ರಾಜ್ಯ

ಫ್ಯೂಚರ್‌ ಆಫ್‌ ಇನ್ನೋವೇಶನ್‌ ಎಕ್ಸ್-ಪೋಗೆ ಚಾಲನೆ ನೀಡಿದ ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಭಾಗವಹಿಸಿ ಫ್ಯೂಚರ್‌ ಆಫ್‌  ಇನ್ನೋವೇಶನ್‌ ಎಕ್ಸ್‌-ಪೋಗೆ ಚಾಲನೆ ನೀಡಿದರು.

ಬೆಂಗಳೂರಿನ ಅರಮನೆ ಮೈದಾನದಲ್ಲಿ ನಿನ್ನೆಯಿಂದ ಇನ್‌ವೆಸ್ಟ್‌ ಕರ್ನಾಟಕ ಕಾರ್ಯಕ್ರಮ ನಡೆಯುತ್ತಿದ್ದು, ಇಂದು(ಫೆಬ್ರವರಿ.12) ಈ ಸಮಾವೇಶದಲ್ಲಿ ಭಾಗವಹಿಸಿ ಫ್ಯೂಚರ್ ಆಫ್ ಇನ್ನೋವೇಶನ್ ಎಕ್ಸ್-ಪೋಗೆ ಚಾಲನೆ ನೀಡಿ ಮಾತನಾಡಿದ ಅವರು, ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಯುವಜನತೆಯ ಗಮನ ಸೆಳೆಯುತ್ತಿರುವುದೆನೆಂದರೆ ನಾಳಿನ ನಮ್ಮ ಜಗತ್ತಿನಲ್ಲಿ ವಿವಿಧ ಕ್ಷೇತ್ರಗಳಲ್ಲಿ ನಿರ್ಣಾಯಕ ಪಾತ್ರ ವಹಿಸಲಿರುವ ನಾವೀನ್ಯತೆ ಆಗಿದೆ. ಹೀಗಾಗಿ ಇದನ್ನು ಗಮನದಲ್ಲಿ ಇಟ್ಟುಕೊಂಡು ಇಂದು ಈ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ ಎಂದರು.

ಇದೇ ವೇಳೆ ಡಿ.ಕೆ.ಶಿವಕುಮಾರ್‌ ಹಾಗೂ ಸಚಿವ ಎಂ.ಬಿ.ಪಾಟೀಲ್‌ ಅವರು, ಕರ್ನಾಟಕ ಪೆವಿಲಿಯನ್, ಟೊಯೋಟಾ, ಎಂಬೆಸಿ ಗ್ರೂಪ್, ರಾಜ್ಯ ಪ್ರವಾಸೋದ್ಯಮ, ಡ್ರೋನ್ ತಂತ್ರಜ್ಞಾನದ ವೈಶಿಷ್ಟ್ಯಪೂರ್ಣ ಮಜಲುಗಳನ್ನು ಕುತೂಹಲದಿಂದ ವೀಕ್ಷಿಸಿ, ಅವುಗಳ ಕುರಿತು ಮಾಹಿತಿ ಪಡೆದುಕೊಂಡರು. ಅಲ್ಲದೇ ಕೃಷಿಕ್ಷೇತ್ರದಲ್ಲಿ ಮಹತ್ತರ ಬದಲಾವಣೆ ಹೊತ್ತು ತರಲಿವೆ. ಜೊತೆಗೆ ಅಗ್ರಿ-ಟೆಕ್‌ ಮತ್ತು ವೈದ್ಯಕೀಯ ಕ್ಷೇತ್ರದಲ್ಲಿ ರೋಗಪತ್ತೆ ಹಾಗೂ ಚಿಕಿತ್ಸೆಗಳನ್ನು ಸುಲಭವಾಗಿಸುವ ಆರೋಗ್ಯ ಸೇವೆಗಳ ತಂತ್ರಜ್ಞಾನಗಳ ಬಗ್ಗೆಯೂ ತಿಳಿದುಕೊಂಡಿದ್ದಾರೆ.

ಈ ಪ್ರದರ್ಶನದ ಕುರಿತು ಸಚಿವ ಎಂ.ಬಿ.ಪಾಟೀಲ್‌ ಅವರು ಮಾತನಾಡಿ, ಇಂದಿನ ಸಮಾವೇಶದಲ್ಲಿ 40ಕ್ಕೂ ಅಧಿಕ ಕಂಪೆನಿಗಳು ಭಾಗವಹಿಸಿವೆ. ಈ ಪೈಕಿ ಜಾಗತಿಕ ಮಟ್ಟದ ಕಂಪನಿಗಳು ಮತ್ತು ಪ್ರವರ್ಧಮಾನಕ್ಕೆ ಬರುತ್ತಿರುವ ನವೋದ್ಯಮಗಳೆರಡೂ ಇವೆ. ಇದರೊಂದಿಗೆ ಡ್ರೋನ್, ಬಾಹ್ಯಾಕಾಶ, ಕೃಷಿ, ಆರೋಗ್ಯ, ಉತ್ಪಾದನಾ ವಲಯ, ವೈಮಾಂತರಿಕ್ಷ, ರಕ್ಷಣೆ ಮುಂತಾದ ಕ್ಷೇತ್ರಗಳಲ್ಲಿ ಮುಂಚೂಣಿಗೆ ಬರುತ್ತಿರುವ ಆಧುನಿಕ ತಂತ್ರಜ್ಞಾನ ಧಾರೆಗಳನ್ನು ಇಲ್ಲಿ ನೋಡಬಹುದು ಎಂದು ತಿಳಿಸಿದರು.

ಇನ್ನೂ ಪ್ರಮುಖವಾಗಿ ಈ ಸಮಾವೇಶದಲ್ಲಿ ಮರುಬಳಕೆ ಇಂಧನ, ಸೆಮಿಕಂಡಕ್ಟರ್, ವಿದ್ಯುಚ್ಚಾಲಿತ ವಾಹನಗಳು ಹಾಗೂ ಸುಸ್ಥಿರ ಉತ್ಪಾದನೆಗೆ ಹೆಸರಾದ ಕಂಪನಿಗಳು ಭಾಗವಹಿಸಿವೆ. ರಾಜ್ಯದ ಸಾಧನೆಗಳನ್ನು ಬಿಂಬಿಸುವ ಪ್ರತ್ಯೇಕ ಕರ್ನಾಟಕ ಪೆವಿಲಿಯನ್‌ ಸಹ ಇದೆ. ಇಂದು ಪಾಲ್ಗೊಂಡಿರುವ ಕಂಪೆನಿಗಳಲ್ಲಿ ಜಿ.ಇ. ಹೆಲ್ತ್‌ಕೇರ್‌, ಹಿರೋ ಫ್ಯೂಚರ್‌ ಇಂಜಿನಿಯರ್ಸ್‌, ರಿವರ್‌ ಮೊಬಿಲಿಟಿ, ಸರಳಾ ಏವಿಯೇಷನ್‌, ಗೆಲಾಕ್ಸಿ ಸ್ಪೇಸ್‌ ಹಾಗೂ ಲ್ಯಾಮ್ ರೀಸರ್ಚ್ ಮುಖ್ಯವಾಗಿದೆ. ಅಲ್ಲದೇ ಕರ್ನಾಟಕ ಪೆವಿಲಿಯನ್‌ನಲ್ಲಿ ಕ್ವಿನ್‌ ಸಿಟಿ, ಫ್ಲೈಯಿಂಗ್‌ ವೆಡ್ಜ್‌, ಬೆಲ್ಲಾಟ್ರಿಕ್ಸ್‌, ಸ್ಕೀಸರ್ವ್‌ ಮತ್ತು ಫ್ಲಕ್ಸ್‌ ಆಟೋ ಸೇರಿದಂತೆ ಮುಂತಾದ ಉದ್ಯಮಗಳಿವೆ ಎಂದು ಹೇಳಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಓದುಗರ ಪತ್ರ: ಪೌರಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ ಸ್ವಾಗತಾರ್ಹ

ಮೈಸೂರು ನಗರದಲ್ಲಿ ಸ್ವಚ್ಛತಾ ಕಾರ್ಯ ನಿರ್ವಹಿಸುತ್ತಿರುವ ಸ್ವಚ್ಛತೆಯ ಜೀವನಾಡಿಗಳಾಗಿರುವ ಪೌರಕಾರ್ಮಿಕರಿಗೆ, ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಮಣಿಪಾಲ್ ಆಸ್ಪತ್ರೆಯಲ್ಲಿ ಆಯೋಜಿಸಿದ್ದ…

3 hours ago

ಓದುಗರ ಪತ್ರ: ನಿಜವಾದ ಭಾವೈಕ್ಯತೆಯ ಸಂಗಮ

ಮಂಡ್ಯ ಜಿಯ ಮದ್ದೂರಿನಲ್ಲಿ ಭಾನುವಾರ ಗಣೇಶೋತ್ಸವ ಕಾರ್ಯಕ್ರಮದಲ್ಲಿ ಮುಸ್ಲಿಮರೇ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು, ಗೌರಿ -ಗಣೇಶ ಮೂರ್ತಿಗಳನ್ನು ಹೊತ್ತ ಟ್ರ್ಯಾಕ್ಟರ್…

3 hours ago

ಓದುಗರ ಪತ್ರ: ನಾಡಿಗೆ ಮಾದರಿ!

ನಾಡಿಗೆ ಮಾದರಿ! ವಿವಿಧ ಧರ್ಮ ಸಮುದಾಯಗಳ ಮನಸುಗಳ ಅಕ್ಕರೆಯಲಿ ಬೆಸೆವ ಸ್ನೇಹ ಸೌಹಾರ್ದ ಸಾಮರಸ್ಯದ ಪ್ರತೀಕ, ಹಬ್ಬ ಉತ್ಸವಗಳು! ನಾಡಿಗೆ…

3 hours ago

ಓದುಗರ ಪತ್ರ: ಪ್ರೀತಿಯ ಅಣ್ಣ ಪ್ರತಾಪ್ ಸಿಂಹ…

ನಾವಿಬ್ಬರು ಪ್ರೊ. ಬಿ. ಪಿ. ಮಹೇಶ್ ಚಂದ್ರ ಗುರುಗಳ ಶಿಷ್ಯರು. ನಮ್ಮಿಬ್ಬರಿಗೂ ಪ್ರೊ. ಗುರು ಇಷ್ಟ. ನೀನು ಮಂಗಳೂರು ವಿವಿ,…

3 hours ago

ದಸರಾ ಬರುತ್ತಿದೆ, ಮೈಸೂರು ಸಿದ್ಧವಾಗುತ್ತಿದೆಯೇ?

ಶ್ರೇಯಸ್ ದೇವನೂರು ಅಭಿವೃದ್ಧಿಯ ಹೆಸರಿನಲ್ಲಿ ಅರ್ಧ ಕಾಮಗಾರಿ, ಸಂಚಾರದ ಹೆಸರಿನಲ್ಲಿ ಹೆಚ್ಚುತ್ತಿರುವ ಸಂಕಷ್ಟ  ಮೈಸೂರು ದಸರಾ ಎಂದರೆ ಕೇವಲ ಹತ್ತು…

3 hours ago

ಫಾಲ್ಕೆ ಪ್ರಶಸ್ತಿ ಕಲಾಸೇವೆಗೆ ಸಂದ ಗೌರವ: ಅನಂತ್ ನಾಗ್‌

ಸಂದರ್ಶನ: ಬಾನಾಸು  ಇಂದು ಗುಜರಾತಿನ ಕೆವಾಡಿಯಾದಲ್ಲಿ ೭೨ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ನಡೆಯಲಿದೆ. ಚಿತ್ರರಂಗಕ್ಕೆ ಸಲ್ಲಿಸಿದ ಅಮೋಘ ಸೇವೆಗಾಗಿ…

4 hours ago