್ರತಿ ತಾಲ್ಲೂಕುಗಳಲ್ಲೂ ನಡೆಸಬೇಕು’ ಎಂದು ಎಐಸಿಸಿ ಅಧ್ಯಕ್ಷರಲ್ಲಿ ನಾನು ಮನವಿ ಮಾಡುತ್ತೇನೆ. ಅಲ್ಲದೇ ವರ್ಷಪೂರ್ತಿ ಈ ಕಾರ್ಯಕ್ರಮ ನಡೆಸಲು ನಮ್ಮ ಸರ್ಕಾರ ನಿರ್ಧರಿಸಿದೆ ಎಂದು ತಿಳಿಸಿದರು.
ಇನ್ನೂ 924ರ ಅಧಿವೇಶನ ಕರ್ನಾಟಕದ ಏಕೀಕರಣಕ್ಕೂ ಶಕ್ತಿ ತುಂಬಿತ್ತು. ಕರ್ನಾಟಕವನ್ನು ಕಟ್ಟಿತ್ತಲ್ಲದೇ ಕನ್ನಡಿಗರನ್ನು ಒಂದುಗೂಡಿಸಿತ್ತು. ಆದರೆ ಇದೀಗ ನಮಗೆ ಆರ್ಥಿಕ ಸ್ವಾತಂತ್ರ್ಯ ಬೇಕು. ಅದನ್ನು ಗ್ಯಾರಂಟಿಗಳ ಮೂಲಕ ಕಾಂಗ್ರೆಸ್ ನೀಡಿದೆ. ಆ ಮೂಲಕ ನುಡಿದಂತೆ ನಡೆದಿದ್ದೇವೆ. ನಾವೆಲ್ಲರೂ ಸೇರಿ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಎಂಬ ಈ ಮೂರು ತತ್ವಗಳನ್ನು ಉಳಿಸೋಣ ಹಾಗೂ ಭಾರತದ ಪ್ರಜಾಪ್ರಭುತ್ವವನ್ನು ಕಾಪಾಡೋಣ ಎಂದರು.
ಹುಣಸೂರು: ಇಲ್ಲಿನ ಜ್ಯುವೆಲ್ಲರಿ ಶಾಪ್‌ನಲ್ಲಿ ಚಿನ್ನ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಹಿತಿಯೊಂದು ಲಭ್ಯವಾಗಿದ್ದು, ದರೋಡೆಕೋರರ ಕೈಚಳಕ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.…
ಬೀದರ್: 99 ಲಕ್ಷ ಸಾಲ ಹಿಂತಿರುಗಿಸದ ಆರೋಪದ ಮೇರೆಗೆ ಬಸವಕಲ್ಯಾಣ ಕ್ಷೇತ್ರದ ಬಿಜೆಪಿ ಶಾಸಕ ಶರಣು ಸಲಗರ್ ವಿರುದ್ಧ ಎಫ್‌ಐಆರ್…
ಮೈಸೂರು: ಯುವತಿಯ ಪ್ರೀತಿ ವಿಚಾರವಾಗಿ ಯುವಕನ ಮೇಲೆ ಹಲ್ಲೆ ನಡೆಸಲಾಗಿದ್ದು, ಮನನೊಂದ ಯುವಕ ಆತ್ಮಹತ್ಯೆಗೆ ಶರಣಾಗಿದ್ದಾನೆ. ಮೈಸೂರು ಜಿಲ್ಲೆ ಟಿ.ನರಸೀಪುರ…
ನಮ್ಮ ಸಂವಿಧಾನಕ್ಕೆ ಬರೋಬ್ಬರಿ 75ವರ್ಷಗಳು ತುಂಬಿವೆ. ಭಾರತದ ಪ್ರಜೆಗಳಾದ ನಮಗೆ ಸಂವಿಧಾನವೇ ‘ಸಾಮಾಜಿಕ ನ್ಯಾಯದ ತಾಯಿ’. ಸರ್ವಜನಾಂಗದ ಹಿತರಕ್ಷಣೆಯ ಹೊಣೆಹೊತ್ತ…
ಭವಿಷ್ಯದ ಗುರಿಸಾಧನೆಗಾಗಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಏಕಾಂಗಿ ಸ್ಪರ್ಧೆಗೆ ನಿರ್ಧಾರ ಕಳೆದ ವಾರ ಬಿಜೆಪಿ-ಜಾ.ದಳ ಪಾಳೆಯಗಳಲ್ಲಿ ದೊಡ್ಡ ಮಟ್ಟದ ಸಂಚಲನ…
2025ರ ವರ್ಷಾಂತ್ಯದಲ್ಲಿ ಸಾಂಸ್ಕೃತಿಕ ನಗರಿ ಮೈಸೂರು ಘೋರ ದುರಂತಕ್ಕೆ ಸಾಕ್ಷಿಯಾದದ್ದು ಅತ್ಯಂತ ವಿಷಾದಕರ ಮತ್ತು ಆತಂಕಕಾರಿ ಸಂಗತಿ. ಹೊಟ್ಟೆ ಪಾಡಿಗಾಗಿ…