Categories: ರಾಜ್ಯ

ಸಂವಿಧಾನ ಬದಲಾಯಿಸುತ್ತೇವೆ ಎಂದವರನ್ನು ಜನ ಬದಲಾಯಿಸಿದರು: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ದೇಶದ ಸಂವಿಧಾನವನ್ನು ಹರಿದು ಹಾಕುತ್ತೇವೆ ಎಂದವರು ಮನೆಗೆ ಹೋಗಿದ್ದಾರೆ. ಇನ್ನು ಸಂವಿಧಾನ ಬದಲಾವಣೆ ಮಾಡುತ್ತೇವೆ ಎಂದ ಬಿಜೆಪಿ ನಾಯಕರನ್ನು ಜನರು ಬದಲಾಯಿಸಿದರು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ.

ವಸಂತನಗರದಲ್ಲಿ ಇಂದು(ನ.26) ಅಂಬೇಡ್ಕರ್‌ ಭವನದಲ್ಲಿ ಆಯೋಜಿಸಿದ್ದ ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಂವಿಧಾನ ಬದಲಾವಣೆ ಮಾಡುತ್ತೇವೆ ಎಂದು ಹೇಳುತ್ತಿದ್ದವರಿಗೆ ತಿರುಗೇಟು ನೀಡಲು ಸಂಸದ ರಾಹುಲ್‌ ಗಾಂಧಿಯವರು ಪ್ರತಿಯೊಂದು ಭಾಷಣದ ವೇಳೆ ಸಂವಿಧಾನದ ಪ್ರತಿ ಹಿಡಿದು ಭಾಷಣವನ್ನು ಆರಂಭಿಸುತ್ತಿದ್ದರು. ಹೀಗಾಗಿ ಪ್ರಧಾನಮಂತ್ರಿ ಅವರು ಕೂಡ ಸಂವಿಧಾನ ಪ್ರತಿಗೆ ನಮಸ್ಕರಿಸಿ ಪ್ರಮಾಣ ವಚನ ಸ್ವೀಕಾರ ಮಾಡುವಂತಾಯಿತು. ಅಲ್ಲದೇ ನಮ್ಮ ಇಂಡಿಯಾ ಒಕ್ಕೂಟದ ಸಂಸದರು ಸಂವಿಧಾನ ಪ್ರತಿ ಹಿಡಿದು ಪ್ರಮಾಣ ವಚನ ಸ್ವೀಕರಿಸಿದ್ದು ಎಂದು ಇತಿಹಾಸ ಎಂದು ಹೇಳಿದ್ದಾರೆ.

ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌ ಅವರು ಹೋರಾಟ ಮಾಡದೇ ಇದ್ದರೂ ಪರವಾಗಿಲ್ಲ ಮಾರಾಟ ಮಾತ್ರ ಆಗಬೇಡ ಎಂಬ ಕಿವಿ ಮಾತನ್ನು ರಾಜಕಾರಣಿಗಳಿಗರ ಹೇಳಿದ್ದರು. ಬಳಿಕ ನಾವುಗಳು ಇತಿಹಾಸದಿಂದ ಪಾಠ ಕಲಿಯದೇ ಯಾವುದೇ ಬದಲಾವಣೆ ಮಾಡಲು ಸಾಧ್ಯವಿಲ್ಲ ಎಂದು ಸಂದೇಶವನ್ನು ನೀಡಿದ್ದರು. ಆದರೆ ಪ್ರಸ್ತುತ ದಿನಗಳಲ್ಲಿ ಹಲವು ರಾಜ್ಯಗಳಲ್ಲಿ ಜನರಿಂದ ಆಯ್ಕೆಯಾದ ಶಾಸಕರು ಮಾರಾಟವಾಗಿರುವ ನಿದರ್ಶನಗಳನ್ನು ನೋಡುತ್ತಿದ್ದೇವೆ. ಇತಿಹಾಸವನ್ನು ಮರೆತವನು ಇತಿಹಾಸವನ್ನು ಸೃಷ್ಠಿಸಲು ಸಾಧ್ಯವಿಲ್ಲ ಎಂದು ಕಿವಿಮಾತನ್ನು ಬಿಟ್ಟು ಹೋಗಿದ್ದಾರೆ. ಅದರಂತೆಯೇ ಆಯಾಯ ಧರ್ಮದವರು ಅವರ ಧರ್ಮ ಗ್ರಂಥಗಳನ್ನು ಪವಿತ್ರ ಎಂದು ಹೇಳುತ್ತಾರೋ, ಹಾಗೇಯೇ ಇಡೀ ಭಾರತಕ್ಕೆ ಸಂವಿಧಾನವೇ ಪವಿತ್ರ ಗ್ರಂಥವಾಗಿದೆ ಎಂದಿದ್ದಾರೆ.

 

ಅರ್ಚನ ಎಸ್‌ ಎಸ್

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

9 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

11 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

12 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

14 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

15 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

15 hours ago