Mysore
29
broken clouds

Social Media

ಭಾನುವಾರ, 11 ಅಕ್ಟೋಬರ್ 2026
Light
Dark

ಆಡಿಯೋ ವಿಡಿಯೋ ಬಗ್ಗೆ ಗೊತ್ತಿಲ್ಲ, ಅಧಿಕಾರಿಗಳು ಅಧಿಕಾರ ದುರ್ಬಳಕೆ ಮಾಡಿದ್ದು ನಿಜ ; ಡಿಕೆಶಿ

ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮ ಅವ್ಯವಹಾರ ಪ್ರಕರಣ, ಅಧಿಕಾರಿಗಳು ಅಧಿಕಾರ ದುರ್ಬಳಕೆ ಮಾಡಿದ್ದು ನಿಜ ಎಂದು ಡಿಸಿಎಂ ಡಿ.ಕೆ ಶಿವಕುಮಾರ್‌ ಹೇಳಿದ್ದಾರೆ.

ವಾಲ್ಮೀಕಿ ಅಭಿವೃದ್ಧಿ ನಿಗಮ ಅವ್ಯವಹಾರಕ್ಕೆ ಸಂಬಂಧಪಟ್ಟಂತೆ ಅಧಿಕಾರಿಗಳ ಆಡಿಯೋ ವೈರಲ್‌ ಆದ ಬೆನ್ನಲ್ಲೆ ಡಿ.ಕೆ ಶಿವಕುಮಾರ್‌ ಈ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ್ದು, ಅಧಿಕಾರಿಗಳು ಅಧಿಕಾರವನ್ನು ದುರ್ಬಳಕೆ ಮಾಡಿಕೊಂಡಿರುವುದು ನಿಜ. ಹಾಗೆಂದ ಮಾತ್ರಕ್ಕೆ ಪ್ರಕರಣದಲ್ಲಿ ನಮ್ಮ ಸಚಿವರು , ಶಾಸಕರು ಯಾರೂ ಶಾಮೀಲಾಗಿಲ್ಲ ಎಂದು ಹೇಳಿದರು.

ಅಲ್ಲದೆ ಈಗಾಗಲೇ ಸಿಐಡಿ ಪ್ರಕರಣದ ತನಿಖೆಯನ್ನು ನಡೆಸುತ್ತಿದ್ದು, ತನಿಖೆ ನಡೆಸಲು ಸಿಐಡಿ ಅಧಿಕಾರಿಗಳಿಗೆ ಫ್ರೀ ಹ್ಯಾಂಡ್‌ ನೀಡಿದ್ದೇವೆ. ಪ್ರಕರಣ ಸಂಬಂಧವಾಗಿ ರಾಜೀನಾಮೆಯನ್ನು ಸಹ ಪಡೆದುಕೊಂಡಿದ್ದೇವೆ. ಅಧಿಕಾರಿಗಳು ಶಾಮೀಲಾಗಿರುವುದು ಗೊತ್ತಾಗಿದೆ. ಆದರೆ ಅಧಿಕಾರಿಗಳ ಆಡಿಯೋ ವಿಡಿಯೋ ಬಗ್ಗೆ ಗೊತ್ತಿಲ್ಲ ಎಂದರು

Tags:
error: Content is protected !!