Mysore
21
broken clouds

Social Media

ಗುರುವಾರ, 01 ಜನವರಿ 2026
Light
Dark

ಸಿಎಂ ಸಿದ್ದರಾಮಯ್ಯ ಅವರ ಹೆಸರು ಎತ್ತಿಕೊಂಡು ದುರುಪಯೋಗ ಮಾಡೋದು ಬೇಡ: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಕಾಂಗ್ರೆಸ್‌ ಪಕ್ಷದಲ್ಲಿ ಸಿಎಂ ಕುರ್ಚಿಯ ಬಗ್ಗೆ ಪರ-ವಿರೋಧ ಹೇಳಿಕೆಗಳನ್ನು ಕೈ ನಾಯಕರು ನೀಡಿದ್ದು, ಅದೆಕ್ಕೆಲ್ಲಾ ಇದೀಗ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ತೆರೆ ಎಳೆದು ಸ್ಪಷ್ಟನೆ ನೀಡಿದ್ದಾರೆ.

ಕೆಪಿಸಿಸಿ ಕಚೇರಿಯ ಮುಭಾಂಗದಲ್ಲಿ ಇಂದು(ಫೆಬ್ರವರಿ.16) ಸಿದ್ದರಾಮಯ್ಯ ನಮ್ಮ ನಾಯಕರು, ಸ್ಥಳೀಯ ಚುನಾವಣೆಯಿಂದ ಹಿಡಿದು ಲೋಕಸಭಾ ಚುನಾವಣೆವರೆಗೂ ಬೇಕೆಂಬ ಹೇಳಿಕೆ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಸಿಎಂ ಸಿದ್ದರಾಮಯ್ಯ ಅವಉ ನಮ್ಮ ಪಕ್ಷದ ನಾಯಕರು. ಅವರಿಗೆ ಕಾಂಗ್ರೆಸ್‌ ಪಕ್ಷ ಎರಡು ಬಾರಿ ಸಿಎಂ ಆಗುವ ಅವಕಾಶ ನೀಡಿದೆ. ಅವರ ನೇತೃತ್ವದಲ್ಲಿಯೇ ನಮ್ಮ ರಾಜ್ಯದಲ್ಲಿ ಒಳ್ಳೆಯ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿವೆ. ಹೀಗಾಗಿ ದಿನ ಬೆಳಗಾದರೇ ಅವರ ಸುದ್ದಿಯನ್ನು ಎತ್ತಿಕೊಂಡು ಅವರ ಹೆಸರು ದುರುಪಯೋಗ ಮಾಡೋದು ಬೇಡ. ಅವರು ಸ್ಥಳೀಯ ಚುನಾವಣೆಯಿಂದ ಹಿಡಿದು ಲೋಕಸಭಾ ಚುನಾವಣೆವರೆಗೂ ಸಿಎಂ ಸಿದ್ದರಾಮಯ್ಯ ಬೇಕು ಎಂದು ಹೇಳಿದ್ದಾರೆ.

ಕಾಂಗ್ರೆಸ್‌ ಹೈಕಮಾಂಡ್‌ ಎಲ್ಲವನ್ನು ಗಮನಿಸುತ್ತಿದ್ದು, ಮಾಧ್ಯಮಗಳ ಮುಂದೆ ಹೇಳಿಕೆಗಳನ್ನು ನೀಡಿ ಆಹಾರ ಆಗಬಾರದು. ಸಿದ್ದರಾಮಯ್ಯನವರು ಎರಡನೇ ಬಾರಿ ಮುಖ್ಯಮಂತ್ರಿ ಆದರೂ ಉತ್ತಮವಾಗಿಯೇ ಆಡಳಿತ ನಡೆಸುತ್ತಿದ್ದಾರೆ. ಅಲ್ಲದೇ ನಮ್ಮ ಪಕ್ಷದಲ್ಲಿ ಯಾವುದೇ ಗೊಂದಲ ಹೇಳಿಕೆಗಳಿಲ್ಲ ಎಂದಿದ್ದಾರೆ.

Tags:
error: Content is protected !!