ರಾಜ್ಯ

ನಮ್ಮ ಪಕ್ಷ ಯಾರ ಒಳ ಜಗಳನ್ನು ನಂಬಿ ರಾಜಕಾರಣ ಮಾಡುತ್ತಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್‌

ಶಿವಮೊಗ್ಗ: ಮಾಜಿ ಸಚಿವ ಶ್ರೀರಾಮುಲು ಅವರನ್ನು ಕಾಂಗ್ರೆಸ್‌ ಸೆಳೆಯುವ ಪ್ರಯತ್ನ ಮಾಡುತ್ತಿದೆ ಎಂಬುದು ಸುಳ್ಳು ವದಂತಿ. ನಮ್ಮ ಪಕ್ಷ ಯಾರ ಒಳ ಜಗಳನ್ನು ನಂಬಿ ರಾಜಕಾರಣ ಮಾಡುತ್ತಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ.

ಶಿವಮೊಗ್ಗದಲ್ಲಿ ಇಂದು(ಜನವರಿ.31) ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಶಾಸಕ ಜನಾರ್ಧನ ರೆಡ್ಡಿ ವಿರುದ್ಧ ಶ್ರೀರಾಮುಲು ಅವರು ಮುನಿಸಿಕೊಂಡು ಬಿಜೆಪಿ ನಾಯಕರ ವಿರುದ್ಧ ಅಸಮಾಧಾನಗೊಂಡಿದ್ದಾರೆ. ಹೀಗಾಗಿ ಬಿಜೆಪಿಯೂ ತಮ್ಮಲ್ಲಿರುವ ಒಳ ಜಗಳನ್ನು ಮುಚ್ಚಿಕೊಳ್ಳಲು, ಶ್ರೀರಾಮುಲು ಅವರನ್ನು ಕಾಂಗ್ರೆಸ್‌ ಸೆಳೆಯುವ ಪ್ರಯತ್ನ ಮಾಡುತ್ತಿದೆ ಎಂದು ಆರೋಪಿಸುತ್ತಿದ್ದಾರೆ ಎಂದರು.

ರಾಜ್ಯದಲ್ಲಿ ನಮ್ಮ ಕಾಂಗ್ರೆಸ್‌ ಪಕ್ಷ ಅಧಿಕಾರಕ್ಕೆ ಬಂದಿರುವುದು ಆಡಳಿತ ನಡೆಸಲೇ ಹೊರತು, ಯಾರ ಒಳ ಜಗಳನ್ನು ನಂಬಿಕೊಂಡು ರಾಜಕಾರಣ ನಡೆಸುತ್ತಿಲ್ಲ. ನಾವು ಸಾರ್ವಜನಿಕರ ನಂಬಿಕೆಯನ್ನು ಉಳಿಸಿಕೊಂಡು ಹೋಗಲು ರಾಜಕೀಯ ಮಾಡುತ್ತಿರುವುದು ಎಂದು ಹೇಳಿದರು.

ಅರ್ಚನ ಎಸ್‌ ಎಸ್

Recent Posts

ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಬಿದ್ದ ಮರ: ಕೂದಲೆಳೆಯಲ್ಲಿ ಪಾರಾದ ಚಾಲಕ

ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಮರ ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಚಾಲಕ ಪಾರಾಗಿದ್ದಾನೆ. ಕೂಡುಮಂಗಳೂರು ದೊಡ್ಡಮ್ಮತಾಯಿ…

4 hours ago

ಓದುಗರ ಪತ್ರ: ಗೊಬ್ಬಳಿ ಮರ ಬಸ್‌ನಿಲ್ದಾಣದ ಆವರಣ ಸ್ವಚ್ಛವಾಗಿರಲಿ

ಸಾಂಸ್ಕೃತಿಕ ನಗರಿ ಮೈಸೂರಿನ ದಕ್ಷಿಣ ಭಾಗದ ಜೆ. ಪಿ. ನಗರದ ಅಕ್ಕಮಹಾದೇವಿ ರಸ್ತೆಯ ಗೊಬ್ಬಳಿ ಮರ ಬಸ್ ನಿಲ್ದಾಣವು ಪ್ರತಿನಿತ್ಯ…

4 hours ago

ಓದುಗರ ಪತ್ರ: ಮಹಾತ್ಮರ ರಾಮರಾಜ್ಯದ ಕಲ್ಪನೆಯ ಸಂದೇಶ ಸಾಕಾರಗೊಳ್ಳಲಿ

ಗಾಂಧಿ ಜಯಂತಿಯಾದ ಅ.೨ರಂದು ದೇಶಾದ್ಯಂತ ರಾಷ್ಟ್ರಪಿತ ಮಹಾತ್ಮ ಗಾಂಧಿಯವರನ್ನು ನೆನೆಯಲಾಗುತ್ತದೆ. ಬಾಪು ಎಂದೇ ಕರೆಯಲ್ಪಡುವ ಗಾಂಧೀಜಿ ಈ ದೇಶದ ಸ್ವಾತಂತ್ರಕ್ಕಾಗಿ…

4 hours ago

ಓದುಗರ ಪತ್ರ: ಇಬ್ಬರು ಮಹಾನ್ ನಾಯಕರ ಆಶಯ ಮುಂದಿನ ಪೀಳಿಗೆಗೆ ದಾಟಿಸಲಿ

ದೇಶದ ಇತಿಹಾಸದಲ್ಲಿ ಅಕ್ಟೋಬರ್ ೨ಕ್ಕೆ ವಿಶೇಷವಾದ ಸ್ಥಾನವಿದೆ. ಈ ದಿನ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಜೊತೆಗೆ, ಭಾರತದ ಮಾಜಿ…

4 hours ago

ಪರಿಸರ ಸ್ನೇಹಿ ಸಮಾಜ ಮನೆಯಿಂದಲೇ ಆರಂಭವಾಗಲಿ

ಲೀಲಾ ಶಿವಕುಮಾರ್, ಪರಿಸರವಾದಿ ಸ್ವಚ್ಛ ನಗರಿ ಮೈಸೂರು ಮಾತ್ರವಲ್ಲ, ಇಡೀ ದೇಶವೇ ಇಂದು ಕಸದ ಸಮಸ್ಯೆಯನ್ನು ಎದುರಿಸುತ್ತಿದೆ. ರಸ್ತೆ, ಬಡಾವಣೆ,…

4 hours ago

ಮತ್ತೊಮ್ಮೆ ನ್ಯಾಯಾಲಯದತ್ತ ಮಲ್ಟಿಪ್ಲೆಕ್ಸ್ ಸಂಘಟನೆ, ಇತರರು

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಚಿತ್ರಮಂದಿರಗಳಲ್ಲಿ ಪ್ರವೇಶ ದರ ಗರಿಷ್ಟ ಮೊತ್ತ ೨೦೦ ರೂ. ಅಸಾಧ್ಯವೇ? ಕನ್ನಡ ಚಿತ್ರರಂಗ ಮತ್ತು…

4 hours ago