ಬೆಳಗಾವಿ: ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರ ವಿರುದ್ಧ ರಾಜ್ಯ ಕಾಂಗ್ರೆಸ್ ಸಚಿವರು ಅಸಮಾಧಾನಗೊಂಡಿದ್ದಾರೆಂಬ ವಿಚಾರ ಸುಳ್ಳು ಸುದ್ದಿಯಾಗಿದೆ. ಈ ಸುಳ್ಳನ್ನು ಹೇಳುವ ಮೂಲಕ ಪಕ್ಷದ ವರ್ಚಸ್ಸಿಗೆ ಧಕ್ಕೆ ತರುತ್ತಿದ್ದಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ.
ಬೆಳಗಾವಿಯಲ್ಲಿ ಇಂದು(ಜನವರಿ.20) ಸುರ್ಜೇವಾಲ ವಿರುದ್ಧ ಕೆಲ ಸಚಿವರು, ರಾಹುಲ್ ಗಾಂಧಿಗೆ ದೂರು ನೀಡಿದ್ದಾರೆಂಬ ವಿಚಾರಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಸುರ್ಜೇವಾಲ ಅವರು ಪಕ್ಷದ ಎಲ್ಲಾ ಸಚಿವರು ಹಾಗೂ ಶಾಸಕರನ್ನೂ ಒಂದೇ ರೀತಿ ನಡೆಸಿಕೊಳ್ಳುತ್ತಿಲ್ಲ ಎಂಬ ಸುದ್ದಿ ಸುಳ್ಳಾಗಿದೆ. ಅಲ್ಲದೇ ಅವರು ರಾಜ್ಯ ಕಾಂಗ್ರೆಸ್ ಉಸ್ತುವಾರಿಯಾಗಿ ಕಾರ್ಯ ನಿರ್ವಹಿಸುತ್ತಿರುವುದನ್ನು ಹಿಂಪಡೆಯಬೇಕು ಎಂದು ಹೇಳಿರುವುದು ಕೂಡ ಸುಳ್ಳು ಎಂದು ಹೇಳಿದರು.
ಇನ್ನೂ ಸುರ್ಜೇವಾಲ ಅವರ ನಡೆಯಿಂದ ರಾಹುಲ್ ಗಾಂಧಿ ಅವರಿಗೆ ದೂರು ನೀಡಬೇಕೆಂದು ಕೊಂಡಿರುವುದು ಸುಳ್ಳಾಗಿದ್ದು, ಕಾಂಗ್ರೆಸ್ ಪಕ್ಷದ ವರ್ಚಸ್ಸಿಗೆ ಧಕ್ಕೆ ತರುವ ಪ್ರಯತ್ನದಿಂದ ಈ ರೀತಿಯ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.