ರಾಜ್ಯ

ಮಾಜಿ ಸಿಎಂ ಬೊಮ್ಮಾಯಿ ಹೇಳಿಕೆಗೆ ತಿರುಗೇಟು ಕೊಟ್ಟ ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಡಿ.ಕೆ.ಶಿವಕುಮಾರ್‌ ಅವರ ಸಹನೆಯ ಕಟ್ಟೆ ಒಡೆಯಲಿದೆ ಎಂಬ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿಕೆಗೆ ಡಿಸಿಎಂ ಡಿ.ಕೆ.ಶಿವಕುಮಾರ್‌ ತಿರುಗೇಟು ನೀಡಿದ್ದಾರೆ.

ಡಿ.ಕೆ. ಶಿವಕುಮಾರ್ ಅವರ ಸಹನೆಯ ಕಟ್ಟೆ ಒಡೆಯಲಿದೆ ಎಂಬ ಬೊಮ್ಮಾಯಿ ಹೇಳಿಕೆ ಬಗ್ಗೆ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ವಿಚಾರವಾಗಿ ಮಾತನಾಡಲು ಪ್ರತ್ಯೇಕವಾಗಿ ಮತ್ತೊಂದು ಮಾಧ್ಯಮಗೋಷ್ಠಿ ನಡೆಸಿ ಉತ್ತರ ನೀಡುತ್ತೇನೆ. ಯಾರೆಲ್ಲಾ ಏನೇನು ಹೇಳಿದ್ದಾರೆ ಎಂದು ನೀವು ಪಟ್ಟಿ ಮಾಡಿಕೊಂಡಿರಿ, ಎಲ್ಲರಿಗೂ ಉತ್ತರ ನೀಡುತ್ತೇನೆ. ಅವರಿಗೆ ಹೊಸ ವರ್ಷದ ಸಂದರ್ಭದಲ್ಲಿ ಒಳ್ಳೆಯದಾಗಲಿ ಎಂದು ಶುಭಕೋರುತ್ತೇನೆ. ಅವರಿಗೆ ಸೂಜಿ ದಾರ ಕಳುಹಿಸಿಕೊಡುತ್ತೇನೆ. ಮೊದಲು ಅವರು ತಮ್ಮ ಒಡೆದ ಮನೆಯನ್ನು ಒಲಿದುಕೊಳ್ಳಲಿ ಎಂದು ತಿರುಗೇಟು ನೀಡಿದರು.

ಇನ್ನು ಸರ್ಕಾರದ ಹಣ ವ್ಯರ್ಥ ಮಾಡುತ್ತಿದ್ದಾರೆ ಎಂಬ ಬಿಜೆಪಿ ಹಾಗೂ ಜೆಡಿಎಸ್ ಆರೋಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಬಿಜೆಪಿ ಹಾಗೂ ಜೆಡಿಎಸ್‌ನವರು ಬರೀ ಆರೋಪ ಮಾಡುತ್ತಿರಲಿ. ನಾವು ನಮ್ಮ ಸಿದ್ಧಾಂತ, ಆಚಾರ ವಿಚಾರವನ್ನು ಸರ್ಕಾರದ ಮೂಲಕ ಹೇಳುತ್ತೇವೆ. ಬಸವಣ್ಣ, ಕೆಂಪೇಗೌಡ, ಅಂಬೇಡ್ಕರ್, ಗಾಂಧೀಜಿ ಅವರ ಪ್ರತಿಮೆ ಮಾಡುತ್ತೇವೆ. ಈ ದೇಶದಲ್ಲಿ ಅತಿ ಹೆಚ್ಚು ಪ್ರತಿಮೆಗಳಿರುವುದು ಅಂಬೇಡ್ಕರ್ ಅವರದ್ದು, ಕೆಲವರು ಇದನ್ನು ಮರೆತಿದ್ದಾರೆ. ಮರೆತಿದ್ದನ್ನು ನೆನಪಿಸಬೇಕಲ್ಲವೇ. ವಿಧಾನಸೌಧದ ಮುಂದೆ ಇರುವ ಅಂಬೇಡ್ಕರ್ ಅವರ ಹಾಗೂ ಗಾಂಧೀಜಿ, ನೆಹರೂ ಅವರ ಪ್ರತಿಮೆ ಸರ್ಕಾರದ್ದಲ್ಲವೇ? ಮುಂದಿನ ದಿನಗಳಲ್ಲಿ ಮನಮೋಹನ್ ಸಿಂಗ್ ಅವರು ಕೊಟ್ಟ ಕಾರ್ಯಕ್ರಮಗಳ ಬಗ್ಗೆಯೂ ಪ್ರಚಾರ ಮಾಡಲು ನಾವು ರೂಪುರೇಷೆ ಸಿದ್ಧಪಡಿಸುತ್ತಿದ್ದೇವೆ ಎಂದು ತಿಳಿಸಿದರು.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಅಧಿಕಾರ ಹಂಚಿಕೆ ಬಗ್ಗೆ ಹೈಕಮಾಂಡ್‌ ಬಹಿರಂಗಪಡಿಸಲಿ: ಶಾಸಕ ತನ್ವೀರ್‌ ಸೇಠ್‌

ಮೈಸೂರು: ಅಧಿಕಾರ ಹಂಚಿಕೆ ಬಗ್ಗೆ ಹೈಕಮಾಂಡ್‌ ಬಹಿರಂಗಪಡಿಸಲು ಎಂದು ಶಾಸಕ ತನ್ವೀರ್‌ ಸೇಠ್‌ ಆಗ್ರಹಿಸಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಮಾತನಾಡಿದ…

56 mins ago

ನಾಳೆಯಿಂದ ದ್ವಿತೀಯ ಪಿಯುಸಿ ಪರೀಕ್ಷೆ: ಅಕ್ರಮ ತಡೆಗೆ ಹದ್ದಿನ ಕಣ್ಣು

ಬೆಂಗಳೂರು: ರಾಜ್ಯದಲ್ಲಿ ನಾಳೆಯಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಲಿದ್ದು, ಯಾವುದೇ ಅಕ್ರಮ ನಡೆಯದಂತೆ ಪರೀಕ್ಷಾ ಬೋರ್ಡ್‌ ಹದ್ದಿನ ಕಣ್ಣಿಟ್ಟಿದೆ. ನಾಳೆಯಿಂದ…

1 hour ago

ರಾಮನಗರ| ಜಿಮ್‌ ಟ್ರೇನರ್‌ಗೆ ಪ್ರೇಯಸಿಯಿಂದಲೇ ಚಾಕು ಇರಿತ

ರಾಮನಗರ: ಜಿಮ್‌ ಟ್ರೇನರ್‌ಗೆ ಪ್ರೇಯಸಿಯೇ ಚಾಕುವಿನಿಂದ ಇರಿದು ಹಲ್ಲೆ ನಡೆಸಿರುವ ಘಟನೆ ರಾಮನಗರ ತಾಲ್ಲೂಕಿನಲ್ಲಿ ನಡೆದಿದೆ. ರಾಮನಗರದ ಬಿಡದಿಯಲ್ಲಿ ಈ…

1 hour ago

ಬಾಗೇಪಲ್ಲಿ ಶಾಸಕ ಸುಬ್ಬಾರೆಡ್ಡಿಗೆ ಸುಪ್ರೀಂಕೋರ್ಟ್‌ ರಿಲೀಫ್‌

ಬೆಂಗಳೂರು: ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ಕ್ಷೇತ್ರದ ಕಾಂಗ್ರೆಸ್‌ ಶಾಸಕ ಸುಬ್ಬಾರೆಡ್ಡಿಗೆ ಸುಪ್ರೀಂಕೋರ್ಟ್‌ ಬಗ್‌ ರಿಲೀಫ್‌ ನೀಡಿದೆ. ಶಾಸಕ ಸ್ಥಾನದಿಂದ ಅವರನ್ನು…

2 hours ago

ಶ್ರೀಮಂತರು ಗ್ಯಾರಂಟಿ ಯೋಜನೆಗಳನ್ನು ಬಿಟ್ಟು ಕೊಡುವುದರಲ್ಲಿ ತಪ್ಪೇನು: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಶ್ರೀಮಂತರು ಗ್ಯಾರಂಟಿ ಯೋಜನೆಗಳನ್ನು ಬಿಟ್ಟು ಕೊಡುವುದರಲ್ಲಿ ತಪ್ಪೇನಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರಶ್ನೆ ಮಾಡಿದ್ದಾರೆ. ಈ ಕುರಿತು ವಿಧಾನಸೌಧದಲ್ಲಿ…

2 hours ago

ಹೈಕೋರ್ಟ್‌ ಮೆಟ್ಟಿಲೇರಿದ ಮಲ್ಲಿಕಾರ್ಜುನ ಮುತ್ಯಾ

ಕಲಬುರ್ಗಿ: ತಮ್ಮ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಸ್ವಯಂಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ. ಕಲಬುರ್ಗಿ…

2 hours ago