ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಭಾಗವಹಿಸಿ ಫ್ಯೂಚರ್ ಆಫ್ ಇನ್ನೋವೇಶನ್ ಎಕ್ಸ್-ಪೋಗೆ ಚಾಲನೆ ನೀಡಿದರು.
ಬೆಂಗಳೂರಿನ ಅರಮನೆ ಮೈದಾನದಲ್ಲಿ ನಿನ್ನೆಯಿಂದ ಇನ್‌ವೆಸ್ಟ್ ಕರ್ನಾಟಕ ಕಾರ್ಯಕ್ರಮ ನಡೆಯುತ್ತಿದ್ದು, ಇಂದು(ಫೆಬ್ರವರಿ.12) ಈ ಸಮಾವೇಶದಲ್ಲಿ ಭಾಗವಹಿಸಿ ಫ್ಯೂಚರ್ ಆಫ್ ಇನ್ನೋವೇಶನ್ ಎಕ್ಸ್-ಪೋಗೆ ಚಾಲನೆ ನೀಡಿ ಮಾತನಾಡಿದ ಅವರು, ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಯುವಜನತೆಯ ಗಮನ ಸೆಳೆಯುತ್ತಿರುವುದೆನೆಂದರೆ ನಾಳಿನ ನಮ್ಮ ಜಗತ್ತಿನಲ್ಲಿ ವಿವಿಧ ಕ್ಷೇತ್ರಗಳಲ್ಲಿ ನಿರ್ಣಾಯಕ ಪಾತ್ರ ವಹಿಸಲಿರುವ ನಾವೀನ್ಯತೆ ಆಗಿದೆ. ಹೀಗಾಗಿ ಇದನ್ನು ಗಮನದಲ್ಲಿ ಇಟ್ಟುಕೊಂಡು ಇಂದು ಈ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ ಎಂದರು.
ಇದೇ ವೇಳೆ ಡಿ.ಕೆ.ಶಿವಕುಮಾರ್ ಹಾಗೂ ಸಚಿವ ಎಂ.ಬಿ.ಪಾಟೀಲ್ ಅವರು, ಕರ್ನಾಟಕ ಪೆವಿಲಿಯನ್, ಟೊಯೋಟಾ, ಎಂಬೆಸಿ ಗ್ರೂಪ್, ರಾಜ್ಯ ಪ್ರವಾಸೋದ್ಯಮ, ಡ್ರೋನ್ ತಂತ್ರಜ್ಞಾನದ ವೈಶಿಷ್ಟ್ಯಪೂರ್ಣ ಮಜಲುಗಳನ್ನು ಕುತೂಹಲದಿಂದ ವೀಕ್ಷಿಸಿ, ಅವುಗಳ ಕುರಿತು ಮಾಹಿತಿ ಪಡೆದುಕೊಂಡರು. ಅಲ್ಲದೇ ಕೃಷಿಕ್ಷೇತ್ರದಲ್ಲಿ ಮಹತ್ತರ ಬದಲಾವಣೆ ಹೊತ್ತು ತರಲಿವೆ. ಜೊತೆಗೆ ಅಗ್ರಿ-ಟೆಕ್ ಮತ್ತು ವೈದ್ಯಕೀಯ ಕ್ಷೇತ್ರದಲ್ಲಿ ರೋಗಪತ್ತೆ ಹಾಗೂ ಚಿಕಿತ್ಸೆಗಳನ್ನು ಸುಲಭವಾಗಿಸುವ ಆರೋಗ್ಯ ಸೇವೆಗಳ ತಂತ್ರಜ್ಞಾನಗಳ ಬಗ್ಗೆಯೂ ತಿಳಿದುಕೊಂಡಿದ್ದಾರೆ.
ಈ ಪ್ರದರ್ಶನದ ಕುರಿತು ಸಚಿವ ಎಂ.ಬಿ.ಪಾಟೀಲ್ ಅವರು ಮಾತನಾಡಿ, ಇಂದಿನ ಸಮಾವೇಶದಲ್ಲಿ 40ಕ್ಕೂ ಅಧಿಕ ಕಂಪೆನಿಗಳು ಭಾಗವಹಿಸಿವೆ. ಈ ಪೈಕಿ ಜಾಗತಿಕ ಮಟ್ಟದ ಕಂಪನಿಗಳು ಮತ್ತು ಪ್ರವರ್ಧಮಾನಕ್ಕೆ ಬರುತ್ತಿರುವ ನವೋದ್ಯಮಗಳೆರಡೂ ಇವೆ. ಇದರೊಂದಿಗೆ ಡ್ರೋನ್, ಬಾಹ್ಯಾಕಾಶ, ಕೃಷಿ, ಆರೋಗ್ಯ, ಉತ್ಪಾದನಾ ವಲಯ, ವೈಮಾಂತರಿಕ್ಷ, ರಕ್ಷಣೆ ಮುಂತಾದ ಕ್ಷೇತ್ರಗಳಲ್ಲಿ ಮುಂಚೂಣಿಗೆ ಬರುತ್ತಿರುವ ಆಧುನಿಕ ತಂತ್ರಜ್ಞಾನ ಧಾರೆಗಳನ್ನು ಇಲ್ಲಿ ನೋಡಬಹುದು ಎಂದು ತಿಳಿಸಿದರು.
ಇನ್ನೂ ಪ್ರಮುಖವಾಗಿ ಈ ಸಮಾವೇಶದಲ್ಲಿ ಮರುಬಳಕೆ ಇಂಧನ, ಸೆಮಿಕಂಡಕ್ಟರ್, ವಿದ್ಯುಚ್ಚಾಲಿತ ವಾಹನಗಳು ಹಾಗೂ ಸುಸ್ಥಿರ ಉತ್ಪಾದನೆಗೆ ಹೆಸರಾದ ಕಂಪನಿಗಳು ಭಾಗವಹಿಸಿವೆ. ರಾಜ್ಯದ ಸಾಧನೆಗಳನ್ನು ಬಿಂಬಿಸುವ ಪ್ರತ್ಯೇಕ ಕರ್ನಾಟಕ ಪೆವಿಲಿಯನ್ ಸಹ ಇದೆ. ಇಂದು ಪಾಲ್ಗೊಂಡಿರುವ ಕಂಪೆನಿಗಳಲ್ಲಿ ಜಿ.ಇ. ಹೆಲ್ತ್‌ಕೇರ್, ಹಿರೋ ಫ್ಯೂಚರ್ ಇಂಜಿನಿಯರ್ಸ್, ರಿವರ್ ಮೊಬಿಲಿಟಿ, ಸರಳಾ ಏವಿಯೇಷನ್, ಗೆಲಾಕ್ಸಿ ಸ್ಪೇಸ್ ಹಾಗೂ ಲ್ಯಾಮ್ ರೀಸರ್ಚ್ ಮುಖ್ಯವಾಗಿದೆ. ಅಲ್ಲದೇ ಕರ್ನಾಟಕ ಪೆವಿಲಿಯನ್‌ನಲ್ಲಿ ಕ್ವಿನ್ ಸಿಟಿ, ಫ್ಲೈಯಿಂಗ್ ವೆಡ್ಜ್, ಬೆಲ್ಲಾಟ್ರಿಕ್ಸ್, ಸ್ಕೀಸರ್ವ್ ಮತ್ತು ಫ್ಲಕ್ಸ್ ಆಟೋ ಸೇರಿದಂತೆ ಮುಂತಾದ ಉದ್ಯಮಗಳಿವೆ ಎಂದು ಹೇಳಿದ್ದಾರೆ.
ಕೊಳ್ಳೇಗಾಲ: ಮಾವನಿಂದ ದೈಹಿಕ ಕಿರುಕುಳ ಆರೋಪದ ಹಿನ್ನೆಲೆಯಲ್ಲಿ ಸೊಸೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲದಲ್ಲಿ…
ಬೆಂಗಳೂರು: ನಟಿ ರನ್ಯಾರಾವ್ ಅವರನ್ನು ಗೋಲ್ಟ್ ಸ್ಮಗ್ಲಿಂಗ್ ಕೇಸ್‌ನಲ್ಲಿ ಡಿಆರ್‌ಐ ಅಧಿಕಾರಿಗಳು ಬಂಧಿಸಿದ್ದಾರೆ. ಈ ತನಿಖೆಯಲ್ಲಿ ದುಬೈನಿಂದ ಅಕ್ರಮವಾಗಿ ತಂದ…
ಎಚ್.ಡಿ.ಕೋಟೆ: ಹುಲಿಯೊಂದು ಜಿಂಕೆಯನ್ನು ಬೇಟೆಯಾಡಿರುವ ಅಪರೂಪದ ದೃಶ್ಯ ಪ್ರವಾಸಿಗರ ಕ್ಯಾಮರಾ ಕಣ್ಣಿಗೆ ಸೆರೆಯಾಗಿದೆ. ಎಚ್.ಡಿ.ಕೋಟೆ ತಾಲ್ಲೂಕಿನ ಕಾಕನಕೋಟೆ ಸಫಾರಿ ವೇಳೆ…
ದಾವಣಗೆರೆ: ರಸ್ತೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿರುವ ವಿಧಾನಸಭೆ ಉಪಸ್ಪೀಕರ್ ರುದ್ರಪ್ಪ ಲಮಾಣಿ ಅವರಿಗೆ ಗಂಭೀರ ಗಾಯಗಳಾಗಿದ್ದು, ಹೆಚ್ಚಿನ ಚಿಕಿತ್ಸೆ ನೀಡಲು…
ಒಟ್ಟಾವಾ: ಕೆನಡಾದ ನೂತನ ಪ್ರಧಾನಿಯಾಗಿ ಮಾರ್ಕ್ ಕಾರ್ನಿ ಶುಕ್ರವಾರ ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ. ಇದಕ್ಕೂ ಮೊದಲು ಮಾರ್ಕ್ ಕಾರ್ನಿ ಬ್ಯಾಂಕ್…
ಕೊಪ್ಪಳ: ಹೈದರಾಬಾದ್ ಕರ್ನಾಟಕ ವಿಮೋಚನಾ ಹೋರಾಟಗಾರ ಹಾಗೂ ಬಹುಭಾಷಾ ಪಂಡಿತ ಡಾ.ಪಂಚಾಕ್ಷರಿ ಹಿರೇಮಠ ನಿಧನರಾಗಿದ್ದಾರೆ. ಅವರಿಗೆ 92 ವರ್ಷ ವಯಸ್ಸಾಗಿತ್ತು.…