Mysore
21
few clouds

Social Media

ಸೋಮವಾರ, 17 ಫೆಬ್ರವರಿ 2025
Light
Dark

ಕೇಂದ್ರ ಸರ್ಕಾರ, ರಾಜ್ಯಕ್ಕೆ ನೀಡಿರುವ ಕೊಡುಗೆಗಳ ಪಟ್ಟಿ ನೀಡಲಿ: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಕೇಂದ್ರ ಸರ್ಕಾರ ಬಜೆಟ್‌ನಿಂದ ನಮ್ಮ ರಾಜ್ಯಕ್ಕೆ ನೀಡಿರುವ ಕೊಗುಗೆಗಳ ಬಗ್ಗೆ ಪಟ್ಟಿ ನೀಡಲಿ ಎಂದು ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್‌ ಅವರಿಗೆ ಡಿಸಿಎಂ ಡಿ.ಕೆ.ಶಿವಕುಮಾರ್‌ ತಿರುಗೇಟು ನೀಡಿದ್ದಾರೆ.

ಬೆಂಗಳೂರಿನಲ್ಲಿ ಇಂದು(ಫೆಬ್ರವರಿ.3) ವಿತ್ತ ಸಚಿವೆ ನಿರ್ಮಲಾ ಸೀತರಾಮನ್‌ ಅವರು ನೀಡಿರುವ ಹೇಳಿಕೆ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ನಮ್ಮ ಸರ್ಕಾರದ ಆರ್ಥಿಕ ಪರಿಸ್ಥಿತಿ ವಿಚಾರ ಪಕ್ಕಕ್ಕಿರಲಿ, ಕೇಂದ್ರ ಸರ್ಕಾರದ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಕೇಂದ್ರದಿಂದ ಯಾವ ಕೊಡುಗೆ ನೀಡಿದ್ದಾರೆ ಎಂದು ಮೊದಲು ಪಟ್ಟಿ ಕೊಡಲಿ. ನಾಲಿಗೆಯಿಂದ ಯಾವುದಾದರೂ ಮಾತು ಬಂದರೆ ಅದನ್ನು ಉಳಿಸಿಕೊಂಡು, ಅದರಂತೆ ನಡೆದುಕೊಳ್ಳಬೇಕು. ಕೇಂದ್ರದ ಬಜೆಟ್ ನೋಡಿದರೆ ನನಗೆ ನಾಚಿಕೆಯಾಗುತ್ತದೆ. ಅವರು ಮೊದಲು ತಮ್ಮ ಮಾತನ್ನು ಉಳಿಸಿಕೊಳ್ಳಲಿ ಎಂದು ವಾಗ್ದಾಳಿ ನಡೆಸಿದರು.

ಕೇಂದ್ರ ಸರ್ಕಾರ ಎಷ್ಟು ಸಾಲ ಮಾಡಿದೆ ಎಂಬುದನ್ನು ನಾವು ಅರಿಯಬೇಕು. ನಮ್ಮ ರಾಜ್ಯ ಸರ್ಕಾರ ಅಷ್ಟು ದೊಡ್ಡ ಪ್ರಮಾಣದ ಸಾಲವನ್ನು ಮಾಡಿಲ್ಲ. ಅಲ್ಲದೇ ನಾವು ಚುನಾವಣೆ ಸಂದರ್ಭದಲ್ಲಿ ಗ್ಯಾರಂಟಿ ಯೋಜನೆಗಳನ್ನು ಘೋಷಣೆ ಮಾಡಿದಾಗ ಕೂಡ ಪ್ರಧಾನಿ ನರೇಂದ್ರ ಮೋದಿ ಅವರು ನಮ್ಮ ರಾಜ್ಯ ದಿವಾಳಿಯಾಗಿದೆ ಎಂದು ಆರೋಪಿಸಿದ್ದರು. ಬಳಿಕ ಎಲ್ಲಾ ರಾಜ್ಯಗಳ ಚುನಾವಣೆಯಲ್ಲಿ ಅವರು ಗ್ಯಾರಂಟಿ ಯೋಜನೆ ನಕಲು ಮಾಡಿ ಘೋಷಿಸಿದ್ದಾರೆ. ಇನ್ನೂ ರಾಜ್ಯ ಸರ್ಕಾರ ಬೆಲೆ ಏರಿಕೆ ಮತ್ತು ನಿರುದ್ಯೋಗ ಸಮಸ್ಯೆಯಿಂದ ಬಳಲಿದ್ದ ಸಾರ್ವಜನಿಕರಿಗೆ ನೆರವಾಗಲು ಗ್ಯಾರಂಟಿ ಯೋಜನೆ ಘೋಷಣೆ ಮಾಡಿದೆಯೆ ಹೊರತು, ಮತಕ್ಕಾಗಿ ಅಲ್ಲ ಎಂದು ಕಿಡಿಕಾರಿದರು.

Tags: