ರಾಜ್ಯ

ಸುರ್ಜೇವಾಲ ವಿರುದ್ಧಕೆಲ ಸಚಿವರ ಅಸಮಾಧಾನ ವಿಚಾರ| ಸುಳ್ಳು ಹೇಳಿಕೆ ನೀಡಿ ವರ್ಚಸ್ಸಿಗೆ ಧಕ್ಕೆ ತರುವ ಪ್ರಯತ್ನ: ಡಿಸಿಎಂ ಡಿಕೆಶಿ

ಬೆಳಗಾವಿ: ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲ ಅವರ ವಿರುದ್ಧ ರಾಜ್ಯ ಕಾಂಗ್ರೆಸ್‌ ಸಚಿವರು ಅಸಮಾಧಾನಗೊಂಡಿದ್ದಾರೆಂಬ ವಿಚಾರ ಸುಳ್ಳು ಸುದ್ದಿಯಾಗಿದೆ. ಈ ಸುಳ್ಳನ್ನು ಹೇಳುವ ಮೂಲಕ ಪಕ್ಷದ ವರ್ಚಸ್ಸಿಗೆ ಧಕ್ಕೆ ತರುತ್ತಿದ್ದಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ವಾಗ್ದಾಳಿ ನಡೆಸಿದ್ದಾರೆ.

ಬೆಳಗಾವಿಯಲ್ಲಿ ಇಂದು(ಜನವರಿ.20) ಸುರ್ಜೇವಾಲ ವಿರುದ್ಧ ಕೆಲ ಸಚಿವರು, ರಾಹುಲ್‌ ಗಾಂಧಿಗೆ ದೂರು ನೀಡಿದ್ದಾರೆಂಬ ವಿಚಾರಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಸುರ್ಜೇವಾಲ ಅವರು ಪಕ್ಷದ ಎಲ್ಲಾ ಸಚಿವರು ಹಾಗೂ ಶಾಸಕರನ್ನೂ ಒಂದೇ ರೀತಿ ನಡೆಸಿಕೊಳ್ಳುತ್ತಿಲ್ಲ ಎಂಬ ಸುದ್ದಿ ಸುಳ್ಳಾಗಿದೆ. ಅಲ್ಲದೇ ಅವರು ರಾಜ್ಯ ಕಾಂಗ್ರೆಸ್‌ ಉಸ್ತುವಾರಿಯಾಗಿ ಕಾರ್ಯ ನಿರ್ವಹಿಸುತ್ತಿರುವುದನ್ನು ಹಿಂಪಡೆಯಬೇಕು ಎಂದು ಹೇಳಿರುವುದು ಕೂಡ ಸುಳ್ಳು ಎಂದು ಹೇಳಿದರು.

ಇನ್ನೂ ಸುರ್ಜೇವಾಲ ಅವರ ನಡೆಯಿಂದ ರಾಹುಲ್‌ ಗಾಂಧಿ ಅವರಿಗೆ ದೂರು ನೀಡಬೇಕೆಂದು ಕೊಂಡಿರುವುದು ಸುಳ್ಳಾಗಿದ್ದು, ಕಾಂಗ್ರೆಸ್‌ ಪಕ್ಷದ ವರ್ಚಸ್ಸಿಗೆ ಧಕ್ಕೆ ತರುವ ಪ್ರಯತ್ನದಿಂದ ಈ ರೀತಿಯ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕರಾಗಿ ಡಿ.ಕೆ.ಶಿವಕುಮಾರ್‌ ಆಯ್ಕೆ

ಬೆಂಗಳೂರು : ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕನಾಗಿ ಡಿ.ಕೆ.ಶಿವಕುಮಾರ್‌ ಆಯ್ಕೆ ಆಗಿದ್ದಾರೆ. ಡಿಕೆಶಿ ಅವರ ಹೆಸರನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ…

1 hour ago

ಅಂತೂ ಇಂತು ಕುಂತಿ ಮಕ್ಕಳಿಗೆ ರಾಜ್ಯವಿಲ್ಲ ಎಂಬಂತಾಗಿದೆ ದಲಿತರ ಸ್ಥಿತಿ : ಮಾಜಿ ಸಚಿವ ಎನ್.ಮಹೇಶ್‌

ಕೊಳ್ಳೇಗಾಲ : ಅಂತೂ ಇಂತು ಕುಂತಿ ಮಕ್ಕಳಿಗೆ ರಾಜ್ಯವಿಲ್ಲ ಎಂಬಂತಾಗಿದೆ ದಲಿತರ ಸ್ಥಿತಿ ಎಂದು ಮಾಜಿ ಸಚಿವ ಎನ್‌.ಮಹೇಶ್‌ ಮಾರ್ಮಿಕವಾಗಿ…

2 hours ago

ಲೋಕಭವನದ ಗ್ಲಾಸ್‌ಹೌಸ್‌ನಲ್ಲೇ ಡಿಕೆಶಿ ಪ್ರಮಾಣವಚನ ಸ್ವೀಕಾರ ; ಸಾರ್ವಜನಿಕರಿಗಿಲ್ಲ ಪ್ರವೇಶ

ಬೆಂಗಳೂರು : ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ ಬೆನ್ನಲ್ಲಿಯೇ ನೂತನ ಮುಖ್ಯಮಂತ್ರಿ ಆಯ್ಕೆ ಮತ್ತು ಪ್ರಮಾಣವಚನ ಸ್ವೀಕಾರಕ್ಕೆ…

2 hours ago

ಪೊನ್ನಾಚಿ | ಚಿರತೆ ದಾಳಿಗೆ ಕುರಿ ಬಲಿ

ಹನೂರು : ಜಮೀನಿನಲ್ಲಿ ಕುರಿ ಮೇಯಿಸುತ್ತಿದ್ದ ಧನಗಾಹಿ ಮೇಲೆ ಚಿರತೆ ದಾಳಿ ನಡೆಸಿದ ವೇಳೆ ಕೂದಲೆಳೆ ಅಂತರದಲ್ಲಿ ಪ್ರಾಣಪಾಯದಿಂದ ಪಾರಾಗಿದ್ದಾರೆ.…

2 hours ago

ಮಣಿಪುರದಲ್ಲಿ ನಿಷೇಧಿತ ಸಂಘಟನೆಗಳಿಗೆ ಸೇರಿದ ಐವರು ಉಗ್ರರ ಬಂಧನ

ಇಂಫಾಲ: ಮಣಿಪುರದ ಇಂಫಾಲ ಪಶ್ಚಿಮ ಮತ್ತು ಪೂರ್ವ ಜಿಲ್ಲೆಗಳಲ್ಲಿ ಎರಡು ನಿಷೇಧಿತ ಸಂಘಟನೆಗಳಿಗೆ ಸೇರಿದ ಐದು ಉಗ್ರರನ್ನು ಭದ್ರತಾ ಪಡೆಗಳು…

4 hours ago

ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ: ಶಾಸಕ ಸಿ.ಪಿ.ಯೋಗೇಶ್ವರ್‌

ರಾಮನಗರ: ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ ಎಂದು ಶಾಸಕ ಸಿ.ಪಿ.ಯೋಗೇಶ್ವರ್‌ ಹೇಳಿದ್ದಾರೆ. ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು…

6 hours ago