ಕಾಸರಗೋಡು: ಬಿಜೆಪಿಯ ಮಾಜಿ ಸಂಸದ ನಳೀನ್ ಕುಮಾರ್ ಕಟೀಲ್ ಅವರಿಗೆ ಮತ್ತೆ ರಾಜಕೀಯವಾಗಿ ಸ್ಥಾನಮಾನ ಸಿಗಲಿ ಎಂದು ನಾನು ಪ್ರಾರ್ಥಿಸುತ್ತೇನೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಕೇರಳ ರಾಜ್ಯದ ಕಾಸರಗೋಡಿನ ಮಧೂರು ಶ್ರೀ ಮದನಂತೇಶ್ವರ ಸಿದ್ಧಿವಿನಾಯಕ ದೇವಸ್ಥಾನದ ಬ್ರಹ್ಮಕಲಶೋತ್ಸವದ ಹಿನ್ನೆಲೆ ದೇವಸ್ಥಾನಕ್ಕೆ ಭೇಟಿ ನೀಡಿದ ಬಳಿಕ ಅಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ನಳಿನ್ ಕುಮಾರ್ ಕಟೀಲ್ ಹಾಗೂ ಡಿಕೆ ಶಿವಕುಮಾರ್ ಒಂದೇ ವೇದಿಕೆಯನ್ನು ಹಂಚಿಕೊಂಡಿದ್ದರು. ಈ ವೇಳೆ ನಳಿನ್ ಕುಮಾರ್ ಪರ ಪ್ರಾರ್ಥನೆ ಮಾಡಿದ್ದಾರೆ.
ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದೇನು?
ಶ್ರೀ ಮದನಂತೇಶ್ವರ ಸಿದ್ಧಿವಿನಾಯಕ ದೇವಸ್ಥಾನದ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನನ್ನ ಮಿತ್ರ, ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಅವರು ಮಾಜಿ ಅಂದುಕೊಳ್ಳೋದು ಬೇಡ, ರಾಜಕಾರಣದಲ್ಲಿ ಯಾವುದೂ ಶಾಶ್ವತ ಅಲ್ಲ. ಹೀರೋ ಝೀರೋ ಆಗುತ್ತಾರೆ, ಝೀರೋ ಆಗಿರರುವರು ಹೀರೋ ಆಗುತ್ತಾರೆ. ರಾಜಕಾರಣದಲ್ಲಿ ಯಾವುದು ಶಾಶ್ವತವಲ್ಲ ಎಂದು ಹೇಳಿದರು.
ನಾನು ಹಾಗೂ ನಳೀನ್ ಅವರು ಒಂದೇ ವೇದಿಕೆಯಲ್ಲಿ ದೇವರನ್ನು ಪ್ರಾರ್ಥಿಸಿದ್ದೇವೆ. ಭಗವಂತ ನಿಮ್ಮ ಎಲ್ಲಾ ವಿಘ್ನ ನಿವಾರಣೆ ಮಾಡಿ ಮತ್ತೆ ಈ ರಾಜ್ಯದಲ್ಲಿ ಜನಪ್ರತಿನಿಧಿಯಾಗಿ ಸೇವೆ ಮಾಡುವ ಅವಕಾಶ ಕೊಡಲಿ. ಇನ್ನೊಮ್ಮೆ ರಾಜಕೀಯದಲ್ಲಿ ನಿಮಗೆ ಅವಕಾಶ ಸಿಗಲಿಯೆಂದು ನಾನೂ ಸಹ ಪ್ರಾರ್ಥನೆ ಮಾಡುತ್ತೇನೆ ಎಂದರು.
ಬೆಂಗಳೂರು: ದೇಶಾದ್ಯಂತ ತೀವ್ರ ವಿವಾದ ಸೃಷ್ಟಿಸಿರುವ ಮತದಾರರ ಪಟ್ಟಿ ಪರಿಷ್ಕರಣೆ(ಎಸ್‍ಐಆರ್) ಸಂಬಂಧ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‍ಕುಮಾರ್ ವಜಾ ಮತ್ತು…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಭೀಕರ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ಗೆ ಕಾನೂನು ಸಂಕಷ್ಟಗಳು ಮತ್ತಷ್ಟು ಬಿಗಿಯಾಗುತ್ತಿವೆ.…
ಮುಂಬೈ: ಬಾಲಿವುಡ್ ಚಿತ್ರರಂಗಕ್ಕೆ ಆಘಾತಕಾರಿ ಸುದ್ದಿ. ಹಿರಿಯ ನಟ ನಾನಾ ಪಾಟೇಕರ್ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು. ಗೋವಾದ…
ಮೈಸೂರು ಜಿ ಎಚ್.ಡಿ.ಕೋಟೆ ತಾಲ್ಲೂಕಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಶುಗರ್ ಮತ್ತು ಬಿಪಿಗೆ ಹಾಗೂ ಇತರೆ ಕಾಯಿಲೆಗಳಿಗೆ ಸಂಬಂಧಪಟ್ಟ…
ರಾಜ್ಯದಲ್ಲಿ ಈ ಬಾರಿ ತೀವ್ರ ಬರ ಪರಿಸ್ಥಿತಿ ಇದೆ. ಮುಂಗಾರು ಮಳೆ ಕೈಕೊಟ್ಟಿದ್ದರಿಂದ ಲಕ್ಷಾಂತರ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಮಾಡಿದ…
ರಾಜ್ಯ ಸರ್ಕಾರ ಹಾಲಿನ ದರವನ್ನು ಲೀಟರ್‌ಗೆ ೮ ರೂ. ಏರಿಕೆ ಮಾಡಲಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ. ಹಾಲಿನ ದರವನ್ನು ಒಂದೇ…