by vijayendra
ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು ನಡಿಗೆ ಕಾರ್ಯಕ್ರಮದಲ್ಲಿ ಶಾಸಕ ಮುನಿರತ್ನ ಹೈಡ್ರಾಮಾ ಹಾಗೂ ಹಲ್ಲೆ ಆರೋಪಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಶಾಸಕರ ಮೇಲೆ ಹಲ್ಲೆಗೆ ಯತ್ನಿಸಿರುವುದು ಖಂಡನೀಯ. ಡಿಸಿಎಂ ಡಿ.ಕೆ.ಶಿವಕುಮಾರ್ ತಮ್ಮ ಪಾಳೆಗಾರಿಕೆ ಸಂಸ್ಕೃತಿಯನ್ನು ಮತ್ತೊಮ್ಮೆ ಸಾಬೀತು ಮಾಡಿದ್ದಾರೆ. ಅಧಿಕಾರ ಶಾಶ್ವತ ಎನ್ನುವ ಭಾವನೆಯಲ್ಲಿ ಡಿಕೆಶಿ ಇದ್ದಾರೆ ಎಂದು ವಾಗ್ದಾಳಿ ನಡೆಸಿದರು.
ಇದನ್ನು ಓದಿ: ಡಿಸಿಎಂ ಡಿಕೆಶಿ ಬೆಂಗಳೂರು ನಡಿಗೆಯಲ್ಲಿ ಹೈಡ್ರಾಮಾ: ಶಾಸಕ ಮುನಿರತ್ನ ಪ್ರತಿಭಟನೆ
ಇನ್ನು ಮುಂದುವರಿದು ಮಾತನಾಡಿದ ಅವರು, ಡಿಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು ಜಿಲ್ಲೆಯ ಉಸ್ತುವಾರಿ ಸಚಿವರಾಗಿದ್ದರೂ ಕೂಡ ಎರಡೂವರೆ ವರ್ಷದಿಂದ ಬೆಂಗಳೂರಿನಲ್ಲಿ ಒಂದು ಗುಂಡಿ ಮುಚ್ಚಲು ಇವರಿಂದ ಸಾಧ್ಯವಾಗಿಲ್ಲ. ಈಗ ಗ್ರೇಟರ್ ಬೆಂಗಳೂರು ಅಥಾರಿಟಿ ಎಂಬ ಹೊಸ ಡ್ರಾಮಾ ಶುರು ಮಾಡಿದ್ದಾರೆ. ಇದರಿಂದ ಯಾರಿಗೆ ಏನು ಪ್ರಯೋಜನ? ಈಗ ಶಾಸಕರ ಮೇಲೆ ಹಲ್ಲೆಗೆ ಯತ್ನ ನಡೆದಿದೆ. ಓರ್ವ ಜನಪ್ರತಿನಿಧಿಗೆ ಗೌರವ ಕೊಡದಿರುವುದು ಸರಿಯಲ್ಲ. ಬರುವ ದಿನಗಳಲ್ಲಿ ಇದಕ್ಕೆ ತಕ್ಕ ಉತ್ತರಗಳನ್ನು ನೀಡುತ್ತೇವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಪ್ರಶಾಂತ್ ಎನ್ ಮಲ್ಲಿಕ್ ಮೈಸೂರು: ಸುತ್ತೂರು ಜಾತ್ರೆ ವೇಳೆ ರಾತ್ರಿ ಗದ್ದೆಯಲ್ಲಿ ಮಲಗಿದ್ದ ವ್ಯಕ್ತಿಗಳ ಮೇಲೆ ಕಾರು ಹರಿದ ಪರಿಣಾಮ…
ಸಿದ್ದಾಪುರ: ವಿರಾಜಪೇಟೆ ರಸ್ತೆಯಲ್ಲಿರುವ ಎಸ್‌ವೈಎಸ್ ಕಾಫಿ ಅಂಗಡಿಯಲ್ಲಿ ನಡೆದ ನಗದು ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದಾಪುರ ಪೊಲೀಸರು ಕೇರಳ ಮೂಲದ…
ಮಹಾದೇಶ್ ಎಂ ಗೌಡ ಹನೂರು: ತಾಲ್ಲೂಕಿನ ಕೆವಿಎನ್ ದೊಡ್ಡಿ ಗ್ರಾಮದ ಜಮೀನೊಂದರಲ್ಲಿ ಕಾಡಾನೆ ಲಗ್ಗೆ ಇಟ್ಟು ಅಪಾರ ಪ್ರಮಾಣದ ಬೆಳೆ…
ಬೆಂಗಳೂರು: ಕಾಲ್ತುಳಿತ ಪ್ರಕರಣದಿಂದಾಗಿ ಈ ಬಾರಿಯ ಬಹು ನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ಪಂದ್ಯಗಳು ನಡುವುದೇ ಡೋಲಾಯಮಾನ ಸ್ಥಿತಿಯಲ್ಲಿರುವಾಗಲೇ ಉದ್ಘಾಟನಾ…
ಬೆಂಗಳೂರು: ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾ ಅವರಿಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣ ಸಂಬಂಧ ಕಾಂಗ್ರೆಸ್ ಮುಖಂಡ ರಾಜೀವ್‌ಗೌಡಗೆ ಹೈಕೋರ್ಟ್ ತೀವ್ರ…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿರುವ ಪ್ರಮುಖ ಆರೋಪಿ ಪವಿತ್ರಾ ಗೌಡಗೆ ವಾರಕ್ಕೊಮ್ಮೆ ಮನೆ ಊಟ…