ಬೆಂಗಳೂರು: ಉಪ ಮುಖ್ಯಂತ್ರಿ ಡಿಕೆ ಶಿವಕುಮಾರ್ ವಿಶೇಷ ಆಹ್ವಾನದ ಮೇರೆಗೆ ಅಮೆರಿಕಾಗೆ ಇಂದು ರಾತ್ರಿಯೇ ಹೊರಡಲಿದ್ದಾರೆ. ಇಂದಿನಿಂದ ಏಳು ದಿನಗಳ ಕಾಲ ಪ್ರವಾಸ ಕೈಗೊಂಡಿರುವ ಅವರು ಸಿಎಂ ಸಿದ್ದರಾಮಯ್ಯರನ್ನು ಭೇಟಿ ಮಾಡಿ ತಮ್ಮ ವಿದೇಶ ಪ್ರವಾಸದ ಬಗ್ಗೆ ಮಾಹಿತಿ ನೀಡಿದ್ದಾರೆ.
ಅಮೆರಿಕಾದ ಅಧ್ಯಕ್ಷೀಯ ಚುನಾವಣಾ ರಂಗೇರಿದೆ. ಅಧ್ಯಕ್ಷೀಯ ಸ್ಥಾನಕ್ಕೆ ಸ್ಪರ್ಧಿಸಿರುವ ಕಮಲ ಹ್ಯಾರಿಸ್ ಅವರ ಆಹ್ವಾನದ ಮೇರೆಗೆ ಡಿ.ಕೆ ಶಿವಕುಮಾರ್ ಖಾಸಗಿ ಹಾಗೂ ರಾಜತಾಂತ್ರಿಕ ಸಮಾವೇಶದಲ್ಲಿ ಭಾಗವಹಿಸಲು ಅಮೆರಿಕಕ್ಕೆ ತೆರಳುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಕಮಲಾ ಹ್ಯಾರಿಸ್ ಅವರು ಪ್ರಜಾಪ್ರಭುತ್ವ ಮತ್ತು ಚುನಾವಣೆ ಕುರಿತ ಸಂವಾದವನ್ನು ಆಯೋಜಿಸಿದ್ದಾರೆ. ಅದರಲ್ಲಿ ಭಾಗವಹಿಸಲು ಅಮೆರಿಕದ ಮಾಜಿ ಅಧ್ಯಕ್ಷ ಬರಾಕ್ ಒಬಾಮ ಸೇರಿದಂತೆ ಹಲವರನ್ನು ಆಹ್ವಾನಿಸಿದ್ದು, ಅದರಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಅವರೂ ಕೂಡ ಆಹ್ವಾನಿತರಾಗಿದ್ದಾರೆ.
ಇನ್ನು ಈ ಬಗ್ಗೆ ಇಂದು ಬೆಂಗಳೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಡಿಕೆಶಿ, ನಾನು ಒಂದು ವಾರ ಇರಲ್ಲ. ಅಮೆರಿಕಾ ಪ್ರವಾಸ ಕೈಗೊಂಡಿದ್ದೇನೆ. ಅಮೆರಿಕಾದಲ್ಲಿ ಖಾಸಗಿ ಕಾರ್ಯಕ್ರಮವಿದೆ, ಯಾರನ್ನೂ ಭೇಟಿ ಆಗಲ್ಲ. ವಿಶೇಷ ಫ್ಯಾಮಿಲಿ ಟ್ರಿಪ್ ಇದು, ಕುಟುಂಬ ಸಮೇತ ಹೋಗುತ್ತಿದ್ದೇವೆ ಎಂದು ಹೇಳಿದರು.
ಮೈಸೂರು : ಮೈಸೂರು ಮಹಾನಗರಪಾಲಿಕೆ 2026-27ನೇ ಹಣಕಾಸು ವರ್ಷಕ್ಕೆ ಜಾರಿಗೊಳಿಸಲು ಘೋಷಿಸಿದ್ದ ಮೋಟಾರ್ ವಾಹನ ಸೆಸ್ ಅನ್ನು ರದ್ದುಗೊಳಿಸಿದೆ. ಇತ್ತೀಚಿಗೆ…
ಬೆಂಗಳೂರು : ಕರ್ನಾಟಕದ ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಎನ್.ಸಂತೋಷ್ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರೆ ಉಂಟಾಗಿ ಕುಸಿದು ಬಿದ್ದಿದ್ದು, ಆಸ್ಪತ್ರೆಗೆ…
ಮೈಸೂರು : ಬಟ್ಟೆ ಬ್ಯಾಗ್ ಖರೀದಿಯಲ್ಲಿ ಆಗಿರುವ ಅವ್ಯವಹಾರದ ಬಗ್ಗೆ ತನಿಖೆ ನಡೆಸಲು ಹೈಕೋರ್ಟ್ ಅನುಮತಿ ನೀಡಿರುವ ಕುರಿತು ಪ್ರತಿಕ್ರಿಯಿಸಿದ…
ಬೆಂಗಳೂರು : ಮಹೇಂದ್ರ ಸಿಂಗ್ ಧೋನಿ ಅವರು ಚೆನ್ನೈ ಸೂಪರ್ ಕಿಂಗ್ಸ್ ಅಭಿಮಾನಿಗಳಲ್ಲಿ ಹೊಸ ಆಶಾಕಿರಣ ಮೂಡಿಸಿದ್ದಾರೆ. ಸ್ನಾಯು ಸೆಳೆತದಿಂದ…
ಟೆಹ್ರಾನ್ : ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಕಳೆದ 24 ಗಂಟೆಗಳಲ್ಲಿ ಅಮೆರಿಕದ ಎರಡು F-35 ಸ್ಟೆಲ್ತ್…
ಬಾಗಲಕೋಟೆ : ಸೋಮಣ್ಣ ಬಿಜೆಪಿಯಲ್ಲಿ ಕೆಲಸವಿಲ್ಲದಿರುವ ಮಂತ್ರಿ. ಅವರಿಗೆ ಯಾವ ಕಡತವೂ ಹೋಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದರು.…