ಚಿಕ್ಕಮಗಳೂರು/ಶೃಂಗೇರಿ: ಕೇಂದ್ರ ಸರ್ಕಾರದಿಂದ ದೇಶದ 28 ರಾಜ್ಯಗಳಿಗೂ ತೆರಿಗೆ ಹಂಚಿಕೆ ಮಾಡಿದ್ದು, ಕರ್ನಾಟಕ ರಾಜ್ಯಕ್ಕೆ ತೆರಿಗೆ ನೀಡುವಲ್ಲಿ ಅನ್ಯಾಯ ಮಾಡಿದೆ. ಹಾಗಾಗಿ ನಮ್ಮ ಹಕ್ಕಿಗೆ ಮತ್ತು ನಮ್ಮ ತೆರಿಗೆಗೆ ಹೋರಾಟ ಮಾಡಬೇಕಾಗಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಕಿಡಿಕಾರಿದ್ದಾರೆ.
ಶೃಂಗೇರಿಯಲ್ಲಿ ಇಂದು(ಜನವರಿ.11) ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಕೇಂದ್ರ ಸರ್ಕಾರದಿಂದ ನಿನ್ನೆ(ಜ.10) ಪ್ರತಿಯೊಂದು ರಾಜ್ಯಗಳಿಗೂ ತೆರಿಗೆ ಹಣವನ್ನು ಹಂಚಿಕೆ ಮಾಡಿದ್ದು, ಕರ್ನಾಟಕ ರಾಜ್ಯಕ್ಕೆ 6310.40 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿದೆ. ಅದರಲ್ಲಿ ನಾನು ಉತ್ತರ ಪ್ರದೇಶದ ಬಗ್ಗೆ ಮಾತನಾಡುವುದಿಲ್ಲ, ಏಕೆಂದರೆ ಅದು ದೊಡ್ಡ ರಾಜ್ಯ. ಆದರೆ ಕೇಂದ್ರದಿಂದ ನಮ್ಮ ರಾಜ್ಯಕ್ಕೆ ಸರಿಯಾದ ಅನುಪಾತದಲ್ಲಿ ತೆರಿಗೆ ಪಾಲು ಹಂಚಿಕೆಯಾಗದೇ ಅನ್ಯಾಯವಾಗಿದೆ. ಹೀಗಿದ್ದರೂ ರಾಜ್ಯದ ಸಂಸದರೂ ಈ ಬಗ್ಗೆ ಪ್ರಶ್ನಿಸಿದೇ ಮೌನವಹಿಸಿರುವರು ಎಂದು ವಾಗ್ದಾಳಿ ನಡೆಸಿದ್ದಾರೆ.
ನಮ್ಮ ರಾಜ್ಯಕ್ಕೆ ಆಗಿರುವ ಅನ್ಯಾಯದ ಬಗ್ಗೆ ಪರಿಶೀಲನೆ ಮಾಡುತ್ತೇವೆ. ಅಲ್ಲದೇ ಮುಖ್ಯಮಂತ್ರಿಗಳು ಸಹ ದೊಡ್ಡ ಅಧ್ಯಯನ ನಡೆಸುತ್ತಿದ್ದಾರೆ. ಹೀಗಾಗಿ ನಮ್ಮ ಹಕ್ಕಿಗಾಗಿ ನಮ್ಮ ತೆರಿಗೆ ಹೋರಾಟ ನಡೆಸಬೇಕು ಎಂದು ಹೇಳಿದ್ದಾರೆ.
ಮದ್ದೂರು: ದುಷ್ಕರ್ಮಿಗಳು ದೇವಾಲಯಗಳ ಬಾಗಿಲು ಮುರಿದು ಸರಣಿ ಕಳ್ಳತನ ಮಾಡಿರುವ ಘಟನೆ ತಾಲ್ಲೂಕಿನ ಕೆಸ್ತೂರು ಪೊಲೀಸ್ ಠಾಣೆ ವ್ಯಾಪ್ತಿಯ ಅಡಗನಹಳ್ಳಿ…
ಮೈಸೂರು : ಎನ್‌ಸಿಬಿ ಪೊಲೀಸರು ನಗರದ ಹೆಬ್ಬಾಳು ಕೈಗಾರಿಕಾ ಪ್ರದೇಶದ ರಾಸಾಯನಿಕ ತಯಾರಿಕಾ ಘಟಕದ ಮೇಲೆ ದಾಳಿ ನಡೆಸಿದ ನಂತರ…
ಚಿಕ್ಕಬಳ್ಳಾಪುರ : ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಬೆದರಿಕೆ ಹಾಕಿದ್ದ ಪ್ರಕರಣದಲ್ಲಿ ಆರೋಪಿ ರಾಜೀವ್ ಗೌಡಗೆ ಜಾಮೀನು…
ಬೆಂಗಳೂರು : ದಕ್ಷಿಣ ಭಾರತದ ಪ್ರಮುಖ ರಿಯಲ್ ಎಸ್ಟೇಟ್ ಕಂಪನಿ ಕಾನ್ಫಿಡೆಂಟ್ ಗ್ರೂಪ್‌ನ ಸ್ಥಾಪಕ ಮತ್ತು ಚೇರ್ಮನ್ ಡಾ.ಸಿ.ಜೆ. ರಾಯ್…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು ‘ಮಾನಹಾನಿಕರ’ ಪೋಸ್ಟ್‌ನ್ನು ಬಿಜೆಪಿಯ ‘ಎಕ್ಸ್’ ಖಾತೆಯಲ್ಲಿ…
ಮಂಡ್ಯ : ಸಕ್ಕರೆ ನಗರ ಮಂಡ್ಯದಲ್ಲಿ ನಡೆದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು ರಾಜ್ಯ, ರಾಷ್ಟ್ರ ಹಾಗೂ…