ಬೆಂಗಳೂರು: ಕೇಂದ್ರ ಸರ್ಕಾರ ಬಜೆಟ್‌ನಿಂದ ನಮ್ಮ ರಾಜ್ಯಕ್ಕೆ ನೀಡಿರುವ ಕೊಗುಗೆಗಳ ಬಗ್ಗೆ ಪಟ್ಟಿ ನೀಡಲಿ ಎಂದು ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಅವರಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ ತಿರುಗೇಟು ನೀಡಿದ್ದಾರೆ.
ಬೆಂಗಳೂರಿನಲ್ಲಿ ಇಂದು(ಫೆಬ್ರವರಿ.3) ವಿತ್ತ ಸಚಿವೆ ನಿರ್ಮಲಾ ಸೀತರಾಮನ್ ಅವರು ನೀಡಿರುವ ಹೇಳಿಕೆ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ನಮ್ಮ ಸರ್ಕಾರದ ಆರ್ಥಿಕ ಪರಿಸ್ಥಿತಿ ವಿಚಾರ ಪಕ್ಕಕ್ಕಿರಲಿ, ಕೇಂದ್ರ ಸರ್ಕಾರದ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಕೇಂದ್ರದಿಂದ ಯಾವ ಕೊಡುಗೆ ನೀಡಿದ್ದಾರೆ ಎಂದು ಮೊದಲು ಪಟ್ಟಿ ಕೊಡಲಿ. ನಾಲಿಗೆಯಿಂದ ಯಾವುದಾದರೂ ಮಾತು ಬಂದರೆ ಅದನ್ನು ಉಳಿಸಿಕೊಂಡು, ಅದರಂತೆ ನಡೆದುಕೊಳ್ಳಬೇಕು. ಕೇಂದ್ರದ ಬಜೆಟ್ ನೋಡಿದರೆ ನನಗೆ ನಾಚಿಕೆಯಾಗುತ್ತದೆ. ಅವರು ಮೊದಲು ತಮ್ಮ ಮಾತನ್ನು ಉಳಿಸಿಕೊಳ್ಳಲಿ ಎಂದು ವಾಗ್ದಾಳಿ ನಡೆಸಿದರು.
ಕೇಂದ್ರ ಸರ್ಕಾರ ಎಷ್ಟು ಸಾಲ ಮಾಡಿದೆ ಎಂಬುದನ್ನು ನಾವು ಅರಿಯಬೇಕು. ನಮ್ಮ ರಾಜ್ಯ ಸರ್ಕಾರ ಅಷ್ಟು ದೊಡ್ಡ ಪ್ರಮಾಣದ ಸಾಲವನ್ನು ಮಾಡಿಲ್ಲ. ಅಲ್ಲದೇ ನಾವು ಚುನಾವಣೆ ಸಂದರ್ಭದಲ್ಲಿ ಗ್ಯಾರಂಟಿ ಯೋಜನೆಗಳನ್ನು ಘೋಷಣೆ ಮಾಡಿದಾಗ ಕೂಡ ಪ್ರಧಾನಿ ನರೇಂದ್ರ ಮೋದಿ ಅವರು ನಮ್ಮ ರಾಜ್ಯ ದಿವಾಳಿಯಾಗಿದೆ ಎಂದು ಆರೋಪಿಸಿದ್ದರು. ಬಳಿಕ ಎಲ್ಲಾ ರಾಜ್ಯಗಳ ಚುನಾವಣೆಯಲ್ಲಿ ಅವರು ಗ್ಯಾರಂಟಿ ಯೋಜನೆ ನಕಲು ಮಾಡಿ ಘೋಷಿಸಿದ್ದಾರೆ. ಇನ್ನೂ ರಾಜ್ಯ ಸರ್ಕಾರ ಬೆಲೆ ಏರಿಕೆ ಮತ್ತು ನಿರುದ್ಯೋಗ ಸಮಸ್ಯೆಯಿಂದ ಬಳಲಿದ್ದ ಸಾರ್ವಜನಿಕರಿಗೆ ನೆರವಾಗಲು ಗ್ಯಾರಂಟಿ ಯೋಜನೆ ಘೋಷಣೆ ಮಾಡಿದೆಯೆ ಹೊರತು, ಮತಕ್ಕಾಗಿ ಅಲ್ಲ ಎಂದು ಕಿಡಿಕಾರಿದರು.
ಬೆಂಗಳೂರು: ಮಧ್ಯಪ್ರಾಚ್ಯದ ಯುದ್ಧದ ಹಿನ್ನೆಲೆಯಲ್ಲಿ ದೇಶಾದ್ಯಂತ ತಲೆದೋರಿರುವ ಅಡುಗೆ ಅನಿಲ ಅಭಾವದ ಬಿಸಿ ಇದೀಗ ರಾಜ್ಯದ ಅರಣ್ಯಗಳ ಮೇಲೆ ತಟ್ಟುವ…
ಮೈಸೂರು: ಕಳೆದ ನಾಲ್ಕೈದು ದಶಕಗಳ ನನ್ನ ರಾಜಕೀಯ ಬದುಕಿನಲ್ಲಿ ಅನೇಕ ಸೋಲುಗೆಲುವುಗಳನ್ನು ಕಂಡಿದ್ದರೂ, ಜನಸೇವೆಯನ್ನು ಎಂದಿಗೂ ಮರೆಯುವುದಿಲ್ಲ ಎಂದು ಮುಖ್ಯಮಂತ್ರಿ…
ಮೈಸೂರು: ನನ್ನ ಉಸಿರು ಇರುವವರೆಗೂ ನಾನು ರಾಜಕೀಯದಲ್ಲೇ ಸಕ್ರಿಯನಾಗಿರುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ವರುಣಾ ವಿಧಾನಸಭಾ ಕ್ಷೇತ್ರದ ವರಕೋಡು…
ಮೈಸೂರು: ಇರಾನ್ ಮತ್ತು ಇಸ್ರೇಲ್ ಯುದ್ಧದ ಪರಿಣಾಮ ಭಾರತದ ಕೃಷಿ ವಲಯದ ಮೇಲೂ ಬಿದ್ದಿದ್ದು, ಕೃಷಿ ಚಟುವಟಿಕೆ ಆರಂಭಿಸುವ ವೇಳೆ…
ಬೆಂಗಳೂರು: ಪೊಲೀಸರು ಎಷ್ಟೇ ಜಾಗೃತಿ ಮೂಡಿಸಿದರೂ ಸಹ ಜನರು ಎಚ್ಚೆತ್ತುಕೊಳ್ಳುತ್ತಿಲ್ಲ. ಹಾಗಾಗಿ ರಾಜ್ಯದಲ್ಲಿ ಡಿಜಿಟಲ್ ಅರೆಸ್ಟ್‌ನಿಂದ ಕೋಟ್ಯಂತರ ರೂ. ಹಣವನ್ನು…
ಬೆಂಗಳೂರು: ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್‌ಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಕೊಡುವ ಕೆಲಸವನ್ನು ಸರ್ಕಾರ ಮಾಡಲಿದೆ ಎಂದು ಸಚಿವ…