ಬೆಂಗಳೂರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಬಗ್ಗೆ ಬಿಜೆಪಿ ವಿಧಾನ ಪರಿಷತ್ ಶಾಸಕ ಸಿ.ಟಿ.ರವಿ
ಆಕ್ಷೇಪಾರ್ಹ ಹೇಳಿಕೆ ನೀಡಿರುವ ವಿಚಾರದಲ್ಲಿ ಆತ್ಮಸಾಕ್ಷಿ ಮುಖ್ಯವಾಗುತ್ತದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ನಗರದಲ್ಲಿ ಇಂದು(ಡಿಸೆಂಬರ್.21) ಸಿ.ಟಿ.ರವಿ ಅವರ ಹೇಳಿಕೆಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಬಿಜೆಪಿಯಲ್ಲಿ ಅಥವಾ ಅವರ ಪಕ್ಷದವರಿಗೆ ಏನೇ ಆದರೂ ನಾನೇ ಕಾರಣವೆಂದು ಹೇಳುತ್ತಾರೆ. ಬಿಜೆಪಿಯವರಿಗೆ ನನ್ನನ್ನು ನೆನಪು ಮಾಡಿಕೊಳ್ಳಲಿಲ್ಲ ಎಂದರೆ ಅವರೊಗೆ ನಿದ್ದೆ ಬರಲ್ಲ ಎಂದು ಕಾಣುತ್ತದೆ ಎಂದಿದ್ದಾರೆ.
ಸಿ.ಟಿ.ರವಿ ಅವರು ನೀಡಿರುವ ಹೇಳಿಕೆಯಿಂದ ತಪ್ಪಿಸಿಕೊಳ್ಳಲು ಪೊಲೀಸರ ಮೇಲೆ ಹೇಳುತ್ತಿದ್ದಾರೆ. ಯಾರಿಗೆ ಆದರೂ ಆತ್ಮಸಾಕ್ಷಿ ಮುಖ್ಯವಾಗುತ್ತದೆ. ಅವರು ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆಯೇ ಅಥವಾ ಇಲ್ಲವಾ ಎಂಬುದನ್ನು ಅವರ ಆತ್ಮಸಾಕ್ಷಿಯೇ ಮನವರಿಕೆ ಮಾಡಿಕೊಡಬೇಕು ಎಂದು ಹೇಳಿದ್ದಾರೆ.
ಇದೇ ಸಂದರ್ಭದಲ್ಲಿ ಹೈಕೋರ್ಟ್, ಸಿ.ಟಿ.ರವಿಗೆ ಜಾಮೀನು ವಿಚಾರವಾಗಿ ಮಾತನಾಡಿದ ಅವರು, ಬೇಲ್ ವಿಚಾರ ಕೋರ್ಟ್‌ಗೆ ಸಂಬಂಧಿಸಿದ್ದು, ಕಾನೂನು ಹಾಗೂ ಕೋರ್ಟ್ ಉಂಟು. ಅದನ್ನೆಲ್ಲಾ ನನ್ನನ್ನು ಕೇಳಿದ್ರೆ ಹೇಗೆ? ರಾಜ್ಯದಲ್ಲಿ ಏನಾದ್ರೂ ನಾನೇ ಕಾರಣನಾ? ಎಂದು ಪ್ರಶ್ನಿಸಿದ್ದಾರೆ.
ನಮ್ಮ ಸರ್ಕಾರದಿಂದ ಕಾನೂನಿಗೆ ಹಾಗೂ ಕೋರ್ಟ್ಗೆ ಏನು ಗೌರವ ಕೊಡಬೇಕೋ ಕೊಡುತ್ತೇವೆ. ಕೋರ್ಟ್ ಏನು ಬೇಕೋ ನಿರ್ಧಾರ ತೆಗೆದುಕೊಳ್ಳುತ್ತೆ. ಮೊದಲು ಅವರು ಮಾತನಾಡಿದ್ದು, ಸರಿನಾ ಎಂದು ಕೇಳಿ? ಅವರ ಭಾಷೆ ಮತ್ತು ಸಂಸ್ಕೃತಿಯಿಂದ ಅವರ ಹರುಕು ಬಾಯಿ ಅನ್ನೋದು ಗೊತ್ತಾಗಿದೆ. ಚಿಕ್ಕಮಗಳೂರು ಜನ ಎಂದರೆ ಸಂಸ್ಕೃತಿಯುಳ್ಳ ಜನ. ಆದರೆ ಬಿಜೆಪಿ ಪಕ್ಷದಲ್ಲಿ ಇರೋರು ಹೆಣ್ಣು ಮಕ್ಕಳ ಬಗ್ಗೆ ಸರಿಯಾಗಿ ಅರ್ಥ ಮಾಡಿಕೊಳ್ಳಬೇಕು ಎಂದು ತಿಳಿಸಿದ್ದಾರೆ.
ಬೆಳಗಾವಿ: ಚಳಿಗಾಳದ ಅಧಿವೇಶನ ಸಂದರ್ಭದಲ್ಲಿ ಪಂಚಮಶಾಲಿಗಳು ತಮ್ಮ ಮೀಸಲಾತಿಗಾಗಿ ಸುವರ್ಣ ಸೌಧದ ಹತ್ತಿರ ಹೋರಾಟ ಮಾಡುವಾಗ ಪೊಲೀಸರು ಲಾಠಿ ಚಾರ್ಜ್…
ಕಲಬುರ್ಗಿ: ನಗರದ ಏಳು ಎಕರೆ ಪ್ರದೇಶದಲ್ಲಿ ನೂತನವಾಗಿ ನಿರ್ಮಿಸಿರುವ ಜಯದೇವ ಹೃದ್ರೋಗ ವಿಜ್ಞಾನ ಹಾಗೂ ಸಂಶೋಧನಾ ಸಂಸ್ಥೆಯ ಕಟ್ಟಡವನ್ನು ಇಂದು…
ಮಂಡ್ಯ: ವಿದೇಶದಲ್ಲಿ 40 ಲಕ್ಷಕ್ಕೂ ಅಧಿಕ ಕನ್ನಡಿಗರಿದ್ದು ಅವರಲ್ಲಿ 5 ಲಕ್ಷಕ್ಕೂ ಅಧಿಕ ಕನ್ನಡಿಗರು ಅಮೆರಿಕಾದಲ್ಲೇ ಇದ್ದಾರೆ. ಅಕ್ಕ ಸಮೇಳನದ…
ಬೆಂಗಳೂರು: ಕಾಂಗ್ರೆಸ್ ಸರ್ಕಾರದಿಂದ ಕನ್ನಡದ ಉದ್ಧಾರ ಸಾಧ್ಯವೇ ಇಲ್ಲ, ಕನ್ನಡ ಶಾಲೆಗಳ ಅಸ್ತಿತ್ವ ಉಳಿಯುವ ಭರವಸೆ ಇಲ್ಲ ಎಂದು ಬಿಜೆಪಿ…
ಮಂಡ್ಯ: ರಾಷ್ಟ್ರದ ಜಿಡಿಪಿಯಲ್ಲಿ ಕೃಷಿ ಪಾಲು ಶೇ.೨೦ ರಷ್ಟು ಇದ್ದು, ಶೇ.೬೦ ರಷ್ಟು ಜನರು ಕೃಷಿ ಅವಲಂಭಿಸಿದ್ದಾರೆ. ಆದ್ದರಿಂದ ರಾಷ್ರ್ಟದ…
ಕುವೈತ್/ನವದೆಹಲಿ: 26ನೇ ಅರೇಬಿಯನ್ ಗಲ್ಫ್ ಉದ್ಘಾಟನಾ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾಗವಹಿಸಿದ್ದು, ಕುವೈತ್ ದೊರೆ ಶೇಖ್ ಮಿಶಾಲ್…