ರಾಜ್ಯ

ಸಿನಿಮಾ ಇಲ್ಲದೇ ಬದುಕುವ ಶಕ್ತಿ ನಮಗೆ ಇದೆ: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಸಿನಿಮಾ ಇಲ್ಲದೇ ಬದುಕುವ ಶಕ್ತಿ ನಮಗೆ ಇದೆ. ಆದರೆ ಅವರಿಗೆ ಫಿಲಂ ಪ್ರಮೋಷನ್‌ಗೆ ಜನರೂ ಬೇಕು, ಸರ್ಕಾರವೂ ಬೇಕು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಇಂದು(ಮಾರ್ಚ್‌.4) ನಟ್ಟು, ಬೋಲ್ಟ್‌ ಟೈಟು ಮಾಡುವ ಹೇಳಿಕೆಗೆ ಚಿತ್ರರಂಗ ಟೀಕೆ ಮಾಡುತ್ತಿರುವ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಸಿನಿಮಾದವರು ಟೀಕೆ ಮಾಡಲಿ ಎಂದು ಹೇಳುತ್ತಿದ್ದೇನೆ. ಅವರಿಗೆಲ್ಲಾ ಎಷ್ಟು ಸಹಾಯ ಮಾಡಿದ್ದೇನೆ ಎಂದು ನನಗೂ ಗೊತ್ತಿದೆ, ಅದು ಸಹಾಯ ಮಾಡಿಸಿಕೊಂಡವರಿಗೂ ಗೊತ್ತಿದೆ ಎಂದು ಹೇಳಿದರು.

ಕರ್ನಾಟಕ ರಾಜ್ಯದ ಹಣ, ನೆಲ, ಜಲ ಹಾಗೂ ಭಾಷೆ ಸಿನಿಮಾದವರಿಗೂ ಅನ್ವಯಿಸುತ್ತದೆ. ಆದರೆ ಇದೀಗ ಅಂತಾರಾಷ್ಟ್ರೀಯ ಫಿಲ್ಮ್‌ ಫೆಸ್ಟಿವಲ್‌ ಮಾಡಿದ್ದು, ಕನ್ನಡ ಚಿತ್ರರಂಗ ಬೆಳೆಯಲಿಯೆಂದು ಅಷ್ಟೇ. ಸಿನಿಮಾ ಕಲಾವಿದ ರು ಅವರ ಚಿತ್ರಗಳಿಗೆ ಅವರ ಪ್ರಚಾರ ಮಾಡದೇ, ನಾವು ಬೆಳಿಗ್ಗೆ-ಸಂಜೆ ಮಾಡೋಕೆ ಆಗುತ್ತದೆಯೇ ಎಂದು ಪ್ರಶ್ನಿಸಿದರು.

ಹಿರಿಯ ನಿರ್ದೇಶಕ ಟಿ.ಎಸ್‌.ನಾಗಾಭರಣ ಅವರನ್ನು ಆಹ್ವಾನ ಮಾಡದೇ ಇರುವ ಬಗ್ಗೆ ಮಾತನಾಡಿದ ಅವರು, ನಾಗಾಭೃಣ ಅವರಿಗೆ ಆಮಂತ್ರಣ ನೀಡದೆ ಇರಬಹುದು. ಇದರಲ್ಲಿ ಇಲಾಖೆಯ ತಪ್ಪಿದೆಯೋ ಅಥವಾ ಇಲ್ಲವೋ ಗೊತ್ತಿಲ್ಲ. ಕಾರ್ಯಕ್ರಮ ಅವರದ್ದು, ನನಗೆ ಗೊತ್ತು ಅವರು ಟೀಕಿಸಿತ್ತಾರೆಂದು ಆದರೆ ಅವರು ಟೀಕಿಸಿದರೂ ಸರಿಯೇ ನನಗೇನೂ ಬೇಜಾರಿಲ್ಲ. ನಾವು ತಪ್ಪು ಮಾಡಿದ್ದರೆ ನಾವೇ ಸರಿ ಮಾಡಿಕೊಳ್ಳುತ್ತೇವೆ. ಅವರ ಕಡೆಯಿಂದ ತಪ್ಪಾಗಿದ್ದರೆ ಅವರು ಸರಿ ಮಾಡಿಕೊಳ್ಳಲಿ ಎಂದು ತಿಳಿಸಿದರು.

ಅರ್ಚನ ಎಸ್‌ ಎಸ್

Recent Posts

ಭಾನುವಾರವಾದರೂ ತಪ್ಪಿಸುವಂತಿಲ್ಲ: ನವೆಂಬರ್‌.1ರಂದು ಶಾಲೆಗಳಲ್ಲಿ ರಾಜ್ಯೋತ್ಸವ ಕಡ್ಡಾಯ

ಬೆಂಗಳೂರು: ನವೆಂಬರ್‌ 1ರಂದು ಭಾನುವಾರ ಬಂದರೂ ರಾಜ್ಯದ ಎಲ್ಲಾ ಶಾಲೆಗಳಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಕಡ್ಡಾಯ ಎಂದು ರಾಜ್ಯ ಸರ್ಕಾರ…

4 hours ago

ಗುಂಡ್ಲುಪೇಟೆ: ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ

ಗುಂಡ್ಲುಪೇಟೆ: ತಾಲ್ಲೂಕಿನ ವಡಯ್ಯನಪುರ ಹಾಗೂ ಬೊಮ್ಮಲಾಪುರ ಗ್ರಾಮಗಳಲ್ಲಿ ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಕೊನೆಗೂ ಬೋನಿಗೆ ಬಿದ್ದಿದೆ. ಬೊಮ್ಮಲಾಪುರ…

4 hours ago

ದನ ಮೇಯಿಸಲು ಹೋದ ವ್ಯಕ್ತಿ ಮೇಲೆ ಚಿರತೆ ದಾಳಿ

ಹನೂರು: ತಾಲ್ಲೂಕಿನ ಗುಂಡಾಪುರ ಗ್ರಾಮದ ಸಮೀಪದ ಅರಣ್ಯ ಪ್ರದೇಶದಲ್ಲಿ ದನ-ಕುರಿ ಮೇಯಿಸಲು ಹೋಗಿದ್ದ ವ್ಯಕ್ತಿ ಮೇಲೆ ಚಿರತೆ ದಾಳಿ ನಡೆಸಿರುವ…

5 hours ago

ಮೈಸೂರು: ಬಾಲಕಿ ಮೇಲಿನ ಅತ್ಯಾಚಾರ–ಕೊಲೆ ಪ್ರಕರಣ: ಕಾಮುಕನಿಗೆ ಗಲ್ಲು ಶಿಕ್ಷೆ

ಮೈಸೂರು: ಮೈಸೂರಿನಲ್ಲಿ ಕಳೆದ ವರ್ಷದ ದಸರಾ ವೇಳೆ ನಡೆದಿದ್ದ ಬಾಲಕಿ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ ನ್ಯಾಯಾಲಯ ತೀರ್ಪು…

6 hours ago

ಸಯ್ಯಾಜಿರಾವ್ ರಸ್ತೆಯಲ್ಲಿ ಕುಸಿದು ಬಿದ್ದ ಬೃಹತ್ ವಿದ್ಯುತ್ ದೀಪಾಲಂಕಾರದ ಕಂಬ ; ಕಾರು, ಆಟೋ ಜಖಂ

ಮೈಸೂರು: ದಸರಾ ದೀಪಾಲಂಕಾರದ ನಡುವೆ ಅವಘಡವೊಂದು ಸಂಭವಿಸಿದೆ. ನಗರದ ಸಯ್ಯಾಜಿರಾವ್ ರಸ್ತೆಯಲ್ಲಿ ಬೃಹತ್ ವಿದ್ಯುತ್ ದೀಪಾಲಂಕಾರದ ಕಂಬ ಕುಸಿದು ಬಿದ್ದಿದ್ದು,…

6 hours ago

ಓದುಗರ ಪತ್ರ: ನಿಷ್ಪಕ್ಷಪಾತ ತನಿಖೆ ನಡೆಯಲಿ

ಇತ್ತೀಚಿನ ದಿನಗಳಲ್ಲಿ ಹೆಚ್ಚು ಸದ್ದುಮಾಡುತ್ತಿರುವ ಸ್ಟ್ರಿಂಗ್ ಆಪರೇಷನ್ ಸುದ್ದಿ, ಅದರ ಸುತ್ತ ನಡೆಯುವ ಆರೋಪ-ಪ್ರತ್ಯಾರೋಪಗಳು ಹಾಗೂ ಸಿಡಿ/ಪೆನ್ ಡ್ರೈವ್‌ಗಳ ವಿಚಾರ…

9 hours ago