ಬೆಂಗಳೂರು: ಮಾಧ್ಯಮದ ಮೂಲಕ ಪಕ್ಷದ ಹುದ್ದೆ ಕೇಳ್ತಾರಾ ಎಂದು ಸಚಿವ ಸತೀಶ್ ಜಾರಕಿಹೊಳಿ ವಿರುದ್ಧ ಡಿಸಿಎಂ ಡಿ.ಕೆ.ಶಿವಕುಮಾರ್ ಕಿಡಿಕಾರಿದ್ದಾರೆ.
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಬಗ್ಗೆ ನಿನ್ನೆ ಸಚಿವ ಸತೀಶ್ ಜಾರಕಿಹೊಳಿ ಅವರು, ಹೈಕಮಾಂಡ್‌ಗೆ ಆಗ್ರಹಿಸಿದ್ದರು.
ಪೂರ್ಣ ಅವಧಿಗೆ ಕೆಪಿಸಿಸಿ ಅಧ್ಯಕ್ಷರನ್ನು ಆಯ್ಕೆ ಮಾಡಬೇಕು. ಇಲ್ಲದೇ ಬೇರೆಯವರನ್ನು ಆ ಸ್ಥಾನಕ್ಕೆ ಕೂರಿಸಿ ಎಂದು ಹೈಕಮಾಂಡ್‌ಗೆ ಒತ್ತಾಯಿಸಿದ್ದರು.
ಈ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಇಂದು ಸಚಿವ ಜಾರಕಿಹೊಳಿ ಹೇಳಿಕೆ ಸಂಬಂಧ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು, ಮಾಧ್ಯಮದ ಮೂಲಕ ಪಕ್ಷದಲ್ಲಿ ಹುದ್ದೇ ಕೇಳುತ್ತಾರಾ? ಸ್ಥಾನ ಸಿಗಬೇಕು ಎಂದರೆ ಮೀಡಿಯಾದಲ್ಲಿ ಕೊಡ್ತಾರಾ ಎಂದು ಮೀಡಿಯಾದಲ್ಲಿ ಅಂಗಡಿಯಲ್ಲಿ ಎಲ್ಲೂ ಸ್ಥಾನ ಸಿಗಲ್ಲ. ನಮ್ಮ ಕೆಲಸ ಗುರುತಿಸಿ ಹುದ್ದೆ ಕೊಡುತ್ತಾರೆ. ಕೆಲಸ ಮಾಡುವ ಆಧಾರದ ಮೇಲೆ ಸ್ಥಾನ ನಿರ್ಧಾರವಾಗುತ್ತದೆ ಎಂದು ಟಾಂಗ್ ಕೊಟ್ಟರು.
ಇನ್ನು ಮುಂದುವರಿದು ಮಾತನಾಡಿದ ಅವರು, ಅಂಗಡಿಯಲ್ಲೋ, ಮಾಧ್ಯಮದಲ್ಲೋ ಸ್ಥಾನ ಸಿಗುತ್ತಾ? ಮೀಡಿಯಾ ಮೂಲಕ ಯಾರಾದರೂ ಪಾರ್ಟಿಯ ಹುದ್ದೆ ಕೇಳ್ತಾರಾ? ಇದನ್ನೆಲ್ಲಾ ನಾನು ಹೊಸದಾಗಿ ನೋಡುತ್ತಿದ್ದೇನೆ ಎಂದು ಸತೀಶ್ ಜಾರಕಿಹೊಳಿ ವಿರುದ್ಧ ಕಿಡಿಕಾರಿದರು.
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…
ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…
ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…
ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…
ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್‌ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…
ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…