ರಾಜ್ಯ

ಕೇಂದ್ರದಿಂದ ತೆರಿಗೆ ಪಾಲು ಹಂಚಿಕೆಯಲ್ಲಿ ರಾಜ್ಯಕ್ಕೆ ಅನ್ಯಾಯ: ಡಿಸಿಎಂ ಡಿ.ಕೆ.ಶಿವಕುಮಾರ್‌ಕಿಡಿ

ಚಿಕ್ಕಮಗಳೂರು/ಶೃಂಗೇರಿ: ಕೇಂದ್ರ ಸರ್ಕಾರದಿಂದ ದೇಶದ 28 ರಾಜ್ಯಗಳಿಗೂ ತೆರಿಗೆ ಹಂಚಿಕೆ ಮಾಡಿದ್ದು, ಕರ್ನಾಟಕ ರಾಜ್ಯಕ್ಕೆ ತೆರಿಗೆ ನೀಡುವಲ್ಲಿ ಅನ್ಯಾಯ ಮಾಡಿದೆ. ಹಾಗಾಗಿ ನಮ್ಮ ಹಕ್ಕಿಗೆ ಮತ್ತು ನಮ್ಮ ತೆರಿಗೆಗೆ ಹೋರಾಟ ಮಾಡಬೇಕಾಗಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಕಿಡಿಕಾರಿದ್ದಾರೆ.

ಶೃಂಗೇರಿಯಲ್ಲಿ ಇಂದು(ಜನವರಿ.11) ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಕೇಂದ್ರ ಸರ್ಕಾರದಿಂದ ನಿನ್ನೆ(ಜ.10) ಪ್ರತಿಯೊಂದು ರಾಜ್ಯಗಳಿಗೂ ತೆರಿಗೆ ಹಣವನ್ನು ಹಂಚಿಕೆ ಮಾಡಿದ್ದು, ಕರ್ನಾಟಕ ರಾಜ್ಯಕ್ಕೆ 6310.40 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿದೆ. ಅದರಲ್ಲಿ ನಾನು ಉತ್ತರ ಪ್ರದೇಶದ ಬಗ್ಗೆ ಮಾತನಾಡುವುದಿಲ್ಲ, ಏಕೆಂದರೆ ಅದು ದೊಡ್ಡ ರಾಜ್ಯ. ಆದರೆ ಕೇಂದ್ರದಿಂದ ನಮ್ಮ ರಾಜ್ಯಕ್ಕೆ ಸರಿಯಾದ ಅನುಪಾತದಲ್ಲಿ ತೆರಿಗೆ ಪಾಲು ಹಂಚಿಕೆಯಾಗದೇ ಅನ್ಯಾಯವಾಗಿದೆ. ಹೀಗಿದ್ದರೂ ರಾಜ್ಯದ ಸಂಸದರೂ ಈ ಬಗ್ಗೆ ಪ್ರಶ್ನಿಸಿದೇ ಮೌನವಹಿಸಿರುವರು ಎಂದು ವಾಗ್ದಾಳಿ ನಡೆಸಿದ್ದಾರೆ.

ನಮ್ಮ ರಾಜ್ಯಕ್ಕೆ ಆಗಿರುವ ಅನ್ಯಾಯದ ಬಗ್ಗೆ ಪರಿಶೀಲನೆ ಮಾಡುತ್ತೇವೆ. ಅಲ್ಲದೇ ಮುಖ್ಯಮಂತ್ರಿಗಳು ಸಹ ದೊಡ್ಡ ಅಧ್ಯಯನ ನಡೆಸುತ್ತಿದ್ದಾರೆ. ಹೀಗಾಗಿ ನಮ್ಮ ಹಕ್ಕಿಗಾಗಿ ನಮ್ಮ ತೆರಿಗೆ ಹೋರಾಟ ನಡೆಸಬೇಕು ಎಂದು ಹೇಳಿದ್ದಾರೆ.

 

ಅರ್ಚನ ಎಸ್‌ ಎಸ್

Recent Posts

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮಹಿಷ ದಸರಾಗೆ ಡೇಟ್ ಫಿಕ್ಸ್!

ಮೈಸೂರು: ಅಕ್ಟೋಬರ್ 10ರಂದು ಮೈಸೂರಿನಲ್ಲಿ ಮಹಿಷ ದಸರಾ ಆಚರಣೆ ನಡೆಯಲಿದೆ. ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9 ಗಂಟೆಗೆ ಮಹಿಷ ಪ್ರತಿಮೆಗೆ…

8 hours ago

ಮೈಸೂರು ದಸರಾ 2026: ಸಿಎಂ ಡಿ.ಕೆ.ಶಿವಕುಮಾರ್‌ಗೆ ಅಧಿಕೃತ ಆಹ್ವಾನ

ಬೆಂಗಳೂರು: ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…

8 hours ago

ಕಾಡಾನೆಗೆ ಲಾರಿ ಡಿಕ್ಕಿ ಹೊಡೆಸಲು ಯತ್ನ: ಚಾಲಕನಿಗೆ ₹5,000 ದಂಡ

ಚಾಮರಾಜನಗರ: ಗುಂಡ್ಲುಪೇಟೆಯ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಅರಣ್ಯ ರಸ್ತೆಯಲ್ಲಿ ರಸ್ತೆ ದಾಟುತ್ತಿದ್ದ ಕಾಡಾನೆಯ ಮೇಲೆಯೇ ಲಾರಿ ಚಲಾಯಿಸಲು ಯತ್ನಿಸಿದ…

8 hours ago

ಅಕ್ಟೋಬರ್.‌11ಕ್ಕೆ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಕಾರ್ಯಕ್ರಮ

ಮಂಡ್ಯ: ಇದೇ ಅಕ್ಟೋಬರ್.‌11ಕ್ಕೆ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಕಾರ್ಯಕ್ರಮ ನಡೆಯಲಿದೆ. ದಸರಾ ಉತ್ಸವದ ಪ್ರಯುಕ್ತ ನಡೆಯಲಿರುವ…

8 hours ago

ಹನೂರು-ಪಾಲಾರ್ ರಸ್ತೆಯ ಕೌದಳ್ಳಿ ಸೇತುವೆ ಹಾನಿ: ಭಾರಿ ವಾಹನ ಸಂಚಾರಕ್ಕೆ ನಿರ್ಬಂಧ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಹನೂರು-ಪಾಲಾರ್ (ಎಲ್ಲೇಮಾಳ-ಕೌದಳ್ಳಿ) ಜಿಲ್ಲಾ ಮುಖ್ಯ…

9 hours ago

ಮೈಸೂರಿನಲ್ಲಿ ಯುವಕನ ಬರ್ಬರ ಹತ್ಯೆ..!

ಮೈಸೂರು: ಗಣೇಶ ಹಬ್ಬಕ್ಕೆ ಹಾಸನದಿಂದ ಮೈಸೂರಿಗೆ ಬಂದಿದ್ದ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. 20 ವರ್ಷದ ಗೌರವ್‌…

10 hours ago