ಹಾಸನ: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಯಾವುದೇ ಕಾರಣಕ್ಕೂ ಬಿಜೆಪಿ ಪಕ್ಷಕ್ಕೆ ಬರಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸ್ಪಷ್ಟನೆ ನೀಡಿದ್ದಾರೆ.
ಈ ಕುರಿತು ಹಾಸನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮುಂದಿನ ದಿನಗಳಲ್ಲಿ ರಾಜ್ಯ ಕಾಂಗ್ರೆಸ್ ಪಕ್ಷದಲ್ಲಿ ಕ್ಷಿಪ್ರ ರಾಜಕೀಯ ಬೆಳವಣಿಗೆಗಳು ನಡೆಯಲಿವೆ. ಈ ಬಗ್ಗೆ ನಾನು ಈ ಹಿಂದೆಯೇ ಹೇಳಿದ್ದೆ. ಅದರಂತೆ ಈಗ ರಾಜ್ಯ ಕಾಂಗ್ರೆಸ್ ಪಕ್ಷದಲ್ಲಿ ದಿನೇ ದಿನೇ ಒಳಜಗಳಗಳು ಹೆಚ್ಚಾಗಿವೆ. ಇದು ಕ್ಷಿಪ್ರ ರಾಜಕೀಯ ಬೆಳವಣಿಗೆಯ ಮುನ್ಸೂಚನೆ ಎಂದು ಹೇಳಿದರು.
ಇನ್ನು ಡಿಕೆಶಿ ದಿನೇ ದಿನೇ ಬಿಜೆಪಿಗೆ ಹತ್ತಿರವಾಗುತ್ತಿದ್ದಾರಾ ಎಂಬ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು, ಇಶಾ ಫೌಂಡೇಶನ್ ಶಿವರಾತ್ರಿ ಹಬ್ಬದ ಪ್ರಯುಕ್ತ ಹಮ್ಮಿಕೊಂಡಿದ್ದ ಧಾರ್ಮಿಕ ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾಗಿಯಾಗಿದ್ದರು. ಆ ಕಾರ್ಯಕ್ರಮದಲ್ಲಿ ಡಿಸಿಎಂ ಡಿಕೆಶಿ ಸಹ ಪಾಲ್ಗೊಂಡಿದ್ದರು ಅಷ್ಟೇ ಎಂದು ಹೇಳಿದರು.
ಇನ್ನು ಬಿಜೆಪಿ ನಾಯಕರು ಪ್ರತ್ಯೇಕ ಸಭೆ ನಡೆಸುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಪಕ್ಷ ಮತ್ತು ನಾಯಕತ್ವದ ವಿಷಯಗಳ ಬಗ್ಗೆ ಈ ರೀತಿ ಚರ್ಚಿಸುವುದು ಪಕ್ಷದ ಹಿತಾಸಕ್ತಿಗೆ ವಿರುದ್ಧವಾಗಿದೆ ಎಂದು ಹೇಳಿದರು. ಪಕ್ಷಕ್ಕೆ ಸಹಾಯ ಮಾಡುವ ಸರಿಯಾದ ನಿರ್ಧಾರಗಳನ್ನು ಹೈಕಮಾಂಡ್ ತೆಗೆದುಕೊಳ್ಳುತ್ತದೆ ಎಂದು ಅವರು ಹೇಳಿದರು.
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ2 ಆರೋಪಿ ದರ್ಶನ್‌ಗೆ ಬೆನ್ನುನೋವು ಮಾಯವಾಯ್ತಾ ಎಂಬ ಕುತೂಹಲ ಮನೆ ಮಾಡಿದೆ. ದರ್ಶನ್…
ಬೆಂಗಳೂರು: ಬಾಲಿವುಡ್ ನಟ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಬೆಂಗಳೂರಿನ ಪಬ್‌ನಲ್ಲಿ ಮಿಡಲ್ ಫಿಂಗಲ್ ತೋರಿಸಿ ದುರ್ವತನೆ ಮೆರೆದಿದ್ದು,…
ನವದೆಹಲಿ: ಶನಿವಾರ ಐದನೇ ದಿನವೂ ಇಂಡಿಗೋ ವಿಮಾನ ಹಾರಾಟ ಅಡಚಣೆಗಳು ಮುಂದುವರೆದಿದ್ದು, ದೇಶಾದ್ಯಂತ ಹಲವಾರು ವಿಮಾನಗಳು ರದ್ದಾಗಿವೆ. ಕಳೆದ ನಾಲ್ಕು…
ಮೈಸೂರು: 9 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ ಕಾಮುಕನನ್ನು ಗ್ರಾಮಸ್ಥರು ಹಿಡಿದು ಥಳಿಸಿರುವ ಘಟನೆ ನಡೆದಿದೆ. ಮೈಸೂರು ಜಿಲ್ಲೆಯ…
ಕೇರಳದ ಕೋಯಿಕ್ಕೋಡಿನಲ್ಲಿ ಸುದ್ದಿಸಂಸ್ಥೆಯೊಂದಕ್ಕೆ ಸಂದರ್ಶನ ನೀಡಿರುವ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ (ಎಎಸ್‌ಐ) ಮಾಜಿ ಪ್ರಾದೇಶಿಕ ನಿರ್ದೇಶಕರಾದ ಕೆ.ಕೆ. ಮಹಮ್ಮದ್…
ಕಂದಾಯ ಇಲಾಖೆ ಡಿಜಿಟಲ್ ಇ-ಸ್ಟ್ಯಾಂಪ್ ವ್ಯವಸ್ಥೆ ಜಾರಿಗೆ ದಿಟ್ಟ ಹೆಜ್ಜೆ ಇಟ್ಟಿದೆ. ಇದು ನಾಗರಿಕ ಸ್ನೇಹಿಯೂ ಆಗಿದೆ. ಇಂದಿಗೂ ತಾಲ್ಲೂಕು…