ರಾಜ್ಯ

ರಾಜ್ಯ ಬಜೆಟ್‌ ದೇಶಕ್ಕೆ ಮಾದರಿ: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ನಮ್ಮ ಸರ್ಕಾರದ ಈ ಬಾರಿಯ ಬಜೆಟ್‌ ದೇಶಕ್ಕೆ ಮಾದರಿ. ದೇಶದ ಬೇರೆ ರಾಜ್ಯಗಳು ನಮ್ಮ ಬಜೆಟ್‌ ಅನ್ನು ಗಮನಿಸುತ್ತಿದ್ದು, ನಮ್ಮ ರಾಜ್ಯದ ಬಜೆಟ್‌ ಉತ್ತಮವಾಗಿದೆ. ಹಾಗಾಗಿ ಕರ್ನಾಟಕದ ಜನತೆಗೆ ಅನುಕೂಲ ಆಗಲಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಇಂದು(ಮಾರ್ಚ್.8) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಈ ಬಾರಿ ಬಜೆಟ್‌ನಲ್ಲಿ ಸಿಎಂ ಸಿದ್ದಾಮಯ್ಯ ಅವರು ಟನಲ್‌ ರಸ್ತೆ ನಿರ್ಮಾಣಕ್ಕೆ 40 ಕೋಟಿ ರೂ.ಬಿಡುಗಡೆ ಮಾಡಿದ್ದಾರೆ. ಹೊಸ ಮೆಟ್ರೋ ಏನೇ ಮಾಡಿದರೂ ಅದರ ಜೊತೆಗೆ ಎಲಿವೇಟೇಡ್ ಕಾರಿಡಾರ್ ಸಹ ನಾವು ಮಾಡುತ್ತೇವೆ. ಶೇ.50% ಕಾರ್ಪೋರೇಷನ್, 50% ಬಿಎಂಆರ್‌ಸಿಎಲ್ ನೀಡುತ್ತದೆ. ಹೀಗಾಗಿ ನಾವು ಕಾರಿಡಾರ್‌ ಮಾಡುತ್ತೇವೆ ಎಂದರು.

ನಾವು ಹೇಳಿದಂತೆ 300 ಕಿ.ಮೀ. ರಸ್ತೆ ನಿರ್ಮಾಣ ಮಾಡುತ್ತೇವೆ. ಕಾಲುವೆ ಪಕ್ಕದಲ್ಲಿ 50 ಅಡಿ ಬಿಟ್ಟು ರಸ್ತೆ ನಿರ್ಮಾಣ ಮಾಡುತ್ತೇವೆ. ಅದರ ಬದಲಾಗಿ ಅವರಿಗೆ ಟಿಡಿಆರ್ ನೀಡಿ ಅಲ್ಲಿ ರೋಡ್ ಮಾಡುತ್ತೇವೆ. ಹೀಗಾಗಿ 3000 ಕೋಟಿ ರೂ. ವೆಚ್ಚದಲ್ಲಿ 300 ಕಿ.ಮೀ. ರಸ್ತೆ ನಿರ್ಮಾಣ ಆಗಲಿದೆ ಎಂದು ಹೇಳಿದರು.

ಬಿಜೆಪಿ ಅವರು ಏನು ಬೇಕಾದರೂ ಮಾತನಾಡಲಿ

ಇದೇ ಸಂದರ್ಭದಲ್ಲಿ ಬಿಜೆಪಿ ಹಲಾಲ್‌ ಬಜೆಟ್‌ ಎಂಬ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು, ಬಿಜೆಪಿಯವರು ಏನು ಬೇಕಾದರೂ ಮಾತಾಡಲಿ. ಪಾಪ ಅವರು ಇನ್ನೇನು ಹೇಳೋಕೆ ಸಾಧ್ಯ? ಸತ್ಯನಾ ಮುಚ್ಚಿಡೋಕೆ ಆಗುತ್ತಾ? ಬಿಜೆಪಿಯವರು ಬಜೆಟ್‌ನ ಕಣ್ಣಲ್ಲಿ ಓದಿದ್ದಾರೆ, ಕಿವಿಯಲ್ಲಿ ಕೇಳಿಸಿಕೊಡಿದ್ದಾರೆ. ಹೀಗಿರುವಾಗ ಅವರು ಇನ್ನೇನು ಮಾಡುತ್ತಾರೆ, ಹೀಗೇ ಮಾತನಾಡುವುದನ್ನು ಬಿಟ್ಟರೆ, ಬಾಯಿಂದ ಸುಳ್ಳು ಹೇಳಬಹುದು. ಹಾಗಾಗಿ ಅದನ್ನು ಮಾಡುತ್ತಿದ್ದಾರೆ ಎಂದು ತಿರುಗೇಟು ನೀಡಿದ್ದಾರೆ.

ಬೆಂಗಳೂರು ವಿವಿಗೆ ಮಾಜಿ ಪ್ರಧಾನಿ ಡಾ. ಮನಮೋಹನ ಸಿಂಗ್‌ ಹೆಸರಿಡುವ ವಿಚಾರ

ಇನ್ನು ಬೆಂಗಳೂರು ವಿವಿಗೆ ಮಾಜಿ ಪ್ರಧಾನಿ ಡಾ.ಮನಮೋಹನ್‌ ಸಿಂಗ್‌ ಹೆಸರಿಡುವ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಮನಮೋಹನ್ ಸಿಂಗ್ ಹೆಸರನ್ನು ಯಾಕೆ ಇಡಬಾರದು? ಅವರು ಯಾವ್ಯಾವುದೋ ಹೆಸರು ಇಡುತ್ತಾರೆ. ದೇಶದಲ್ಲಿ ಇಂಟರ್‌ನ್ಯಾಷನಲ್‌ ಏರ್‌ಪೋರ್ಟ್‌ಗೆ ಫ್ಲೈ ಓವರ್‌ ಮಾಡಿದ್ದು ಯಾರು? ಬೆಂಗಳೂರಿನ ನೆಲಮಂಗಲದಲ್ಲಿ ಫ್ಲೈಓವರ್‌ ಮಾಡಿದ್ದು ಯಾರು? ಎಲೆಕ್ಟ್ರಾನಿಕ್‌ ಸಿಟಿಗೆ ಫ್ಲೈಓವರ್‌ ಮಾಡಿದ್ದು ಯಾರು? ನರೇಗಾವನ್ನು ಜಾರಿಗೆ ತಂದಿದ್ದು ಯಾರು? ಬಿಜೆಪಿಯವರು ಏನಾದರೂ ಮಾಡಿದ್ದಾರೆ ಎಂದು ಪ್ರಶ್ನಿಸಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಭಾನುವಾರವಾದರೂ ತಪ್ಪಿಸುವಂತಿಲ್ಲ: ನವೆಂಬರ್‌.1ರಂದು ಶಾಲೆಗಳಲ್ಲಿ ರಾಜ್ಯೋತ್ಸವ ಕಡ್ಡಾಯ

ಬೆಂಗಳೂರು: ನವೆಂಬರ್‌ 1ರಂದು ಭಾನುವಾರ ಬಂದರೂ ರಾಜ್ಯದ ಎಲ್ಲಾ ಶಾಲೆಗಳಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಕಡ್ಡಾಯ ಎಂದು ರಾಜ್ಯ ಸರ್ಕಾರ…

4 hours ago

ಗುಂಡ್ಲುಪೇಟೆ: ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ

ಗುಂಡ್ಲುಪೇಟೆ: ತಾಲ್ಲೂಕಿನ ವಡಯ್ಯನಪುರ ಹಾಗೂ ಬೊಮ್ಮಲಾಪುರ ಗ್ರಾಮಗಳಲ್ಲಿ ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಕೊನೆಗೂ ಬೋನಿಗೆ ಬಿದ್ದಿದೆ. ಬೊಮ್ಮಲಾಪುರ…

4 hours ago

ದನ ಮೇಯಿಸಲು ಹೋದ ವ್ಯಕ್ತಿ ಮೇಲೆ ಚಿರತೆ ದಾಳಿ

ಹನೂರು: ತಾಲ್ಲೂಕಿನ ಗುಂಡಾಪುರ ಗ್ರಾಮದ ಸಮೀಪದ ಅರಣ್ಯ ಪ್ರದೇಶದಲ್ಲಿ ದನ-ಕುರಿ ಮೇಯಿಸಲು ಹೋಗಿದ್ದ ವ್ಯಕ್ತಿ ಮೇಲೆ ಚಿರತೆ ದಾಳಿ ನಡೆಸಿರುವ…

5 hours ago

ಮೈಸೂರು: ಬಾಲಕಿ ಮೇಲಿನ ಅತ್ಯಾಚಾರ–ಕೊಲೆ ಪ್ರಕರಣ: ಕಾಮುಕನಿಗೆ ಗಲ್ಲು ಶಿಕ್ಷೆ

ಮೈಸೂರು: ಮೈಸೂರಿನಲ್ಲಿ ಕಳೆದ ವರ್ಷದ ದಸರಾ ವೇಳೆ ನಡೆದಿದ್ದ ಬಾಲಕಿ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ ನ್ಯಾಯಾಲಯ ತೀರ್ಪು…

6 hours ago

ಸಯ್ಯಾಜಿರಾವ್ ರಸ್ತೆಯಲ್ಲಿ ಕುಸಿದು ಬಿದ್ದ ಬೃಹತ್ ವಿದ್ಯುತ್ ದೀಪಾಲಂಕಾರದ ಕಂಬ ; ಕಾರು, ಆಟೋ ಜಖಂ

ಮೈಸೂರು: ದಸರಾ ದೀಪಾಲಂಕಾರದ ನಡುವೆ ಅವಘಡವೊಂದು ಸಂಭವಿಸಿದೆ. ನಗರದ ಸಯ್ಯಾಜಿರಾವ್ ರಸ್ತೆಯಲ್ಲಿ ಬೃಹತ್ ವಿದ್ಯುತ್ ದೀಪಾಲಂಕಾರದ ಕಂಬ ಕುಸಿದು ಬಿದ್ದಿದ್ದು,…

6 hours ago

ಓದುಗರ ಪತ್ರ: ನಿಷ್ಪಕ್ಷಪಾತ ತನಿಖೆ ನಡೆಯಲಿ

ಇತ್ತೀಚಿನ ದಿನಗಳಲ್ಲಿ ಹೆಚ್ಚು ಸದ್ದುಮಾಡುತ್ತಿರುವ ಸ್ಟ್ರಿಂಗ್ ಆಪರೇಷನ್ ಸುದ್ದಿ, ಅದರ ಸುತ್ತ ನಡೆಯುವ ಆರೋಪ-ಪ್ರತ್ಯಾರೋಪಗಳು ಹಾಗೂ ಸಿಡಿ/ಪೆನ್ ಡ್ರೈವ್‌ಗಳ ವಿಚಾರ…

9 hours ago