ರಾಜ್ಯ

ಚಂದ್ರಶೇಖರನಾಥ ಸ್ವಾಮೀಜಿ ವಿರುದ್ಧ ಎಫ್‌ಐಆರ್‌ ಪ್ರಕರಣ: ವಿಪಕ್ಷ ನಾಯಕ ಆರ್‌.ಅಶೋಕ್‌ಗೆ ಡಿಸಿಎಂ ಡಿಕೆಶಿ ತಿರುಗೇಟು

ಬೆಂಗಳೂರು: ಚಂದ್ರಶೇಖರನಾಥ ಸ್ವಾಮೀಜಿಯ ವಿರುದ್ಧ ಎಫ್‌ಐಆರ್‌ ದಾಖಲಾಗಿರುವ ಪ್ರಕರಣದಲ್ಲಿ ವಿಪಕ್ಷ ನಾಯಕ ಆರ್‌.ಅಶೋಕ್‌ ಅವರು ಸರ್ಕಾರದ ವಿರುದ್ಧ ನೀಡುವ ಹೇಳಿಕೆಗಳಿಗೆ ಡಿಸಿಎಂ ಡಿ.ಕೆ.ಶಿವಕುಮಾರ್‌ ತಿರುಗೇಟು ನೀಡಿದ್ದಾರೆ.

ಬೆಂಗಳೂರಿನಲ್ಲಿ ಇಂದು ಆರ್‌.ಅಶೋಕ್‌ ಹೇಳಿಕೆಗೆ ಸಂಬಂಧಿಸಿದಂತೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಚಂದ್ರಶೇಖರನಾಥ ಸ್ವಾಮೀಜಿ ಅವರ ಪ್ರಕರಣದ ಬಗ್ಗೆ ಈಗಾಗಲೇ ಸಿಎಂ ಸಿದ್ದರಾಮಯ್ಯ ಉತ್ತರ ನೀಡಿದ್ದಾರೆ. ಆದರೆ ಅಶೋಕ್ ಇದೇ ವಿಚಾರವನ್ನು ಯಾಕೆ ಚರ್ಚೆಗೆ ಗ್ರಾಸವಾಗುವಂತೆ ಮಾಡಿದ್ದಾರೆ ಎಂಬುದು ತಿಳಿಯುತ್ತಿಲ್ಲ. ಈ ಹಿಂದೆ ಜೆಡಿಎಸ್‌ ಸರ್ಕಾರ ಅಧಿಕಾರದಲ್ಲಿದ್ದಾಗ ಬಾಲಗಂಗಾಧರನಾಥ ಸ್ವಾಮೀಜಿ ಮೇಲೆ ಕೇಸ್‌ ಹಾಕಿದಾಗ ಮತ್ತು ನಿರ್ಮಲಾನಂದನಾಥ ಸ್ವಾಮೀಜಿ ಅವರ ಫೋನ್‌ ಟ್ಯಾಪ್‌ ಮಾಡಿದಾಗ ಎಲ್ಲಿ ಹೋಗಿದ್ದರೂ? ಯಾಕೆ ಆ ವೇಳೆ ಮಾತನಾಡಲಿಲ್ಲ ಎಂದು ವಾಗ್ದಾಳಿ ನಡೆಸಿದರು.

ಇನ್ನು ನಮ್ಮ ದೇಶದ ಸಂವಿಧಾನದ ಪ್ರಕಾರ ಜಾತ್ಯಾತೀತ ಹಾಗೂ ಸಮಾಜವಾದಿಯಾಗಿ ಬದುಕುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ಈ ಕುರಿತು ಯಾರು ಯಾರಾ ಹಕ್ಕುಗಳ ಬಗ್ಗೆ ಮತ್ತು ಜಾತಿಯ ಬಗ್ಗೆ ಮಾತನಾಡುವುದು ಬೇಡವೆಂದು ನಾನು ನಮ್ಮ ರಾಜ್ಯದ ಎಲ್ಲ ಸ್ವಾಮೀಜಿಗಳಿಗೂ ಮನವಿ ಮಾಡುತ್ತೇನೆ. ಕಾಂಗ್ರೆಸ್‌ ಸರ್ಕಾರದಲ್ಲಿ ಸಂವಿಧಾನ ಹಾಗೂ ಮಾನವ ಧರ್ಮ ಎರಡಕ್ಕೂ ಆದ್ಯತೆ ನೀಡಲಾಗಿದೆ. ಅಲ್ಲದೇ ಕಾನೂನಿಗಿಂತ ಯಾರು ದೊಡ್ಡವರಲ್ಲ. ನಾನು ಕೂಡ ಮುಸ್ಲಿಮರಿಗೆ ಮತದಾನ ಇಲ್ಲದಂತೆ ಮಾಡಬೇಕು ಎಂದು ಹೇಳಿದರೂ ಕೂಡ ನನ್ನ ಮೇಲೂ ಕೇಸ್‌ ಹಾಕುತ್ತಾರೆ ಎಂದರು.

ಅರ್ಚನ ಎಸ್‌ ಎಸ್

Recent Posts

ದಸರಾ ಚಿತ್ರೋತ್ಸವ ರದ್ದಾಗದಿರಲಿ

ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…

1 hour ago

ಚಲನೆ ಕೇವಲ ವ್ಯಾಯಾಮವಲ್ಲ ಆರೋಗ್ಯದ ಶಕ್ತಿ

ಇಂದು ನಮ್ಮ ದೇಶದ ಆರೋಗ್ಯ ಕ್ಷೇತ್ರದಲ್ಲಿ ಒಂದು ‘ನಿಶ್ಯಬ್ದ ಕ್ರಾಂತಿ’ ಸಂಭವಿಸುತ್ತಿದೆ. ಒಂದು ಕಾಲದಲ್ಲಿ ಪ್ಲೇಗ್, ಕಾಲರಾದಂತಹ ಸಾಂಕ್ರಾಮಿಕ ರೋಗಗಳು…

1 hour ago

ಒಂದು ಸೈನ್ಯದ ಆತ್ಮಾಹುತಿ ತಡೆದಿದ್ದರು ಅರಸು

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಮಾಜಿ ಮುಖ್ಯಮಂತ್ರಿ ದೇವರಾಜ ಅರಸರನ್ನು ಇತಿಹಾಸ ಪದೇ ಪದೇ ಸ್ಮರಿಸುತ್ತದೆ. ಅಂದ ಹಾಗೆ ಮುಖ್ಯಮಂತ್ರಿಗಳಾದವರು…

1 hour ago

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

12 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

13 hours ago