Mysore
23
haze

Social Media

ಮಂಗಳವಾರ, 09 ಡಿಸೆಂಬರ್ 2025
Light
Dark

ಡಿಸಿಎಂ ಡಿ.ಕೆ.ಶಿವಕುಮಾರ್‌ ಬಿಜೆಪಿಗೆ ಬರಲ್ಲ: ಬಿ.ವೈ.ವಿಜಯೇಂದ್ರ ಸ್ಪಷ್ಟನೆ

ಹಾಸನ: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಯಾವುದೇ ಕಾರಣಕ್ಕೂ ಬಿಜೆಪಿ ಪಕ್ಷಕ್ಕೆ ಬರಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸ್ಪಷ್ಟನೆ ನೀಡಿದ್ದಾರೆ.

ಈ ಕುರಿತು ಹಾಸನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮುಂದಿನ ದಿನಗಳಲ್ಲಿ ರಾಜ್ಯ ಕಾಂಗ್ರೆಸ್‌ ಪಕ್ಷದಲ್ಲಿ ಕ್ಷಿಪ್ರ ರಾಜಕೀಯ ಬೆಳವಣಿಗೆಗಳು ನಡೆಯಲಿವೆ. ಈ ಬಗ್ಗೆ ನಾನು ಈ ಹಿಂದೆಯೇ ಹೇಳಿದ್ದೆ. ಅದರಂತೆ ಈಗ ರಾಜ್ಯ ಕಾಂಗ್ರೆಸ್‌ ಪಕ್ಷದಲ್ಲಿ ದಿನೇ ದಿನೇ ಒಳಜಗಳಗಳು ಹೆಚ್ಚಾಗಿವೆ. ಇದು ಕ್ಷಿಪ್ರ ರಾಜಕೀಯ ಬೆಳವಣಿಗೆಯ ಮುನ್ಸೂಚನೆ ಎಂದು ಹೇಳಿದರು.

ಇನ್ನು ಡಿಕೆಶಿ ದಿನೇ ದಿನೇ ಬಿಜೆಪಿಗೆ ಹತ್ತಿರವಾಗುತ್ತಿದ್ದಾರಾ ಎಂಬ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು, ಇಶಾ ಫೌಂಡೇಶನ್‌ ಶಿವರಾತ್ರಿ ಹಬ್ಬದ ಪ್ರಯುಕ್ತ ಹಮ್ಮಿಕೊಂಡಿದ್ದ ಧಾರ್ಮಿಕ ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಭಾಗಿಯಾಗಿದ್ದರು. ಆ ಕಾರ್ಯಕ್ರಮದಲ್ಲಿ ಡಿಸಿಎಂ ಡಿಕೆಶಿ ಸಹ ಪಾಲ್ಗೊಂಡಿದ್ದರು ಅಷ್ಟೇ ಎಂದು ಹೇಳಿದರು.

ಇನ್ನು ಬಿಜೆಪಿ ನಾಯಕರು ಪ್ರತ್ಯೇಕ ಸಭೆ ನಡೆಸುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಪಕ್ಷ ಮತ್ತು ನಾಯಕತ್ವದ ವಿಷಯಗಳ ಬಗ್ಗೆ ಈ ರೀತಿ ಚರ್ಚಿಸುವುದು ಪಕ್ಷದ ಹಿತಾಸಕ್ತಿಗೆ ವಿರುದ್ಧವಾಗಿದೆ ಎಂದು ಹೇಳಿದರು. ಪಕ್ಷಕ್ಕೆ ಸಹಾಯ ಮಾಡುವ ಸರಿಯಾದ ನಿರ್ಧಾರಗಳನ್ನು ಹೈಕಮಾಂಡ್‌ ತೆಗೆದುಕೊಳ್ಳುತ್ತದೆ ಎಂದು ಅವರು ಹೇಳಿದರು.

Tags:
error: Content is protected !!