ಬೆಂಗಳೂರು: ದೇಶದ ಸಂವಿಧಾನವನ್ನು ಹರಿದು ಹಾಕುತ್ತೇವೆ ಎಂದವರು ಮನೆಗೆ ಹೋಗಿದ್ದಾರೆ. ಇನ್ನು ಸಂವಿಧಾನ ಬದಲಾವಣೆ ಮಾಡುತ್ತೇವೆ ಎಂದ ಬಿಜೆಪಿ ನಾಯಕರನ್ನು ಜನರು ಬದಲಾಯಿಸಿದರು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ವಸಂತನಗರದಲ್ಲಿ ಇಂದು(ನ.26) ಅಂಬೇಡ್ಕರ್ ಭವನದಲ್ಲಿ ಆಯೋಜಿಸಿದ್ದ ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಂವಿಧಾನ ಬದಲಾವಣೆ ಮಾಡುತ್ತೇವೆ ಎಂದು ಹೇಳುತ್ತಿದ್ದವರಿಗೆ ತಿರುಗೇಟು ನೀಡಲು ಸಂಸದ ರಾಹುಲ್ ಗಾಂಧಿಯವರು ಪ್ರತಿಯೊಂದು ಭಾಷಣದ ವೇಳೆ ಸಂವಿಧಾನದ ಪ್ರತಿ ಹಿಡಿದು ಭಾಷಣವನ್ನು ಆರಂಭಿಸುತ್ತಿದ್ದರು. ಹೀಗಾಗಿ ಪ್ರಧಾನಮಂತ್ರಿ ಅವರು ಕೂಡ ಸಂವಿಧಾನ ಪ್ರತಿಗೆ ನಮಸ್ಕರಿಸಿ ಪ್ರಮಾಣ ವಚನ ಸ್ವೀಕಾರ ಮಾಡುವಂತಾಯಿತು. ಅಲ್ಲದೇ ನಮ್ಮ ಇಂಡಿಯಾ ಒಕ್ಕೂಟದ ಸಂಸದರು ಸಂವಿಧಾನ ಪ್ರತಿ ಹಿಡಿದು ಪ್ರಮಾಣ ವಚನ ಸ್ವೀಕರಿಸಿದ್ದು ಎಂದು ಇತಿಹಾಸ ಎಂದು ಹೇಳಿದ್ದಾರೆ.
ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರು ಹೋರಾಟ ಮಾಡದೇ ಇದ್ದರೂ ಪರವಾಗಿಲ್ಲ ಮಾರಾಟ ಮಾತ್ರ ಆಗಬೇಡ ಎಂಬ ಕಿವಿ ಮಾತನ್ನು ರಾಜಕಾರಣಿಗಳಿಗರ ಹೇಳಿದ್ದರು. ಬಳಿಕ ನಾವುಗಳು ಇತಿಹಾಸದಿಂದ ಪಾಠ ಕಲಿಯದೇ ಯಾವುದೇ ಬದಲಾವಣೆ ಮಾಡಲು ಸಾಧ್ಯವಿಲ್ಲ ಎಂದು ಸಂದೇಶವನ್ನು ನೀಡಿದ್ದರು. ಆದರೆ ಪ್ರಸ್ತುತ ದಿನಗಳಲ್ಲಿ ಹಲವು ರಾಜ್ಯಗಳಲ್ಲಿ ಜನರಿಂದ ಆಯ್ಕೆಯಾದ ಶಾಸಕರು ಮಾರಾಟವಾಗಿರುವ ನಿದರ್ಶನಗಳನ್ನು ನೋಡುತ್ತಿದ್ದೇವೆ. ಇತಿಹಾಸವನ್ನು ಮರೆತವನು ಇತಿಹಾಸವನ್ನು ಸೃಷ್ಠಿಸಲು ಸಾಧ್ಯವಿಲ್ಲ ಎಂದು ಕಿವಿಮಾತನ್ನು ಬಿಟ್ಟು ಹೋಗಿದ್ದಾರೆ. ಅದರಂತೆಯೇ ಆಯಾಯ ಧರ್ಮದವರು ಅವರ ಧರ್ಮ ಗ್ರಂಥಗಳನ್ನು ಪವಿತ್ರ ಎಂದು ಹೇಳುತ್ತಾರೋ, ಹಾಗೇಯೇ ಇಡೀ ಭಾರತಕ್ಕೆ ಸಂವಿಧಾನವೇ ಪವಿತ್ರ ಗ್ರಂಥವಾಗಿದೆ ಎಂದಿದ್ದಾರೆ.
ಬೆಂಗಳೂರು: ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕು ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು ಶಾಲೆಗೆ…
ಬೀದರ್: ನಿಗೂಢ ವಸ್ತುವೊಂದು ಸ್ಫೋಟಗೊಂಡ ಪರಿಣಾಮ ಆರು ಮಕ್ಕಳಿಗೆ ಗಂಭೀರ ಗಾಯಗಳಾಗಿರುವ ಘಟನೆ ಹುಮನಾಬಾದ್ ತಾಲ್ಲೂಕಿನ ಮೋಳಕೇರಾ ಗ್ರಾಮದಲ್ಲಿ ನಡೆದಿದೆ.…
ಮೈಸೂರು: ಮಾಜಿ ಸಚಿವ ಸಿ.ಟಿ.ರವಿ ಅವರಿಂದು ಮೈಸೂರು ಮುಕ್ತ ವಿಶ್ವವಿದ್ಯಾನಿಲಯದಿಂದ ಪಿಎಚ್‌ಡಿ ಪದವಿ ಪಡೆದಿದ್ದಾರೆ. ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್…
ಮುಂಬೈ: ವಿಮಾನ ಪತನ ದುರಂತದಲ್ಲಿ ಸಾವನ್ನಪ್ಪಿದ ಡಿಸಿಎಂ ಅಜಿತ್ ಪವಾರ್ ಪತ್ನಿ ಸುನೇಂದ್ರ ಪವಾರ್ ಅವರನ್ನು ಉಪಮುಖ್ಯಮಂತ್ರಿ ಸ್ಥಾನಕ್ಕೆ ನೇಮಿಸಲು…
ಬೆಂಗಳೂರು: ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಪಿಡೆಂಟ್ ಗ್ರೂಪ್ ಚೇರ್ಮನ್ ಸಿ.ಜೆ.ರಾಯ್ ಆತ್ಮಹತ್ಯೆ ಪ್ರಕರಣದ ಬಗ್ಗೆ ಗೃಹ ಸಚಿವ ಪರಮೇಶ್ವರ್ ಪ್ರತಿಕ್ರಿಯೆ…
ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ನಾಳೆ 9ನೇ ಬಾರಿಗೆ ಬಜೆಟ್ ಮಂಡನೆ ಮಾಡಲಿದ್ದಾರೆ. ಈ ಮೂಲಕ…