Mysore
22
few clouds

Social Media

ಸೋಮವಾರ, 17 ಫೆಬ್ರವರಿ 2025
Light
Dark

ಕೇಂದ್ರ ಬಜೆಟ್‌: ಕೇಂದ್ರ ಹಣಕಾಸು ಸಚಿವರಿಗೆ ಪತ್ರ ಬರೆದ ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಫೆಬ್ರವರಿ 1 ರಂದು ಕೇಂದ್ರ ಬಜೆಟ್‌ ಮಂಡನೆಯಾಗಲಿದ್ದು, ಈ ಹಿನ್ನೆಲೆಯಲ್ಲಿ ಬೆಂಗಳೂರಿಗೆ ಹೆಚ್ಚಿನ ಅನುದಾನ ಬಿಡುಗಡೆ ಮಾಡುವಂತೆ ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್‌ ಅವರಿಗೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಪತ್ರ ಬರೆದಿದ್ದಾರೆ.

ಈ ವಿಚಾರಕ್ಕೆ ಸಂಬಂಧಿಸಿದಂತೆ ಪತ್ರ ಬರೆದಿರುವ ಅವರು, ಬೆಂಗಳೂರು ಉತ್ತರ-ದಕ್ಷಿಣ ಕಾರಿಡಾರ್ ​ಗೆ 15 ಸಾವಿರ ಕೋಟಿ ರೂ. ಪೂರ್ವದಿಂದ ಪಶ್ಚಿಮ ಕಾರಿಡಾರ್​​ಗೆ 25 ಸಾವಿರ ಕೋಟಿ ರೂ. ರಿಂಗ್ ರಸ್ತೆ ಮೇಲ್ದರ್ಜೆಗೆ 8,916 ಕೋಟಿ ರೂ. ಗಳ ಅಗತ್ಯ ಇದೆ. ಬೆಂಗಳೂರಿನ ಪ್ರಮುಖ 17 ಫ್ಲೈ ಓವರ್​ಗೆ 12 ಸಾವಿರ ಕೋಟಿ ರೂ ಅಗತ್ಯವಿದೆ. ರಾಜ ಕಾಲುವೆ ನಿರ್ಣಹಣೆ, ವಿಸ್ತರಣೆಗೆ 3 ಸಾವಿರ ಕೋಟಿ ರೂ. ಅಗತ್ಯ ಇದೆ. ಬೆಂಗಳೂರಿನಲ್ಲಿ ಸದ್ಯ ಒಂದುವರೆ ಕೋಟಿ ಜನಸಂಖ್ಯೆ ಇದೆ. ಬಿಸಿನೆಸ್ ಕಾರಿಡಾರ್ ​ಗೆ 27 ಸಾವಿರ ಕೋಟಿ ಅನುದಾನ ಅಗತ್ಯವಿದೆ. ಹೀಗಾಗಿ ಈ ಬಾರಿಯ ಬಜೆಟ್​ ನಲ್ಲಿ ಬೆಂಗಳೂರಿಗೆ ಆದ್ಯತೆ ನೀಡಿ ಹೆಚ್ಚಿನ ಅನುದಾನ ಬಿಡುಗಡೆ ಮಾಡುವಂತೆ ಪತ್ರದಲ್ಲಿ ಮನವಿ ಮಾಡಿದ್ದಾರೆ.

ಕೇಂದ್ರ ಸರ್ಕಾರ ಕೆಲ ದಿನಗಳ ಹಿಂದೆಯಷ್ಟೇ ರಾಜ್ಯಗಳಿಗೆ ತೆರಿಗೆ ಹಣವನ್ನು ಹಂಚಿಕೆ ಮಾಡಿತ್ತು. ಆದರೆ ರಾಜ್ಯಕ್ಕೆ ತೆರಿಗೆ ಹಂಚಿಕೆಯಲ್ಲಿ ಅನ್ಯಾಯ ಆಗಿದೆ ಎಂದು ಸಿಎಂ ಸಿದ್ದರಾಮಯ್ಯ ಹಾಗು ಡಿಸಿಎಂ ಡಿ.ಕೆ.ಶಿವಕುಮಾರ್‌ ಸೇರಿದಂತೆ ಅನೇಕ ಸಚಿವರು ಮತ್ತು ಶಾಸಕರು ಆರೋಪಿಸಿದ್ದರು. ಅಲ್ಲದೇ ನಮ್ಮ ತೆರಿಗೆ ನಮ್ಮ ಹಕ್ಕು, ಈ ಬಗ್ಗೆ ಬೆಜೆಪಿಯ ಇಷ್ಟೊಂದು ಸಂಸದರಿದರೂ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯದ ಕುರಿತು ಯಾಕೆ ಪ್ರಶ್ನಿಸುತ್ತಿಲ್ಲ ಎಂದು ವಾಗ್ದಾಳಿ ನಡೆಸಿದ್ದರು. ಆದರೆ ಈ ಬೆನ್ನಲ್ಲೇ ಡಿಕೆಶಿ ಅವರು ಪತ್ರ ಬರೆದಿದ್ದು, ಅತೀ ಹೆಚ್ಚು ಹೆಚ್ಚು ತೆರಿಗೆ ಕಟ್ಟುತ್ತಿರುವುದು ಕರ್ನಾಟಕ. ಹಾಗಾಗಿ ನಮ್ಮ ರಾಜ್ಯಕ್ಕೆ ಅಧಿಕ ಅನುದಾನವನ್ನು ನೀಡುವಂತೆ ಕೋರಿದ್ದಾರೆ.

Tags: