Mysore
16
few clouds

Social Media

ಸೋಮವಾರ, 08 ಡಿಸೆಂಬರ್ 2025
Light
Dark

ನಮ್ಮ ಸರ್ಕಾರ ರಾಜ್ಯದ ನೆಲ, ಜಲ ಹಿತಕ್ಕಾಗಿ ಬದ್ಧವಾಗಿದೆ: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಅವರು ಮೇಕೆದಾಟು ಯೋಜನೆಗೆ ಒಂದೇ ದಿನದಲ್ಲಿ ಸಹಿ ಹಾಕಿಸುವುದಾಗಿ ಹೇಳಿದ್ದರು. ಆದಎ ನಮ್ಮ ಸರ್ಕಾರ ರಾಜ್ಯದ ನೆಲ, ಜಲ ಮತ್ತು ಹಿತಕ್ಕಾಗಿ ಬದ್ಧವಾಗಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಇಂದು(ಫೆಬ್ರವರಿ.16) ನೀರಾವರಿ ವಿಚಾರವಾಗಿ ಪಕ್ಷಾತೀತ ಹೋರಾಟ ಮಾಡಬೇಕು ಎಂಬ ದೇವೇಗೌಡ ಹೇಳಿಕೆಗೆ ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಮಹದಾಯಿ ವಿಚಾರವಾಗಿ ನಾವೇ ಕೇಂದ್ರ ಸಚಿವರನ್ನು ಭೇಟಿ ಮಾಡಿ ಮನವಿ ಮಾಡಿದ್ದೆವು. ಇದು ಅವರ ಹೋರಾಟ ಮಾತ್ರವಲ್ಲ, ರಾಜ್ಯದ ಹೋರಾಟವಾಗಿದೆ. ಅವರು ಅಧಿಕಾರದಲ್ಲಿರುವಾಗ ಹೋರಾಟ ಯಾಕೆ ಮಾಡಬೇಕು ಎಂದು ಪ್ರಶ್ನಿಸಿದರು.

ನಮ್ಮ ಪಕ್ಷ ಮೇಕೆದಾಟು ವಿಚಾರದಲ್ಲಿ ರಾಜಕೀಯ ಮಾಡುವುದಿಲ್ಲ, ಅದ ಅಗತ್ಯವೂ ನಮಗೆ ಇಲ್ಲ. ಅವರಿಗೆ ರಾಜಕಾರಣ ಮಾಡಿ ರೂಢಿ ಇರಬಹುದು. ನಾವು ಹೋರಾಟ ಮಾಡಿದಾಗ ಅವರು ಯಾವ ರೀತಿ ಟೀಕೆ ಮಾಡಿದ್ದಾರೆ ಎಂಬುದನ್ನು ನೋಡಿದ್ದೇವೆ. ಆದರೆ ನಮ್ಮ ಸರ್ಕಾರ ಅದನ್ನು ಮರೆತು ರಾಜ್ಯದ ಹಿತಕ್ಕಾಗಿ ನೀರಾವರಿ ಯೋಜನೆಗೆ ಪ್ರಯತ್ನಿಸುತ್ತೇವೆ ಎಂದು ಹೇಳಿದರು.

ಇನ್ನು ಭದ್ರಾ ಮೇಲ್ದಂಡೆ ಯೋಜನೆಗೆ 5 ಸಾವಿರ ಕೋಟಿ ರೂ. ಘೋಷಣೆ ಮಾಡಿದ್ದು, ಅದನ್ನು ಇದುವರೆಗೂ ಬಿಡುಗಡೆಗೊಳಿಸಿಲ್ಲ. ಅದನ್ನು ಅವರು ಎಂದಾದರೂ ಸಂಸತ್ತಿನಲ್ಲಿ ಪ್ರಶ್ನಿಸಿದ್ದಾರಾ? ನಮ್ಮ ರಾಜ್ಯದವರಾಗಿರುವ ಎಚ್‌.ಡಿ.ಕುಮಾಸ್ವಾಮಿ, ಕೇಂದ್ರ ಸಚಿವರು ಹಾಗೂ ಸಂಸದರು ಧ್ವನಿ ಎತ್ತುತ್ತಾರೆ ಎಂಬ ನಿರೀಕ್ಷೆ ಇತ್ತು. ಆದರೆ ಆ ಕೆಲಸದಲ್ಲೂ ವಿಫಲರಾಗಿದ್ದಾರೆ. ಹೀಗಾಗಿ ಅವರು ಮೊದಲು ಆ ಕೆಲಸ ಮಾಡಲಿ, ನಮ್ಮಿಂದ ಯಾವ ಸಹಕಾರ ಬೇಕು ಹೇಳಲಿ ನಾವು ನೀಡುತ್ತೇವೆ. ಕಾವೇರಿ ಗೋದಾವರಿ ಜೋಡಣೆ ಮಾಡಿದರೆ ಸಂತೋಷ, ಇಲ್ಲಿಂದಲೇ ಅವರಿಗೆ ಸಾಷ್ಟಾಂಗ ನಮಸ್ಕಾರ ಹಾಕುತ್ತೇವೆ ಎಂದರು.

ಇದೇ ಸಂದರ್ಭದಲ್ಲಿ ಬೆಂಗಳೂರು ನೀರಿನ ವಿಚಾರವಾಗಿ ಮಾತನಾಡಿದ ಅವರು, ಅವರ ಪಕ್ಷದ ನಾಯಕರಿಂದ ಗೊಂದಲದ ಹೇಳಿಕೆ ನೀಡಿಸುತ್ತಿದ್ದಾರೆ. ಈ ಬಗ್ಗೆ ಡಿ.ಸಿ.ತಮ್ಮಣ್ಣ ಅವರಿಗೆ ಯಾವುದೇ ಮಾಹಿತಿ ಇಲ್ಲ. ಈ ವಿಚಾರದಲ್ಲಿ ಡಿಪಿಆರ್ ಸಿದ್ಧಪಡಿಸಿದ್ದಾರೆ ಅಷ್ಟೇ. ಆದರೆ ಇನ್ನು ನಿರ್ಧಾರಿಸಿಲ್ಲ, ನಾನು ಅಧಿಕಾರಕ್ಕೆ ಬಂದ ತಕ್ಷಣವೇ ಬೆಂಗಳೂರಿಗೆ 6 ಟಿಎಂಸಿ ನೀರನ್ನು ಮಂಜೂರು ಮಾಡಿದ್ದೇನೆ. ಅಲ್ಲದೇ ಈ ಸಂಬಂಧ ಮುಂದಿನ ಕ್ರಮಗಳನ್ನು ತೆಗೆದುಕೊಳ್ಳುತ್ತೇವೆ ಎಂದು ತಿಳಿಸಿದರು.

Tags:
error: Content is protected !!