ಶಿವಮೊಗ್ಗ: ಮಾಜಿ ಸಚಿವ ಶ್ರೀರಾಮುಲು ಅವರನ್ನು ಕಾಂಗ್ರೆಸ್ ಸೆಳೆಯುವ ಪ್ರಯತ್ನ ಮಾಡುತ್ತಿದೆ ಎಂಬುದು ಸುಳ್ಳು ವದಂತಿ. ನಮ್ಮ ಪಕ್ಷ ಯಾರ ಒಳ ಜಗಳನ್ನು ನಂಬಿ ರಾಜಕಾರಣ ಮಾಡುತ್ತಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಶಿವಮೊಗ್ಗದಲ್ಲಿ ಇಂದು(ಜನವರಿ.31) ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಶಾಸಕ ಜನಾರ್ಧನ ರೆಡ್ಡಿ ವಿರುದ್ಧ ಶ್ರೀರಾಮುಲು ಅವರು ಮುನಿಸಿಕೊಂಡು ಬಿಜೆಪಿ ನಾಯಕರ ವಿರುದ್ಧ ಅಸಮಾಧಾನಗೊಂಡಿದ್ದಾರೆ. ಹೀಗಾಗಿ ಬಿಜೆಪಿಯೂ ತಮ್ಮಲ್ಲಿರುವ ಒಳ ಜಗಳನ್ನು ಮುಚ್ಚಿಕೊಳ್ಳಲು, ಶ್ರೀರಾಮುಲು ಅವರನ್ನು ಕಾಂಗ್ರೆಸ್ ಸೆಳೆಯುವ ಪ್ರಯತ್ನ ಮಾಡುತ್ತಿದೆ ಎಂದು ಆರೋಪಿಸುತ್ತಿದ್ದಾರೆ ಎಂದರು.
ರಾಜ್ಯದಲ್ಲಿ ನಮ್ಮ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಿರುವುದು ಆಡಳಿತ ನಡೆಸಲೇ ಹೊರತು, ಯಾರ ಒಳ ಜಗಳನ್ನು ನಂಬಿಕೊಂಡು ರಾಜಕಾರಣ ನಡೆಸುತ್ತಿಲ್ಲ. ನಾವು ಸಾರ್ವಜನಿಕರ ನಂಬಿಕೆಯನ್ನು ಉಳಿಸಿಕೊಂಡು ಹೋಗಲು ರಾಜಕೀಯ ಮಾಡುತ್ತಿರುವುದು ಎಂದು ಹೇಳಿದರು.





